ಗ್ರಾಹಕರ ಮನೆ ಬಾಗಿಲಿಗೇ ತರಕಾರಿ
Team Udayavani, Mar 28, 2020, 12:05 PM IST
ಧಾರವಾಡ: ಕಾಯಕ ಯೋಗಿ ರೈತ ಉತ್ಪಾದಕರ ಕಂಪನಿಯು ದಲ್ಲಾಳಿಗಳು-ಮಧ್ಯಸ್ಥಿಕೆಗಾರರ ಹಾವಳಿ ಇಲ್ಲದೆ ನಗರದ ಗ್ರಾಹಕರ ಮನೆ ಬಾಗಿಲಿಗೇ ಎಲ್ಲ ರೀತಿಯ ತರಕಾರಿ ಪದಾರ್ಥಗಳನ್ನು ಒಯ್ದು ಮಾರಾಟ ಮಾಡುತ್ತಿದೆ. ಅಗತ್ಯ ವಸ್ತುಗಳ ಸೇವೆಯಡಿ ಜಿಲ್ಲಾಡಳಿತ ಈ ಕಂಪನಿಗೆ ತರಕಾರಿ ಮಾರಾಟ ಮಾಡಲು ಪಾಸ್ ನೀಡಿದ್ದು, ಶುಕ್ರವಾರ ಕೆ.ಸಿ. ಪಾರ್ಕ್ ಹಿಂಭಾಗದ ಬಡಾವಣೆ, ಸನ್ಮತಿ ನಗರ, ನಾರಾಯಣಪುರ, ಸಾಧನಕೇರಿ ಪ್ರದೇಶಗಳಲ್ಲಿ ವಾಹನಗಳ ಮೂಲಕ ತಿರುಗಾಡಿ ತರಕಾರಿ ಮಾರಾಟ ಮಾಡಿದೆ. ಶನಿವಾರದಿಂದ ಪ್ರತಿದಿನ ಬೆಳಿಗ್ಗೆ 9:00 ರಿಂದ ರಾತ್ರಿ 8:00 ಗಂಟೆವರೆಗೆ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.
ಧಾರವಾಡ ನಗರದ ಬಡಾವಣೆ, ಅಪಾರ್ಟ್‌ಮೆಂಟ್ ಸೇರಿದಂತೆ ಎಲ್ಲೆಡೆ ಸಂಚರಿಸಿ, ಗ್ರಾಹಕರಿಗೆ ತರಕಾರಿ ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಮತ್ತು ತರಕಾರಿ ಅಗತ್ಯವಿದ್ದಲ್ಲಿ ಮೊ: 9164036283 (ಪ್ರಕಾಶ) 9448982344 (ಯಲ್ಲಪ್ಪ), 9964293666 (ಮಂಜುನಾಥ) ಮತ್ತು 9900147592ಗೆ ಕರೆ ಮಾಡಿ ತಿಳಿಸಬಹುದು ಎಂದು ತೋಟಗಾರಿಕ ಇಲಾಖೆ ಉಪನಿರ್ದೇಶಕ ಡಾ|ರಾಮಚಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.