15ರಿಂದ ಕ್ಷಯ ಪತ್ತೆ-ಚಿಕಿತ್ಸಾ ಆಂದೋಲನ
•ರೋಗಿಗಳಿಗೆ ಪೌಷ್ಟಿಕ ಆಹಾರಕ್ಕೆ ಮಾಸಿಕ 500 ರೂ.•ಖಾಸಗಿ ವೈದ್ಯರಲ್ಲಿ ಚಿಕಿತ್ಸೆ ಪಡೆದರೂ ನೆರವು
Team Udayavani, Jul 2, 2019, 1:55 PM IST
ಧಾರವಾಡ: ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯಲ್ಲಿ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಧಾರವಾಡ: ಜಿಲ್ಲೆಯಲ್ಲಿ ಜು. 15ರಿಂದ 27ರ ವರೆಗೆ ಉಚಿತವಾಗಿ ಸಕ್ರಿಯ ಕ್ಷಯರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಹೇಳಿದರು.
ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಮನ್ವಯ ಸಮಿತಿ ಸಭೆ ಜರುಗಿಸಿ ಅವರು ಮಾತನಾಡಿದರು. ನಿಕ್ಷಮ ಪೋಷಣೆ ಯೋಜನೆಯಡಿ ಕ್ಷಯರೋಗಿಗಳು ಪೌಷ್ಟಿಕ ಆಹಾರ ಪಡೆಯಲು ಅನುಕೂಲವಾಗುವಂತೆ ಪ್ರತಿ ತಿಂಗಳು 500 ರೂ. ನೆರವನ್ನು ಚಿಕಿತ್ಸೆ ಮುಗಿಯುವವರೆಗೆ ನೀಡಲಾಗುತ್ತದೆ. ಅಲ್ಲದೆ ಖಾಸಗಿ ವೈದ್ಯರು ಕ್ಷಯ ರೋಗಿ ಕುರಿತು ಆರೋಗ್ಯ ಇಲಾಖೆಗೆ ವರದಿ ನೀಡಿದರೆ 500 ರೂ. ಹಾಗೂ ಚಿಕಿತ್ಸೆ ಪೂರ್ಣಗೊಳಿಸಿದರೆ 500 ರೂ.ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ತನುಜಾ ಕೆ.ಎನ್. ಮಾತನಾಡಿ, 2018ರ ಜನವರಿಯಿಂದ ಡಿಸೆಂಬರ್‌ವರೆಗೆ ಜಿಲ್ಲೆಯಲ್ಲಿ 3412 ಕ್ಷಯ ರೋಗಿಗಳನ್ನು ಪತ್ತೆ ಮಾಡಲಾಗಿದೆ. ಅದರಲ್ಲಿ 2686 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, ಉಳಿದವರು ಬೇರೆ ಜಿಲ್ಲೆಗಳಿಂದ ವಲಸೆ ಹಾಗೂ ಇತರೆ ಕಾರಣಗಳಿಂದ ಬಂದಿದ್ದರಿಂದ ಪ್ರಾಥಮಿಕ ಚಿಕಿತ್ಸೆ, ಉಚಿತ ಔಷಧ ನೀಡಿ ತಮ್ಮ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
2019ರ ಜನವರಿಯಿಂದ ಜೂನ್ ಅಂತ್ಯದವರೆಗೆ ಹೊಸದಾಗಿ 1289 ಕ್ಷಯ ರೋಗಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 1154 ಜನರಿಗೆ ಚಿಕಿತ್ಸೆ, ಔಷಧಿ ನೀಡಲಾಗುತ್ತಿದೆ. ಉಳಿದವರನ್ನು ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡಲು ಕ್ರಮ ಜರುಗಿಸಲಾಗಿದೆ ಎಂದು ವಿವರಿಸಿದರು.
ಪ್ರಸಕ್ತ ಅಭಿಯಾನದಲ್ಲಿ ಸುಮಾರು 3,24,233 ಜನರನ್ನು ಕ್ಷಯ ರೋಗ ತಪಾಸಣೆಗೆ ಒಳಪಡಿಸುವ ಗುರಿ ಹೊಂದಲಾಗಿದೆ. ಪ್ರತಿ ತಂಡಕ್ಕೆ ಇಬ್ಬರಂತೆ ಒಟ್ಟು 239 ಆರೋಗ್ಯ ಕಾರ್ಯಕರ್ತರ ತಂಡಗಳನ್ನು ರಚಿಸಲಾಗಿದೆ. ಅವರು ಕೊಳಚೆ ಪ್ರದೇಶ, ಜನವಸತಿ, ಕೈಗಾರಿಕಾ ವಲಯ ಹಾಗೂ ದುರ್ಬಲ ವರ್ಗದ ಜನವಸತಿ ಪ್ರದೇಶಗಳು ಸೇರಿದಂತೆ ವಿವಿಧೆಡೆ ಭೇಟಿ ನೀಡಿ, ಕ್ಷಯ ರೋಗದ ಬಗ್ಗೆ ಜನಜಾಗೃತಿ ಮಾಡಿ ಚಿಕಿತ್ಸೆ ನೀಡಿ, ಔಷಧಿ ವಿತರಿಸಲಿದ್ದಾರೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಜೇಂದ್ರ ದೊಡ್ಡಮನಿ, ಆರ್‌ಸಿಎಚ್ ಡಾ| ಪುಷ್ಪಾ ಎಚ್.ಆರ್., ಔಷಧ ನಿಯಂತ್ರಣಾಧಿಕಾರಿ ಅಜಯ ಮುದಗಲ್, ಜಿಲ್ಲಾಸ್ಪತ್ರೆಯ ಡಾ| ಸಂಗಪ್ಪ ಗಾಬಿ, ಡಿಡಿಪಿಐ ಗಜಾನನ ಮನ್ನಿಕೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಬಸವರಾಜ ವರವಟ್ಟಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಶಶಿ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಸುಜಾತಾ ಹಸವಿಮಠ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ| ಶಿವಕುಮಾರ ಮಾನಕರ, ಕುಟುಂಬ ಕಲ್ಯಾಣಾಧಿಕಾರಿ ಡಾ| ಎಸ್.ಬಿ. ನಿಂಬಣ್ಣವರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.