ತೆಂಗಿನಕಾಯಿ ಗಣಪತಿ ತಯಾರಿಕೆ ತರಬೇತಿ
Team Udayavani, Sep 1, 2018, 5:25 PM IST
ಧಾರವಾಡ: ಇಲ್ಲಿಯ ಸತ್ತೂರು ವೀರಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಪರಿಸರ ಸ್ನೇಹಿ ತೆಂಗಿನಕಾಯಿ ಗಣಪತಿ ಮೂರ್ತಿ ತಯಾರಿಕಾ ಕೌಶಲಾಭಿವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗಿತ್ತು.
ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಆಗಮಿಸಿ ಪರಿಸರ ಸ್ನೇಹಿ ಗಣಪತಿ ಮೂರ್ತಿಯನ್ನು ಬಿಡುಗಡೆಗೊಳಿಸಿದರು. ನಂತರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮನೆ ಮನೆಗಳಲ್ಲಿ ಗಣೇಶ ಹಬ್ಬಕ್ಕೆ ಪೂಜಿಸುವ ಗಣೇಶ ಮೂರ್ತಿ ಹೆಚ್ಚಿನದಾಗಿ ಪಿಒಪಿಯಿಂದ ಮಾಡಿದ್ದಾಗಿದ್ದು, ಇದರಿಂದ ಪರಿಸರಕ್ಕೆ ಹಾನಿ ಇದೆ. ಇದಕ್ಕೆ ಪರ್ಯಾಯ ವ್ಯವಸ್ಥೆಯಾಗಿ ಪರಿಸರಸ್ನೇಹಿ ತೆಂಗಿನಕಾಯಿ ಗಣಪತಿ ಮೂರ್ತಿ ಪೂಜಿಸುವುದು ಒಳಿತು ಎಂದರು.
ಮಾರುಕಟ್ಟೆಯಲ್ಲಿಯೂ ನಾನಾ ರೂಪದಲ್ಲಿ ಕಲಾತ್ಮಕ ಗಣೇಶನ ಮೂರ್ತಿಗಳು ಲಭ್ಯವಿವೆ. ಈ ದಿನ ಬಿಡುಗಡೆ ಮಾಡಿದ ಪರಿಸರಸ್ನೇಹಿ ತೆಂಗಿನಕಾಯಿ ಗಣಪತಿ ಕೂಡ ಕಲಾತ್ಮಕವಾಗಿದೆ. ಈ ಮೂರ್ತಿಯನ್ನು ಪೂಜಿಸಿದ ನಂತರ ಹೊಲದ ಬದುಗಳಲ್ಲಿ ನಾಟಿ ಮಾಡುವುದರ ಮೂಲಕ ತೆಂಗಿನ ಗಿಡವಾಗಿ ಕೂಡ ಬೆಳೆದು ಫಲ ಪಡೆಯಬಹುದು. ಉತ್ಸವಕ್ಕೆ ಮಾತ್ರವಲ್ಲದೇ ವರ್ಷ ಪೂರ್ತಿ ಸಂಘದ ಸದಸ್ಯರು ಗೃಹ ಕೈಗಾರಿಕೆ ಮಾಡಿ ವಿವಿಧ ಮಳಿಗೆಯಲ್ಲಿ ಮಾರಾಟ ಮಾಡಬಹುದಾಗಿದೆ ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ನಿರ್ದೇಶಕ ದಿನೇಶ ಎಂ., ಯೋಜನಾಧಿ ಕಾರಿ ಉಲ್ಲಾಸ ಮೇಸ್ತ, ತೆಂಗಿನಕಾಯಿ ಕೆತ್ತನೆಗಾರರ ಸಮಿತಿ ಅಧ್ಯಕ್ಷ ಶಾಂತಾ ಗಡಕರ ಹಾಗೂ ಸಮಿತಿಯ ಪದಾಧಿಕಾರಿಗಳು, ಕೆತ್ತನೆಗಾರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.