ವಾಯವ್ಯ ಸಾರಿಗೆಯಲ್ಲಿ 4,600 ವಲಸಿಗರ ಪ್ರಯಾಣ
Team Udayavani, May 9, 2020, 9:59 AM IST
ಹುಬ್ಬಳ್ಳಿ: ಲಾಕ್‌ಡೌನ್ ಪರಿಣಾಮ ಅಲ್ಲಲ್ಲಿ ಸಿಲುಕೊಂಡಿದ್ದ ಸುಮಾರು 4,600 ವಲಸಿಗರನ್ನು ಜಿಲ್ಲಾಡಳಿತಗಳ ನೆರವಿನೊಂದಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಅವರ ತವರು ಜಿಲ್ಲೆಗಳಿಗೆ ತಲುಪಿಸಿದ್ದು, ಕೋವಿಡ್ 19 ಸೋಂಕಿನ ಭೀತಿಯ ನಡುವೆಯೂ ಚಾಲಕ, ನಿರ್ವಾಹಕ ಹಾಗೂ ಇನ್ನಿತರ ಸಿಬ್ಬಂದಿ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ.
ರಾಜ್ಯ ಸರಕಾರದ ಸೂಚನೆ ಮೇರೆಗೆ ನಾಲ್ಕು ದಿನಗಳ ಕಾಲ ಈ ಉಚಿತ ಬಸ್ ಸೇವೆ ಅಲ್ಲಲ್ಲಿ ಸಿಲುಕಿಕೊಂಡಿದ್ದವರಿಗೆ ವರದಾನವಾಯಿತು. ಸರಕಾರದ ಆದೇಶದಂತೆ ವಾಯವ್ಯ ಸಾರಿಗೆ ಸಂಸ್ಥೆ ತನ್ನ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಉತ್ತರ ಕನ್ನಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಿಲುಕಿದ್ದ 4,600 ಪ್ರಯಾಣಿಕರನ್ನು 387 ಬಸ್‌ಗಳ ಮೂಲಕ ತವರು ಜಿಲ್ಲೆಗಳಿಗೆ ಸುರಕ್ಷಿತವಾಗಿ ತಲುಪಿಸುವ ಕಾರ್ಯ ಮಾಡಿದೆ. ಜಿಲ್ಲಾ ಕೇಂದ್ರಗಳಿಗೆ ಆಗಮಿಸಿದ ಪ್ರಯಾಣಿಕರನ್ನು ಆಯಾ ಗ್ರಾಮಗಳಿಗೆ ತಲುಪಿಸುವ ಕೆಲಸ ಆಯಾ ವಿಭಾಗಗಳ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 600 ಚಾಲನಾ, ತಾಂತ್ರಿಕ ಹಾಗೂ ಅಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ನಾಲ್ಕು ದಿನಗಳ ಕಾರ್ಯನಿರ್ವಹಿಸಿದ್ದಾರೆ.
ಹೊರಗಡೆಯಿಂದ ಬಂದಿದ್ದೇ ಹೆಚ್ಚು: ಸಂಸ್ಥೆ ವ್ಯಾಪ್ತಿಯ ಆರು ಜಿಲ್ಲೆಗಳಿಂದ ಹೊರ ಜಿಲ್ಲೆಗಳಿಗೆ ಹೋದ ವಲಸಿಗರಿಗಿಂತ ಬಂದವರೇ ಹೆಚ್ಚು. ರಾಜ್ಯದ ವಿವಿಧ ಜಿಲ್ಲೆಗಳಿಂದ 6,481 ಜನರು ಆಗಮಿಸಿದ್ದಾರೆ.
ಬಸ್ ನಿಲ್ದಾಣಗಳಲ್ಲಿ ಸ್ಥಾಪಿಸಿದ್ದ ಆರೋಗ್ಯ ತಪಾಸಣಾ ಕೇಂದ್ರಗಳಲ್ಲಿ ವೈದ್ಯಕೀಯ ಸಿಬ್ಬಂದಿ ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಿ ಥರ್ಮಲ್ ಸ್ಕ್ರಿನಿಂಗ್‌ಗೆ ಒಳಪಡಿಸಿದ್ದಾರೆ. ಬಂದವರನ್ನೆಲ್ಲಾ ಹೋಂ ಕ್ವಾರಂಟೈನ್‌ಗೆ ಒಳಪಡಿಸಿ ಆರೋಗ್ಯ ಸಲಹೆ ನೀಡುವ ಕೆಲಸ ಮಾಡಿದ್ದಾರೆ. ಆಗಮಿಸಿದ ಇಷ್ಟು ಜನರಲ್ಲಿ ಶೇ.70 ಜನ ಬೆಂಗಳೂರು ಹಾಗೂ ಮಂಗಳೂರು ಜಿಲ್ಲೆಗಳಿಗೆ ದುಡಿಯಲು ಹೋಗಿದ್ದ ಕಾರ್ಮಿಕರೇ ಹೆಚ್ಚು. ಬೆಂಗಳೂರಿನಲ್ಲಿ ನೆಲೆಸಿದ್ದ ವಲಸಿಗರಿಗೆ ಸಂಸ್ಥೆಯ ವಿವಿಧ ವಿಭಾಗಗಳಿಂದ ಬಸ್‌ಗಳನ್ನು ಕಳುಹಿಸಿ ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿತ್ತು.
