Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ
Team Udayavani, Jun 29, 2024, 4:35 PM IST
ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡಲಿ. ಹಗರಣಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತಹ ಸಿಎಂ ವರ್ತನೆ ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಬಳಿಯೇ ಹಣಕಾಸು ಖಾತೆ ಇದೆ. ಅವರ ಗಮನಕ್ಕೆ ಇಲ್ಲದೆಯೇ ಹಗರಣ ನಡೆದಿದೆಯೇ ಎಂದು ಪ್ರಶ್ನಿಸಿದರು.
ಸಿಎಂ ಬದಲಾವಣೆ, ಡಿಸಿಎಂರನ್ನು ಸಿಎಂ ಮಾಡಬೇಕೆಂಬ ವಿಚಾರ ಗಮನಿಸಿದರೆ. ರಾಜ್ಯ ಸರ್ಕಾರ ನಿಷ್ಕ್ರಿಯಗೊಂಡಿದೆ. ಲೋಕಸಭಾ ಚುನಾವಣೆ ಸೇಡು ತೀರಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಕಿತ್ತೂರು ಕರ್ನಾಟಕವನ್ನು ಕಡೆಗಣಿಸಿದ್ದರಿಂದ ಕೆಲ ಕಂಪೆನಿಗಳು ಹೊರ ರಾಜ್ಯಗಳಿಗೆ ಹೋಗುತ್ತಿವೆ. ಕಾಂಗ್ರೆಸ್ ಗೆ ಕಮಾಂಡ್ ಇಲ್ಲ ಇನ್ನೆಲ್ಲಿ ಹೈಕಮಾಂಡ್ ಎಂದು ವ್ಯಂಗ್ಯ ವಾಡಿದರು.
ಕಾಂಗ್ರೆಸ್ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಜಗಳವಾಡುತ್ತಿದ್ದಾರೆ. ಅಭಿವೃದ್ಧಿಗೆ ಹಣವಿಲ್ಲ ಎಂದು ಕಾಂಗ್ರೆಸ್ ನ ಕೆಲ ಶಾಸಕರು ನಮ್ಮ ಬಳಿಯೂ ಹೇಳಿದ್ದಾರೆ ಎಂದರು.
ಟಿ-20 ವಿಶ್ವಕಪ್ ಕ್ರಿಕೆಟ್ ಅಂತಿಮ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಕೇಂದ್ರ ಸಚಿವ ಜೋಶಿ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.