ಬಿಜೆಪಿಯಿಂದ ವಾಲ್ಮೀಕಿ ಜಯಂತಿ-ಮೆರವಣಿಗೆ
Team Udayavani, Oct 6, 2017, 12:29 PM IST
ಹುಬ್ಬಳ್ಳಿ: ಅಕ್ಷರ ಜ್ಞಾನವಿಲ್ಲದಿದ್ದರೂ ವಾಲ್ಮೀಕಿ ಮಹರ್ಷಿಗಳು ತಮ್ಮ ತಪಸ್ಸಿನ ಫಲವಾಗಿ ರಾಮಾಯಣ ಎನ್ನುವ ಮಹಾಗ್ರಂಥವನ್ನು ರಚಿಸಿ ರಾಮನ ಕಾಲದ ಪಾತ್ರಗಳಿಗೆ ಜೀವ ತುಂಬುವ ಕಾರ್ಯ ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು.
ಮಹಾನಗರ ಬಿಜೆಪಿ ವತಿಯಿಂದ ವಾಲ್ಮೀಕಿ ದಿನಾಚರಣೆ ಪ್ರಯುಕ್ತ ಗುರುವಾರ ಹಮ್ಮಿಕೊಂಡಿದ್ದ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರ ಮೆರಣಿಗೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಾಲ್ಮೀಕಿ ಮಹರ್ಷಿಗಳು ರಚಿಸಿದ ರಾಮಾಯಣ ನಾಡು, ದೇಶ ಹಾಗೂ ವಿದೇಶಗಳಲ್ಲೂ ಖ್ಯಾತಿ ಪಡೆದಿದೆ.
ಸಮಾಜದ ವ್ಯವಸ್ಥೆ ಹೇಗಿರಬೇಕೆನ್ನುವ ವಿಷಯವನ್ನು ಆಯಾ ಪಾತ್ರಗಳ ಮೂಲಕ ತಿಳಿಸಿಕೊಟ್ಟಿದ್ದಾರೆ ಎಂದರು. ದೇಶಪಾಂಡೆ ನಗರದ ಬಿಜೆಪಿ ಕಚೇರಿಯಿಂದ ಇಂದಿರಾ ಗಾಜಿನ ಮನೆಯವರೆಗೆ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರ ಮೆರವಣಿಗೆ ನಡೆಯಿತು. ಗಾಜಿನ ಮನೆಯಲ್ಲಿರುವ ವಾಲ್ಮೀಕಿ ಪುತ್ಥಳಿಗೆ ಬಿಜೆಪಿ ನಾಯಕರು ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಮುಖಂಡರಾದ ಮಹೇಶ ಟೆಂಗಿನಕಾಯಿ, ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ ಸಾವಕಾರ, ತಿಪ್ಪಣ್ಣ ಮಜ್ಜಗಿ, ರಂಗಾ ಬದ್ದಿ, ದತ್ತಮೂರ್ತಿ ಕುಲಕರ್ಣಿ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ
Mangaluru: ದಿಢೀರ್ ಆಗಿ ಕಾಣಿಸಿಕೊಂಡ ನಟ ಯಶ್
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.