ಹು-ಧಾ ಜನರೇ ಹೆಚ್ಚು: ಸಂಸ್ಥೆಯ ವ್ಯಾಪ್ತಿಯ ಆರು ಜಿಲ್ಲೆಗಳ ಪೈಕಿ ಬೇರೆ ಜಿಲ್ಲೆಗಳಿಗೆ ಪ್ರಯಾಣ ಮಾಡಿದವರಲ್ಲಿ ಹುಬ್ಬಳ್ಳಿ-ಧಾರವಾಡದವರೇ ಹೆಚ್ಚು. ಕಳೆದ ನಾಲ್ಕು ದಿನಗಳಿಂದ 136 ಬಸ್ ಗಳ ಮೂಲಕ ಬರೋಬ್ಬರಿ 2,950 ಜನ ವಿವಿಧ ಜಿಲ್ಲೆಗಳಿಗೆ ಪ್ರಯಾಣ ಮಾಡಿದ್ದು, ಬಹುತೇಕರು ಬೆಂಗಳೂರು, ಮಂಗಳೂರು ಹಾಗೂ ಕಲಬುರಗಿ ಜಿಲ್ಲೆಗಳಿಗೆ ತೆರಳಿದ್ದಾರೆ. ಇಲ್ಲಿಂದಲೇ ಗುಜರಾತನ ಅಹ್ಮದಾಬಾದ್‌ಗೂ ಕೂಡ ಬಸ್ ಮೂಲಕ ತೆರಳಿದ್ದಾರೆ. ಕೋವಿಡ್ 19 ಸೋಂಕು ಪ್ರಕರಣಗಳು ಹೆಚ್ಚಿರುವ ರಾಜ್ಯಗಳಿಗೆ ತೆರಳಿದ್ದ ಚಾಲನಾ ಸಿಬ್ಬಂದಿ ಸ್ವಯಂ ಕ್ವಾರಂಟೈನ್ ಆಗಿ ಸಂಸ್ಥೆಯ ಪ್ರತ್ಯೇಕ ಸ್ಥಳದಲ್ಲಿ ದಿನಗಳನ್ನು ಕಳೆದು ಪ್ರಯೋಗಾಲಯದ ವರದಿ ನೆಗೆಟಿವ್ ಬಂದ ನಂತರ ತಮ್ಮ ಮನೆಗಳಿಗೆ ತೆರಳಿದ್ದಾರೆ. ಬಂದವರಿಗೆ ಉಪಾಹಾರ, ಊಟ, ಬಿಸ್ಕೀಟ್, ನೀರು, ಮಾಸ್ಕ್ ನೀಡಿ ವಿವಿಧ ಸಂಘ-ಸಂಸ್ಥೆ ಮಾನವೀಯತೆ ತೋರಿದವು.
ಸರಕಾರದ ಆದೇಶದ ಮೇರೆಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಮಾರ್ಗದರ್ಶನದ ಮೇರೆಗೆ ವಲಸಿಗರನ್ನು ಅವರ ಜಿಲ್ಲೆಗಳಿಗೆ ಸುರಕ್ಷಿತವಾಗಿ ತಲುಪಿಸುವ ಕಾರ್ಯ ಮಾಡಲಾಗಿದೆ. ಸಂಸ್ಥೆಯ ಕಾರ್ಯ ತುರ್ತು ಸೇವೆಯಡಿ ಬರುವುದರಿಂದ ಸೋಂಕಿನ ಭೀತಿಯ ನಡುವೆ ಸಿಬ್ಬಂದಿ ಅಧಿಕಾರಿಗಳು ನಿಯೋಜಿಸಿದ ಕರ್ತವ್ಯ ಹಾಗೂ ಜಿಲ್ಲೆಗಳಿಗೆ ತೆರಳಿ ಪ್ರಯಾಣಿಕರನ್ನು ತಲುಪಿಸುವ ಕೆಲಸ ಮಾಡಿದ್ದಾರೆ.-ಸಂತೋಷಕುಮಾರ, ಮುಖ್ಯ ಸಂಚಾರ ವ್ಯವಸ್ಥಾಪಕ
-ಹೇಮರಡ್ಡಿ ಸೈದಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.