ಉಪ್ಪಾರ ಸಮಾಜಕ್ಕೆ ಮೀಸಲಾತಿ ಪಡೆಯಲು ಭಗೀರಥ ಯತ್ನ ಅವಶ್ಯ
Team Udayavani, Oct 30, 2017, 12:37 PM IST
ಹುಬ್ಬಳ್ಳಿ: ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಉಪ್ಪಾರ ಸಮಾಜಕ್ಕೆ ಮೀಸಲಾತಿ ಕೊಡಿಸಲು ಎಲ್ಲ ಸಮಾಜ ಬಾಂಧವರು ಭಗೀರಥ ಪ್ರಯತ್ನ ಮಾಡಬೇಕು ಎಂದು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೇಳಿದರು.
ಗೋಕುಲ ರಸ್ತೆಯ ಸಾಮ್ರಾಟ್ ಹಾಲ್ ನಲ್ಲಿ ರವಿವಾರ ಡಿ.ವೈ. ಉಪ್ಪಾರ ಶೈಕ್ಷಣಿಕ ಮತ್ತು ಸಾಮಾಜಿಕ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉಪ್ಪಾರ ಸಮಾಜಕ್ಕೆ ಮೀಸಲಾತಿ ಒದಗಿಸಲು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಆಗ್ರಹಿಸಬೇಕು ಎಂದು ಅಭಿಪ್ರಾಯಪಟ್ಟರು. ಉಪ್ಪಾರ ಸಮಾಜಕ್ಕೆ ದೊಡ್ಡ ಚರಿತ್ರೆಯಿದ್ದು, 13 ಜನ ಜಗದ್ಗುರುಗಳನ್ನು ಕಂಡ ಸಮಾಜ ನಮ್ಮದು.
ಬಾಂಧವರು ಯಾರೂ ಸಹ ಕೀಳರಿಮೆ ಹೊಂದುವ ಅವಶ್ಯಕತೆಯಿಲ್ಲ. ಸಮಾಜ ಬಾಂಧವರಿಗೆ ಯಾವುದೇ ಉಪ್ಪಾರ ಬಾಂಧವರು ಶ್ರಮದ ಮೂಲಕ ಸಾಧನೆ ಮಾಡುತ್ತಿದ್ದಾರೆ. ಸಾಧನೆ ಮೂಲಕ ಸಮಾಜಕ್ಕೆ ದೊಡ್ಡ ಶಕ್ತಿಯಾಗಿ ಬೆಳೆಯಬೇಕು.
ನಮ್ಮಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಸಮಾಜದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಇಂಥ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಬೇಕು ಎಂದು ಹೇಳಿದರು. ಪಡೆದುಕೊಳ್ಳುವುದು ಹಾಗೂ ಕಳೆದುಕೊಳ್ಳುವುದು ನಾಲಿಗೆಯ ಕಾರಣದಿಂದಲೇ.
ಆದ್ದರಿಂದಲೇ ಶರಣರು ಮಾತೆ ಮುತ್ತು, ಮಾತೆ ಮೃತ್ಯು ಎಂದು ಹೇಳಿದ್ದಾರೆ. ನಾಲಿಗೆ ನಮ್ಮ ಸಂಸ್ಕಾರವನ್ನು ತಿಳಿಸುತ್ತದೆ. ನಾಲಿಗೆ ಮೇಲೆ ಲಕ್ಷ್ಮೀ ಹಾಗೂ ಸರಸ್ವತಿ ವಾಸ ಮಾಡುತ್ತಾರೆಂದು ಹಿರಿಯರು ಹೇಳುತ್ತಿದ್ದರು. ಸದಾ ಒಳ್ಳೆಯ ಮಾತುಗಳನ್ನಾಡಬೇಕು ಎಂದರು.
ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಎಚ್. ಬಿಲ್ಲಪ್ಪ ಮತ್ತು ವಾಣಿಜ್ಯ ತೆರಿಗೆ ಇಲಾಖೆ ಅಪರ ಆಯುಕ್ತ ಜಗನ್ನಾಥ ಸಾಗರ, ಲಕ್ಷ್ಮಣ ಉಪ್ಪಾರ ಮಾತನಾಡಿದರು. ಶರಣ ಬಂಡಿ, ಶಾಂತಪ್ಪ ಗೋಟಖೀಂಡಿ, ಎನ್.ಎಸ್. ವರದರಾಜು, ಬಸವರಾಜ ಮೆಳವಂಕಿ, ಉಮಾದೇವಿ ಬಸಾಪುರ, ಈಶ್ವರ ಶಿರಕೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.