ಸಮಾಜಗಳ ನಡುವೆ ಕಂದಕ ಸೃಷ್ಟಿ ಯತ್ನ: ಜಾಗೃತಿಗೆ ಸಲಹೆ


Team Udayavani, Nov 10, 2017, 12:07 PM IST

h5-brahmana.jpg

ಹುಬ್ಬಳ್ಳಿ: ಸಮಾಜ-ಸಮಾಜಗಳ ನಡುವೆ ಕಂದಕ ಸೃಷ್ಟಿಸುವ ಕೆಲಸಗಳು ನಡೆಯುತ್ತಿದ್ದು, ಈ ಕುರಿತು ಎಲ್ಲರೂ ಜಾಗೃತರಾಗುವುದು ಅವಶ್ಯ ಎಂದು ಬ್ರಾಹ್ಮಣ ಸಮಾಜದ ಮುಖಂಡ ಎಂ.ಬಿ. ನಾತು ಹೇಳಿದರು. 

ಗೋಕುಲ ರಸ್ತೆ ಡಾ| ಕೆ.ಎಸ್‌. ಶರ್ಮಾ ಸಭಾಭವನದಲ್ಲಿ ಶಿವ ಚಿದಂಬರ ಚೈತನ್ಯ ಸೇವಾ ಸಮಿತಿ ಆಶ್ರಯದಲ್ಲಿ ಗುರುವಾರ ನಡೆದ ಶ್ರೀ ಚಿದಂಬರ ಜನ್ಮೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಇಂದು ಸಮಾಜದಲ್ಲಿ ಕೆಲವರು ಅದು ಬೇರೆ, ಇದು ಬೇರೆ ಎಂದು ಹೇಳುವ ಮೂಲಕ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಇಂತಹದೆಲ್ಲವನ್ನು ಬ್ರಾಹ್ಮಣ ಸಮಾಜ ಮೆಟ್ಟಿ ನಿಲ್ಲಬೇಕು ಎಂದರು. ಪಾಲಿಕೆ ಸದಸ್ಯ ದೀಪಕ ಚಿಂಚೋರೆ ಮಾತನಾಡಿ, ವೇದ ಮಂತ್ರಘೋಷ ನೀಡಿರುವ ಬ್ರಾಹ್ಮಣರು ಇದುವರೆಗೂ ನಮಗೂ ಮೀಸಲಾತಿ ನೀಡಿ ಎಂದು ಕೇಳಿಲ್ಲ.

ಇನ್ನುಳಿದ ಸಮಾಜದವರು ನಮಗೆ ಮೀಸಲಾತಿ ನೀಡಿ ಎಂದು ಹೋರಾಟ ನಡೆಸಿರುವುದನ್ನು ನಾವೆಲ್ಲರೂ ನೋಡುತ್ತೇವೆ. ಆದರೆ ವಿಪ್ರ ಸಮಾಜ ಮಾತ್ರ ಅಂತಹ ಯಾವುದೇ ಕೆಲಸಕ್ಕೆ ಮುಂದಾಗದೆ ಇರುವುದು ಶ್ಲಾಘನೀಯ.

ಈ ಬಾರಿ ಪಾಲಿಕೆ ಸದಸ್ಯನಾಗಿ ಆಗಮಿಸಿರುವ ನಾನು ಮುಂದಿನ ಬಾರಿ ಶಾಸಕನಾಗಿ ಬರುವಂತೆ ನೀವೆಲ್ಲರೂ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು. ನೀತಿನ ಶರ್ಮಾ ಮಾತನಾಡಿ, ಸಂಸ್ಕೃತ ಭಾಷೆ, ವೇದಗಳನ್ನು ಉಳಿಸಿ-ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ಇಂದು ಸಂಸ್ಕೃತ ಭಾಷೆ ಬಲ್ಲವರಿಗೆ ವೇದದ ಮಾಹಿತಿ ಇರುತ್ತದೆ. ಇಲ್ಲವಾದಲ್ಲಿ ಸಮಸ್ಯೆಯಾಗಲಿದೆ ಎಂದರು. ಇದಕ್ಕೂ ಪೂರ್ವದಲ್ಲಿ ಶ್ರೀ ಚಿದಂಬರ ತೊಟ್ಟಿಲೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಹಲವರನ್ನು ಸನ್ಮಾನಿಸಲಾಯಿತು.

ಅಗಡಿ ಶ್ರೀ ಕ್ಷೇತ್ರ ಆನಂದವನದ ಶ್ರೀ ಗುರುದತ್ತಮೂರ್ತಿ ಚಕ್ರವರ್ತಿಗಳು ಸಾನ್ನಿಧ್ಯ ವಹಿಸಿದ್ದರು. ಡಾ| ಬಿ.ಆರ್‌. ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ನಟ ಸುನೀಲ ಪುರಾಣಿಕ, ಉಮೇಶ ಚಕ್ರವರ್ತಿ, ಅರವಿಂದ ಕುಲಕರ್ಣಿ, ಎಂ.ಸಿ. ಕುಲಕರ್ಣಿ, ವಿ. ವೆಂಕಣ್ಣ ಭಟ್‌, ಎಚ್‌.ಎಲ್‌. ಕುಲಕರ್ಣಿ, ಚಿದಂಬರ ಕುಲಕರ್ಣಿ ಇತರರಿದ್ದರು.  

ಟಾಪ್ ನ್ಯೂಸ್

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.