ನ್ಯಾಯದಾನದಲ್ಲಿ ಮಧ್ಯಸ್ಥಿಕೆ ತಂತ್ರ ಪರಿಣಾಮಕಾರಿ

ಮಧ್ಯಸ್ಥಿಕೆ ಪುನರ್‌ಮನನ ತರಬೇತಿ ಕಾರ್ಯಾಗಾರ

Team Udayavani, Mar 21, 2022, 11:25 AM IST

6

ಧಾರವಾಡ: ವ್ಯಾಜ್ಯಗಳಲ್ಲಿ ಮಧ್ಯಸ್ಥಿಕೆ ಮೂಲಕ ಪರಿಹಾರ ಎನ್ನುವುದು ಮೊದಲಿನಿಂದಲೂ ನಡೆದು ಬಂದಿದ್ದು, ಇದೀಗ ಇದು ಕಾನೂನು ಸ್ವರೂಪ ಪಡೆಯುತ್ತಿದೆ ಎಂದು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ಅಧ್ಯಕ್ಷರಾದ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಸ್‌. ಸುಜಾತಾ ಹೇಳಿದರು.

ಜಿಪಂ ಸಭಾಂಗಣದಲ್ಲಿ ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ, ರಾಜ್ಯ-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಧಾರವಾಡ-ಗದಗ ವಕೀಲರ ಸಂಘಗಳ ಆಶ್ರಯದಲ್ಲಿ ಧಾರವಾಡ, ಗದಗ ಜಿಲ್ಲೆಗಳ ಮಧ್ಯಸ್ಥಿಕೆಗಾರರಿಗೆ ಆಯೋಜಿಸಿರುವ ಮಧ್ಯಸ್ಥಿಕೆ ಪುನರ್‌ಮನನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ನ್ಯಾಯಾಲಯದಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಮಧ್ಯಸ್ಥಿಕೆಗೆ ಅರ್ಹವಿರುವ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ನ್ಯಾಯಾಧಿಧೀಶರು ಶಿಫಾರಸು ಮಾಡಬೇಕು. ಇದರಿಂದ ನ್ಯಾಯಾಲಯದ ಕೆಲಸದ ಒತ್ತಡ, ಕಕ್ಷಿದಾರರ ಸಮಯ, ಹಣದ ಉಳಿತಾಯದೊಂದಿಗೆ ಅವರಲ್ಲಿ ನ್ಯಾಯದಾನದ ಬಗ್ಗೆ ಮತ್ತಷ್ಟು ವಿಶ್ವಾಸ, ಆತ್ಮಸ್ಥೈರ್ಯ ಹೆಚ್ಚುತ್ತದೆ. ನ್ಯಾಯದಾನದ ವಿವಿಧ ಕ್ರಮಗಳಲ್ಲಿ ಮಧ್ಯಸ್ಥಿಕೆ ತಂತ್ರವು ಅತ್ಯಂತ ಪರಿಣಾಮಕಾರಿ ತಂತ್ರವಾಗಿದ್ದು, ಇದನ್ನು ಸಮರ್ಪಕವಾಗಿ ಬಳಸಿಕೊಂಡು ವ್ಯಾಜ್ಯ ಪರಿಹಾರ ಮಾಡಲು ಸಹಕರಿಸುವ ಮಧ್ಯಸ್ಥಿಕೆಗಾರರ ಪಾತ್ರ ಬಹುಮುಖ್ಯವಾಗಿದೆ ಎಂದರು.

ಹೈಕೋರ್ಟ್‌ ನ್ಯಾಯಮೂರ್ತಿ ರವಿ ವಿ. ಹೊಸಮನಿ ಮಾತನಾಡಿ, ಮಧ್ಯಸ್ಥಿಕೆ ಕೇಂದ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಮಧ್ಯಸ್ಥಿಕೆದಾರ ನ್ಯಾಯವಾದಿಗಳು ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಕಕ್ಷಿದಾರರಲ್ಲಿ ನ್ಯಾಯದಾನದ ಭರವಸೆ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲಾ ನ್ಯಾಯಾಲಯದ 2ನೇ ಅಧಿಕ ಜಿಲ್ಲಾ ನ್ಯಾಯಾಧೀಶ ಕೆ.ಸಿ.ಸದಾನಂದಸ್ವಾಮಿ, 3ನೇ ಅಧಿಕ ಜಿಲ್ಲಾ ನ್ಯಾಯಾಧೀಶ ಸಿ.ಎಂ.ಗಂಗಾಧರ, ಸಿಜೆಎಂ ಹಾಗೂ ಪ್ರಧಾನ ಹಿರಿಯ ನ್ಯಾಯಾಧೀಶ ಸಂಜಯ ಪಿ. ಗುಡಗುಡಿ, 1ನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾ ಧೀಶ ನಿತಿನ ಯಶವಂತರಾವ್‌, 2ನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಮರಿಯಪ್ಪ, 3ನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧಿಧೀಶ ಮಹೇಶ ಚಂದ್ರಕಾಂತ, 4ನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಅಮೊಲ ಹಿರೇಕೊಡಿ, ಪ್ರಧಾನ ಸಿವಿಲ್‌ ನ್ಯಾಯಾಧೀಶೆ ಲತಾ ಜೆ., 2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧಿಧೀಶ ದೊಡ್ಡಬಸವರಾಜ ಅಜ್ಜಪ್ಪ ಇನ್ನಿತರರಿದ್ದರು.

ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಕೌಟುಂಬಿಕ ನ್ಯಾಯಾಲಯ ನ್ಯಾಯಾ ಧೀಶರಾದ ಎಸ್‌.ನಾಗಶ್ರೀ ನಿರೂಪಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತಾ ಸಿ.ಎಂ ವಂದಿಸಿದರು. ಸೋಮವಾರ ಸಂಜೆ 4 ಗಂಟೆಗೆ ನಡೆಯುವ ಸಮಾರೋಪದಲ್ಲಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಸೂರಜ ಗೋವಿಂದರಾಜ ಪಾಲ್ಗೊಳ್ಳಲಿದ್ದಾರೆ.

 

ಮಧ್ಯಸ್ಥಿಕೆಯಿಂದ ನ್ಯಾಯದಾನ ಸುಲಭ ಎನ್ನುವುದು ಮನವರಿಕೆ ಆಗುವಂತೆ ಮಧ್ಯಸ್ಥಿಕೆದಾರ ನ್ಯಾಯವಾದಿಗಳು ಸಂವಹನ ನಡೆಸಬೇಕು. ನ್ಯಾಯಾಂಗದ ಕ್ರಿಯಾಶೀಲತೆಗೆ ಮಧ್ಯಸ್ಥಿಕೆ ಒಂದು ಸಾಧನವಾಗಿದೆ. ಉತ್ತಮ ತರಬೇತಿಗಳಿಂದ ಮಧ್ಯಸ್ಥಿಕೆ ಕೇಂದ್ರಗಳನ್ನು ಯಶಸ್ವಿಯಾಗಿಸಬಹುದು.

ನ್ಯಾ| ಪಿ.ಎನ್‌. ದೇಸಾಯಿ, ಹೈಕೋರ್ಟ್‌ ನ್ಯಾಯಮೂರ್ತಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.