ಕಳ್ಳನಿಗೆ ಕೋವಿಡ್ ಶಂಕೆ; ಉಪನಗರ ಠಾಣೆ ಸಿಬ್ಬಂದಿ ಕ್ವಾರಂಟೈನ್
Team Udayavani, Jul 1, 2020, 1:11 PM IST
ಹುಬ್ಬಳ್ಳಿ: ಕಳ್ಳತನ ಪ್ರಕರಣದ ಆರೋಪಿಗೆ ಕೋವಿಡ್ ಸೋಂಕು ತಗುಲಿದ ಶಂಕೆ ಹಿನ್ನೆಲೆಯಲ್ಲಿ ಉಪನಗರ ಠಾಣೆ ಕೆಲ ಸಿಬ್ಬಂದಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್‌ಗೆ ಒಳಪಡಿಸಿದ್ದು, ಉಳಿದ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ. ಠಾಣೆಗೆ ಔಷಧಿ ಸಿಂಪಡಿಸಲಾಗಿದೆ.
ಇತ್ತೀಚೆಗೆ ಕಳ್ಳತನ ಪ್ರಕರಣಗಳಲ್ಲಿ ಗದಗ-ಬೆಟಗೇರಿ ಮೂಲದ ವ್ಯಕ್ತಿಯನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿ ಕಳ್ಳತನ ಮಾಡಿದ ವಸ್ತುಗಳನ್ನು ಜಪ್ತಿ ಮಾಡಿದ್ದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡುವ ಸಂದರ್ಭದಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದು, ಪ್ರಯೋಗಾಲಯದ ವರದಿಯಲ್ಲಿ ಸೋಂಕು ತಗುಲಿದೆ ಎನ್ನಲಾಗಿದೆ. ಆರೋಪಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿ ಸಾಂಸ್ಥಿಕ ಹಾಗೂ ಹೋಂ ಕ್ವಾರಂಟೈನ್ ಮಾಡಲಾಗಿದ್ದು, ಗಂಟಲು ದ್ರವ ಪರೀಕ್ಷೆಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಆದರೆ ಔಪಚಾರಿಕವಾಗಿ ಕೆಲ ನಿಮಿಷಗಳ ಕಾಲ ಮಾತ್ರ ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಆ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿ ಇರಲಿಲ್ಲ ಎನ್ನಲಾಗಿದೆ. ಅಗತ್ಯ ಕೆಲ ಸಿಬ್ಬಂದಿ ಮಾತ್ರ ಠಾಣೆಯೊಳಗೆ ಇದ್ದುಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಂಗಳವಾರ ಬೆಳಗ್ಗಿನಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಇದೀಗ ಆರೋಪಿಯನ್ನು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು, ಆತನನ್ನು ಕಾಯುವುದು ದೊಡ್ಡ ಕೆಲಸವಾಗಿ ಮಾರ್ಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.