ಹುಬ್ಬಳ್ಳಿಯಲ್ಲಿ ವೇದಾಂತ ಕಂಪನಿಯ ಆಸ್ಪತ್ರೆ ಉದ್ಘಾಟನೆ
Team Udayavani, Jun 12, 2021, 3:45 PM IST
ಹುಬ್ಬಳ್ಳಿ: ವೇದಾಂತ ಕಂಪನಿಯ ರಾಜ್ಯದ ಎರಡನೇ ಹಾಗೂ ಉತ್ತರ ಕರ್ನಾಟಕ ದ ಮೊದಲ ಕೋವಿಡ್ ಆಸ್ಪತ್ರೆ ಶನಿವಾರ, ಇಲ್ಲಿನ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಲೋಕಾರ್ಪಣೆಗೊಂಡಿತು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೂತನ ಆಸ್ಪತ್ರೆ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಮನವಿ ಜತೆಗೆ ನನ್ನ ವಿಶೇಷ ಮನವಿ ಮೇರೆಗೆ, ವೇದಾಂತ ಕಂಪೆನ ಚೇರ್ಮನ್ ಅನಿಲ್ ಅಗರ್ವಾಲ್ ಅವರು ಕರ್ನಾಟಕದಲ್ಲಿ ಎರಡು ಆಸ್ಪತ್ರೆ ನಿರ್ಮಾಣ ಮಾಡಿದ್ದಾರೆ. ಚಿತ್ರದುರ್ಗದಲ್ಲಿ ಆರಂಭವಾಗಿದ್ದು, ಹುಬ್ಬಳ್ಳಿಯಲ್ಲಿ ಇಂದು ಲೋಕಾರ್ಪಣೆ ಗೊಂಡಿದೆ ಎಂದರು.
ವೇದಾಂತ ಕಂಪನ ಸಿಇಒ ಎಸ್.ಮುಜಂದಾರ ಮಾತನಾಡಿ, ಕೋವಿಡ್ ಸಂಕಷ್ಟದಲ್ಲಿ ವಿವಿಧ ರೀತಿಯ ನೆರವಿಗೆ ವೇದಾಂತ ಕಂಪನಿ ಮುಂದಾಗಿದೆ. ಕೋವಿಡ್ ನಿಯಂತ್ರಣಕ್ಕೆ ದೇಶದಲ್ಲಿ 10 ಆಸ್ಪತ್ರೆಗಳನ್ನು ನಿರ್ಮಿಸುತ್ತಿದ್ದು, ಕರ್ನಾಟಕದ ಚಿತ್ರದುರ್ಗ, ಹುಬ್ಬಳಿ ಆಸ್ಪತ್ರೆಗಳು ಉದ್ಘಾಟನೆಗೊಂಡಿವೆ ಎಂದರು.
ಇದನ್ನೂ ಓದಿ:‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ
ಹುಬ್ಬಳ್ಳಿ ಆಸ್ಪತ್ರೆ 100 ಹಾಸಿಗೆಯದ್ದಾಗಿದೆ. ಇದರಲ್ಲಿ 80 ಆಕ್ಸಿಜನ್ ಯುಕ್ತ, 20 ಐಸಿಯು ಬೆಡ್ ಗಳಾಗಿವೆ ಎಂದರು.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಶಾಸಕರಾದ ಪ್ರಸಾದ ಅಬ್ಬಯ್ಯ, ಪ್ರದೀಪ ಶೆಟ್ಟರ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಇನ್ನಿತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.