Union Budget 2024; ಸಮತೋಲಿತ-ಅಭಿವೃದ್ಧಿ ಪರ ಆಯ-ವ್ಯಯ: ಜಗದೀಶ ಶೆಟ್ಟರ್
Team Udayavani, Jul 23, 2024, 6:03 PM IST
ಹುಬ್ಬಳ್ಳಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಮಂಡಿಸಿರುವ 2024-25ನೇ ಸಾಲಿನ ಆಯ-ವ್ಯಯ ಸರ್ವ ವರ್ಗಗಳಿಗೂ ಸಮತೋಲನ ತೋರುವ ಹಾಗೂ ದೇಶವನ್ನು ಅಭಿವೃದ್ಧಿಯತ್ತ ತೆಗೆದುಕೊಂಡು ಹೋಗುವ ಉತ್ತಮ ಮುಂಗಡ ಪತ್ರವಾಗಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ (Jagadish Shettar) ಅಭಿಪ್ರಾಯಪಟ್ಟಿದ್ದಾರೆ.
ಬಡವರು, ರೈತರು, ಮಹಿಳೆಯರು, ಯುವಕರ ಹಿತ ಚಿಂತನೆ, ಕೈಗಾರಿಕಾ ಅಭಿವೃದ್ಧಿಗೆ ಆದ್ಯತೆಯೊಂದಿಗೆ 12 ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸುವುದರೊಂದಿಗೆ ಶಿಪ್ಪಿಂಗ್ ಉದ್ಯಮದಲ್ಲಿ ಉದ್ಯೋಗ ಸ್ಥಾಪನೆ, ಪಿಎಂ ಸ್ವನಿಧಿ ಯೋಜನೆ ಅನುಷ್ಠಾನಕ್ಕೂ ಹೆಚ್ಚಿನ ಒತ್ತು ನೀಡಲಾಗಿದೆ.
ಮುದ್ರಾ ಯೋಜನೆಯಡಿ ನೀಡುವ 10 ಲಕ್ಷ ರೂ.ಗಳವರೆಗಿನ ಸಾಲವನ್ನು 20 ಲಕ್ಷ ರೂ.ಗಳಿಗೆ ಹೆಚ್ಚಿಸಿರುವುದು, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನಾ ಹಂತ-4 ಅನುಷ್ಠಾನ, ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳ ನಿರ್ಮಾಣ, ನೌಕರರಿಗೆ ಆದಾಯ ತೆರಿಗೆಯಲ್ಲಿ ಲಾಭ ಕಲ್ಪಿಸಿರುವುದು, ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ 10 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಹೀಗೆ ವಿವಿಧ ಸಕಾರಾತ್ಮಕ ಹಾಗೂ ಅಭಿವೃದ್ಧಿ ಪರ ಅಂಶಗಳೊಂದಿಗೆ ಕೇಂದ್ರ ಆಯ-ವ್ಯಯ ವಿಕಸಿತ ಭಾರತವಾಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.