ಉದ್ಯಮಬಾಗದಲ್ಲಿ ಅನಧಿಕೃತ ಪಾರ್ಕಿಂಗ್‌ನಿಂದ ತೊಂದರೆ
Team Udayavani, Jul 15, 2018, 4:42 PM IST
ಬೆಳಗಾವಿ: ನಗರದ ಮೂರನೇ ರೈಲ್ವೆ ಗೇಟ್‌ದಿಂದ ಪೀರನವಾಡಿ ಕ್ರಾಸ್‌ವರೆಗೆ ಹಲವಾರು ವಾಹನಗಳು ಅನಧಿಕೃತ ಪಾರ್ಕಿಂಗ್ ಮಾಡುತ್ತಿದ್ದು ಇದರಿಂದ ಬಹಳ ತೊಂದರೆಯಾಗುತ್ತಿದೆ ಎಂದು ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ದೂರಿದ್ದಾರೆ. ರಸ್ತೆಗಳ ಮೇಲೆ ವಾಹನಗಳ ಅನಧಿಕೃತ ನಿಲುಗಡೆ ಸಂಬಂಧ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸಾಕಷ್ಟು ಸಲ ಮನವಿ ಮಾಡಿಕೊಂಡು ಇದನ್ನು ತೆರವುಗೊಳಿಸಬೇಕು ಎಂದು ಒತ್ತಾಯ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಉದ್ಯಮಬಾಗ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಗಳ ಎರಡೂ ಬದಿಗೆ ಹಲವಾರು ವಾಹನಗಳು ಅನಧಿಕೃತವಾಗಿ ನಿಲುಗಡೆ ಮಾಡಲಾಗುತ್ತಿದೆ. ಬೆಮ್ಕೋ ಕೈಗಾರಿಕೆಯ ಬಳಿ ಕ್ರೇನ್ ಮಾಲೀಕರು ಮಖ್ಯ ರಸ್ತೆಯ ಮೇಲೆ ನಿಲುಗಡೆ ಮಾಡುತ್ತಿರುವುದರಿಂದ ಈ ಮಾರ್ಗದಲ್ಲಿ ಸಂಚಾರ ದಟ್ಟಣೆಯಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅದೇ ರೀತಿ ಇನ್ನೊಂದು ಕಡೆ ದ್ವಿಚಕ್ರ ವಾಹನ ಹಾಗೂ ಕಾರುಗಳ ಪಾರ್ಕಿಂಗ್ ಮಾಡಲಾಗುತ್ತಿದ್ದು ಇಲ್ಲಿಯೂ ಸಹ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಉಮೇಶ ಶರ್ಮಾ ದೂರಿದರು.
ರಸ್ತೆಗಳ ಮೇಲೆ ಮನಸ್ಸಿಗೆ ಬಂದಂತೆ ವಾಹನಗಳ ನಿಲುಗಡೆ ಮಾಡಲಾಗುತ್ತಿದ್ದರೆ ಫುಟ್‌ಪಾತ್‌ಗಳನ್ನು ಬೀದಿ ವ್ಯಾಪಾರಿಗಳು ಅಕ್ರಮಿಸಿಕೊಂಡಿದ್ದಾರೆ. ಉದ್ಯಮಬಾಗದ ಅನೇಕ ಕೈಗಾರಿಕೆಗಳ ಮಾಲೀಕರು ಹಾಗೂ ಕಾರ್ಮಿಕರು ಮೇಲಿಂದ ಮೇಲೆ ಪಾರ್ಕಿಂಗ್ ಮತ್ತು ಸಂಚಾರ ದಟ್ಟಣೆ ಬಗ್ಗೆ ದೂರು ಸಲ್ಲಿಸುತ್ತಲೇ ಇದ್ದಾರೆ. ಆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪ ಮಾಡಿದರು. ಇದಲ್ಲದೆ ಮೂರನೇ ಗೇಟ್‌ದಿಂದ ಪೀರನವಾಡಿವರೆಗೆ ಇನ್ನೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಆದರೆ ವರ್ಷದ ಹಿಂದಷ್ಟೆ ಮಾಡಿರುವ ರಸ್ತೆಗಳು ಈಗಾಗಲೇ ಹಾಳಾಗಿವೆ. ಎಲ್ಲಿಯೂ ಗುಣಮಟ್ಟ ಕಾಯ್ದುಕೊಂಡಿಲ್ಲ. ಸಾರ್ವಜನಿಕರ ತೆರಿಗೆ ಹಣ ದುರುಪಯೋಗವಾಗುತ್ತಿದೆ. ಆದ್ದರಿಂದ ಈ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ ಅನಧಿಕೃತ ವಾಹನಗಳ ಪಾರ್ಕಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.