ಒಗ್ಗಟ್ಟಿದ್ದರೆ ರಾಜ್ಯಭಾರ: ಉಗ್ರಪ್ಪ
Team Udayavani, Sep 17, 2017, 11:58 AM IST
ಧಾರವಾಡ: ವಾಲ್ಮೀಕಿ ಸಮಾಜ ಪಕ್ಷ ಬೇಧ ಮರೆತು ಒಗ್ಗಟ್ಟಿನಿಂದ ಜಾಗೃತರಾದರೆ ಮುಂದಿನ ಸರ್ಕಾರದಲ್ಲಿ ಶೇ.50ರಷ್ಟು ಸಮಾಜದ ನಾಯಕರು ರಾಜ್ಯಭಾರ ನಡೆಸಬಹುದು ಎಂದು ವಿಪ ಸದಸ್ಯ ವಿ.ಎಸ್. ಉಗ್ರಪ್ಪ ಹೇಳಿದರು. ನಗರದಲ್ಲಿ ನಡೆದ ಆದಿಕವಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸಹಕಾರ ಸಚಿವ ರಮೇಶ ಜಾರಕಿಹೊಳಿ ಮಾತನಾಡಿ, ರಾಯಾಪುರ ಇಸ್ಕಾನ್ ಮಂದಿರದ ಹಿಂಬದಿಯ ವಾಲ್ಮೀಕಿ ಭವನ ನಿರ್ಮಾಣಕ್ಕೆ ಅಡ್ಡಿಯಾಗಿರುವ ತೊಂದರೆ ನಿವಾರಿಸಿ ಭವನ ನಿರ್ಮಾಣ ಮಾಡುವ ಕಾರ್ಯ ಹಾಗೂ ವಾಲ್ಮೀಕಿ ಪೀಠ ಸ್ಥಾಪನೆ ಮಾಡುವ ಕುರಿತು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚಿಸಲಾಗುವುದು ಎಂದರು. ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸದ ಬಿ.ವಿ. ನಾಯಕ, ಸಮಾಜದ ಜಿಲ್ಲಾಧ್ಯಕ್ಷ ಸುರೇಶ ತಳವಾರ ಇತರರಿದ್ದರು.
ಇನ್ನೂ ತಡವೇಕೆ..?
ಹುಬ್ಬಳ್ಳಿ: ಜನಮನ್ನಣೆ ದೊರೆಯದೆ ಯಡಿಯೂರಪ್ಪ ಹತಾಶರಾಗಿದ್ದು, ಮುಖ್ಯಮಂತ್ರಿ, ಸಚಿವರ ವಿರುದ್ಧದ ಭ್ರಷ್ಟಾಚಾರ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳುತ್ತಲೇ ಇದ್ದಾರೆ. ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಬೇಡ ಎನ್ನುವವರು ಯಾರು ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ತಿಳಿಸಿದರು.
“ಉದಯವಾಣಿ’ ಯೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮೂವರು ಸಚಿವರ ವಿರುದ್ಧದ ಭ್ರಷ್ಟಾಚಾರ ದಾಖಲೆ ಬಿಡುಗಡೆ ಮಾಡುವೆ ಎಂದಿದ್ದರು. ಇದೀಗ ಮುಖ್ಯಮಂತ್ರಿಯವರನ್ನೂ ಸೇರಿಸಿಕೊಂಡಿದ್ದಾರೆ. ಅವರ ಬಳಿ ದಾಖಲೆ ಇದ್ದರೆ ಬಿಡುಗಡೆಗೆ ತಡವೇಕೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.