ಹುಬ್ಬಳ್ಳಿ: ಕೋವಿಡ್ ಸೋಂಕಿನಿಂದ ಗುಣಮುಖರಾದ ಇಬ್ಬರು ಬಿಡುಗಡೆ
Team Udayavani, May 2, 2020, 5:46 PM IST
ಹುಬ್ಬಳ್ಳಿ: ಕೋವಿಡ್-19 ಸೋಂಕಿನಿಂದ ಗುಣಮುಖರಾಗಿರುವ ಇಬ್ಬರು ಮಕ್ಕಳನ್ನು ಇಲ್ಲಿನ ಕಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದ 3.6 ವರ್ಷದ ಗಂಡು ಮಗು (ಪಿ- 234) ಹಾಗೂ 07 ವರ್ಷದ ಬಾಲಕಿ (ಪಿ-235 ) ಸದ್ಯ ಗುಣಮುಖರಾಗಿದ್ದು, 24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರು ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ನೆಗೆಟಿವ್ ವರದಿ ಬಂದಿದೆ.
ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನೂ ಕೂಡ ವೈದ್ಯರು ದೃಢಪಡಿಸಿದ್ದರಿಂದ ಈ ಇಬ್ಬರೂ ಮಕ್ಕಳನ್ನು ಬಿಡುಗಡೆ ಮಾಡಲಾಗಿದೆ. ಈ ಮಕ್ಕಳ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದ ಇವರ ತಾಯಿಗೆ ಕೋವಿಡ್ ತಗುಲಿರಲಿಲ್ಲ. ಆದರೂ ಪರೀಕ್ಷಿಸಿ ನೆಗೆಟಿವ್ ವರದಿ ಬಂದ ನಂತರ ಮಕ್ಕಳೊಂದಿಗೆ ಕಳುಹಿಸಿಕೊಡಲಾಯಿತು.
ಜಿಲ್ಲೆಯಲ್ಲಿ ಇದುವರೆಗೆ ನಾಲ್ವರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಆರು ಜನ ಕಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.