ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ
Team Udayavani, Jul 8, 2020, 1:27 PM IST
ಧಾರವಾಡ: ಇಲ್ಲಿಯ ಸವದತ್ತಿ ರಸ್ತೆ ಬಳಿಯ 8 ಎಕರೆ ಜಾಗದಲ್ಲಿ ನಿರ್ಮಿಸಿದ್ದ ಅನಧಿಕೃತ ಲೇಔಟ್‌ಗಳನ್ನು ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ಅವರ ನೇತೃತ್ವದಲ್ಲಿ ಮಂಗಳವಾರ ತೆರವು ಮಾಡಲಾಯಿತು.
ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದ ಪರವಾನಗಿ ಪಡೆಯದೇ ನಿವೇಶನಗಳನ್ನು ಅಭಿವೃದ್ಧಿ ಪಡಿಸಿದ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ಹುಡಾ ವತಿಯಿಂದ 2 ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ನೋಟಿಸ್ ಗೆ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ನಿವೇಶನಗಳಲ್ಲಿ ಹಾಕಿದ್ದ ಕಲ್ಲು, ರಸ್ತೆಗಳು ಹಾಗೂ ನೀರಿನ ಪೈಪ್‌ಗ್ಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸಲಾಯಿತು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹುಡಾ ಅಧ್ಯಕ್ಷ ನಾಗೇಶ ಕಲುºರ್ಗಿ, ಹು-ಧಾ ಅವಳಿನಗರದಲ್ಲಿ ಸದ್ಯ 57 ಅನಧಿಕೃತ ಲೇಔಟ್‌ಗಳನ್ನು ಗುರುತಿಸಲಾಗಿದ್ದು, ಇನ್ನೂ ನೂರಾರು ಲೇಔಟ್ ಗಳಿದ್ದು, ಅವುಗಳ ಪತ್ತೆ ಕಾರ್ಯ ಸಾಗಿದೆ. ಅನಧಿಕೃತ ಲೇಔಟ್‌ಗಳನ್ನು ಅಧಿಕೃತ ಮಾಡಿಕೊಳ್ಳಲು ಸಮಯ ನೀಡಲಾಗಿದೆ ಎಂದರು.
ಅನಧಿಕೃತ ಲೇಔಟ್‌ಗಳಿಗೆ ಬಡ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ಬಲಿಪಶು ಆಗುತ್ತಿದ್ದು, ಹೀಗಾಗಿ ಅದನ್ನು ತಡೆಯುವ ನಿಟ್ಟಿನಲ್ಲಿ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ. ತೆರವು ಕಾರ್ಯಾಚರಣೆಗೆ ಅನೇಕರು ತಡೆಯೊಡ್ಡುತ್ತಿದ್ದು, ಯಾವುದಕ್ಕೂ ಬಗ್ಗದೆ ನಿರಂತರವಾಗಿ ತೆರವು ನಡೆಸಲಾಗುವುದು. ಧಾರವಾಡದಲ್ಲಿ ಇನ್ನೂ ಒಂದು ವಾರ ಕಾಲ ಕಾರ್ಯಾಚರಣೆ ಸಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.