ಸಾರಿಗೆ: ಹುಬ್ಬಳ್ಳಿ ವಿಭಾಗಕ್ಕೆ 23 ಕೋಟಿ ನಷ್ಟ
Team Udayavani, May 6, 2020, 10:19 AM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಲಾಕ್‌ಡೌನ್‌ನಿಂದ ಸಾರ್ವಜನಿಕ ಸಾರಿಗೆ ಸ್ಥಗಿತಗೊಂಡಿದ್ದರಿಂದ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ವಾಕರಸಾಸಂ ಹುಬ್ಬಳ್ಳಿ ವಿಭಾಗಕ್ಕೆ ಅಂದಾಜು 23 ಕೋಟಿ ರೂ.ಗಳಷ್ಟು ಸಾರಿಗೆ ಆದಾಯ ನಷ್ಟ ಉಂಟಾಗಿದೆ.
ಹುಬ್ಬಳ್ಳಿ ವಿಭಾಗದಲ್ಲಿ ನಾಲ್ಕು ಬಸ್ ಘಟಕಗಳಲ್ಲಿ ಒಟ್ಟು 462 ಬಸ್‌ಗಳು ಹಾಗೂ 2173 ಸಿಬ್ಬಂದಿಗಳಿದ್ದಾರೆ. ವಿಭಾಗದ ಬಸ್‌ಗಳು ಪ್ರತಿದಿನ 1.90 ಲಕ್ಷ ಕಿ.ಮೀ. ಕ್ರಮಿಸಿ ವಿವಿಧ ರಿಯಾಯಿತಿ ಪಾಸು ಪ್ರಯಾಣಿಕರು ಸೇರಿದಂತೆ 1.45 ಲಕ್ಷಗಳಷ್ಟು ಸಾರ್ವಜನಿಕ ಪ್ರಯಾಣಿಕರು ಹಾಗೂ 45 ಸಾವಿರಗಳಷ್ಟು ವಿದ್ಯಾರ್ಥಿಗಳಿಗೆ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸುವ ಮೂಲಕ ಸಂಸ್ಥೆಗೆ 45ರಿಂದ 50 ಲಕ್ಷ ರೂ. ಸಾರಿಗೆ ಆದಾಯ ಸಂಗ್ರಹಣೆ ಆಗುತ್ತಿತ್ತು.
ಮಾರ್ಚ್ 9ರ ವರೆಗೆ ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿರಲಿಲ್ಲ. ಆ ಸಮಯದಲ್ಲಿ ಆದಾಯ ಸಂಗ್ರಹಣೆ ನಿರೀಕ್ಷೆಯಂತಿತ್ತು. ನಂತರದಲ್ಲಿ ಕೋವಿಡ್ 19 ವೈರಸ್ ವ್ಯಾಪಕತೆ ಹೆಚ್ಚಾಗುತ್ತಿದ್ದಂತೆ ಪ್ರಯಾಣಿಕರ ಸಂಖ್ಯೆ ಕುಸಿಯತೊಡಗಿತು. ತತ್ಪರಿಣಾಮವಾಗಿ ಮಾ.22 ರವರೆಗೆ ಬಸ್‌ಗಳ ಸಂಖ್ಯೆಯೂ ಸಹ ದಿನದಿಂದ ದಿನಕ್ಕೆ ಕಡಿಮೆಯಾಗತೊಡಗಿತು. ಮಾ.23 ರಿಂದ ಶೂನ್ಯಕ್ಕಿಳಿಯಿತು. ಮಾರ್ಚ್ ತಿಂಗಳಲ್ಲಿ ಭಾಗಶಃ ಬಸ್ ಕಾರ್ಯಾಚರಣೆಯಾಗಿದ್ದರಿಂದ ನಿರೀಕ್ಷಿತ ಆದಾಯದಲ್ಲಿ 5.50
ಕೋಟಿ ಗಳಷ್ಟು ಕೊರತೆಯಾಗಿತ್ತು. ಆದರೆ ಏಪ್ರಿಲ್ ತಿಂಗಳಲ್ಲಿ ಯಾವುದೇ ಬಸ್ ರಸ್ತೆಗಿಳಿಯದ್ದರಿಂದ 17.50 ಕೋಟಿ ರೂ. ಆದಾಯ ನಷ್ಟ ಉಂಟಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ್ ತಿಳಿಸಿದ್ದಾರೆ. ಲಾಕ್‌ಡೌನ್ ಅವಧಿ ಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸ್ಥಗಿತಗೊಂಡಿದ್ದರೂ ಸಹ ಬಸ್‌ಗಳ ತುರ್ತು ನಿರ್ವಹಣೆ ಮತ್ತು ಸಂಸ್ಥೆಯ ಆಸ್ತಿಗಳ ರಕ್ಷಣಾ ಕಾರ್ಯಗಳನ್ನು ನಿರಂತರ ನಿರ್ವಹಿಸಲಾಗುತ್ತಿದೆ. ವಿಭಾಗೀಯ ಕಚೇರಿ ಹಾಗೂ ಘಟಕ ಪೆಟ್ರೋಲಿಂಗ್ ತಂಡದ ಅಧಿಕಾರಿಗಳು ಪ್ರತಿದಿನ ಎಲ್ಲಾ ಘಟಕಗಳು ಮತ್ತು ಪ್ರಮುಖ ಬಸ್ ನಿಲ್ದಾಣಗಳ ಗಸ್ತು ನಡೆಸುತ್ತಿದ್ದಾರೆ. ಘಟಕದಲ್ಲಿ ತುರ್ತುನಿರ್ವಹಣಾ ತಂಡದಲ್ಲಿ ಮೂರು ಪಾಳಿಯದಲ್ಲಿ ಇಬ್ಬರು-ಮೂವರಂತೆ ಚಾಲಕರು, ತಾಂತ್ರಿಕ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿ ನಿರಂತರ ಎಲ್ಲಾ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಸಾರ್ವಜನಿಕ ಸಾರಿಗೆ ಪುನರಾರಂಭಿಸಲು ಸರ್ಕಾರದ ಆದೇಶ ಬಂದ ಕೂಡಲೇ ಮಾರ್ಗಸೂಚಿ ನಿರ್ದೇಶನಗಳ ಪ್ರಕಾರ ಎಲ್ಲಾ ಮುಂಜಾಗೃತೆ ಕ್ರಮಗಳೊಂದಿಗೆ ಬಸ್‌ಗಳನ್ನು ರಸ್ತೆಗಿಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.