ಉ.ಕ. ಸಮಸ್ಯೆ ನಿವಾರಣೆಗೆ ಸರ್ಕಾರಗಳ ಉದಾಸೀನ
Team Udayavani, Nov 15, 2017, 12:18 PM IST
ಧಾರವಾಡ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ನಿವಾರಣೆ ವಿಚಾರದಲ್ಲಿ ಉದಾಸೀನತೆ ತೋರುತ್ತಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ದೂರಿದರು. ನಗರದ ಹೊರವಲಯದ ನರೇಂದ್ರ ಬೈಪಾಸ್ ನಲ್ಲಿ ಮಂಗಳವಾರ ಬೆಳಗ್ಗೆ ಧಾರವಾಡದಿಂದ ಬೆಳಗಾವಿ ವರೆಗೆ ಹಮ್ಮಿಕೊಂಡಿದ್ದ ಕರ್ನಾಟಕ ವಿಕಾಸ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿವೆ. ಅಭಿವೃದ್ಧಿಯ ವಿಷಯದಲ್ಲಿ ತೀವ್ರ ಉದಾಸೀನತೆ ತೋರಿದ್ದಾರೆ. ಈ ನಿಟ್ಟಿನಲ್ಲಿ ಜೆಡಿಎಸ್‌ನಿಂದ ಸದನದ ಒಳಗೆ ಹಾಗೂ ಹೊರಗೆ ಗಂಭೀರ ಹೋರಾಟ ನಡೆಸುವ ಮೂಲಕ ಈ ಭಾಗದ ಜನತೆಗೆ ನ್ಯಾಯ ದೊರಕಿಸಿ ಕೊಡಲು ಪ್ರಯತ್ನಿಸಲಾಗುವುದು ಎಂದರು.
ಕಳೆದ ಹಲವು ದಶಕಗಳಿಂದ ತೀವ್ರ ನಿರ್ಲಕ್ಷಕ್ಕೆ ಒಳಪಟ್ಟಿರುವ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಕಡೆಗಣಿಸಿರುವ ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಅವರ ಸರ್ಕಾರ ಹಾಗೂ ರಾಜ್ಯದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ಕರ್ನಾಟಕ ವಿಕಾಸ ಯಾತ್ರೆಯ ಮೂಲಕ ರಾಜ್ಯದೆಲ್ಲೆಡೆ ಸಂಚರಿಸಿ ಸಮರ ಸಾರಲಾಗಿದೆ.
ಜನರ ಆರ್ಶೀವಾದದ ಫಲವಾಗಿ 2018ರಲ್ಲಿ ಜೆಡಿಎಸ್ ಸರ್ಕಾರ ಅಧಿ ಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ, ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಎಸ್. ಹೊರಟ್ಟಿ, ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ, ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ರಾಜಣ್ಣ ಕೊರವಿ, ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಬಿ. ಗಂಗಾಧರಮಠ, ನವಲಗುಂದ ತಾಲೂಕಾಧ್ಯಕ್ಷ ವೀರಣ್ಣ ನೀರಲಗಿ, ಮಹಾನಗರ ಪಾಲಿಕೆ ಸದಸ್ಯ ಶ್ರೀಕಾಂತ ಜಮನಾಳ ಇತರರಿದ್ದರು.
ಕೊನೆಯಲ್ಲಿ ಪೊಲೀಸರು: ವಿಕಾಸ ಯಾತ್ರೆ ನರೇಂದ್ರ ಕ್ರಾಸ್‌ನಿಂದ ಬೆಳಗಾವಿಗೆ ತೆರಳಿದ ಬಳಿಕ ಪೊಲೀಸರು ಭದ್ರತೆಗೆ ಬಂದರು. ಜೆಡಿಎಸ್ ಕಾರ್ಯಕರ್ತರು ಯಾತ್ರೆ ಕುರಿತು ಸರಿಯಾಗಿ ಮಾಹಿತಿ ನೀಡದ ಹಿನ್ನೆಲೆಯಲ್ಲಿ ತಡವಾಗಿ ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ಬಿ.ಪಿ. ಚಂದ್ರಶೇಖರ ನೇತೃತ್ವದ ತಂಡ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಮರಳಿತು.
ರಾಷ್ಟ್ರೀಯ ಹೆದ್ದಾರಿ 4ರ ನರೇಂದ್ರ ಬೈಪಾಸ್‌ನಲ್ಲಿ ವಿಕಾಸ ಯಾತ್ರೆ ಕಾರಣ ಕೆಲ ಸಮಯ ವಾಹನಗಳ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಈ ಸಂದರ್ಭದಲ್ಲಿ ಪೊಲೀಸರು ಇಲ್ಲದ ಕಾರಣ ಪಕ್ಷದ ಕಾರ್ಯಕರ್ತರೇ ರಸ್ತೆ ತೆರವಿಗೆ ಮುಂದಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
ದಕ್ಷಿಣ ಭಾರತದ ಕುಸ್ತಿ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಧಾರವಾಡದ ಹಳ್ಳಿ ಪೈಲ್ವಾನ್
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.