ಕೋವಿಡ್ 3ನೇ ಅಲೆ ತಡೆಯಲು ಜಾಗರೂಕತೆ ಮುಖ್ಯ: ಸಚಿವ ಜಗದೀಶ ಶೆಟ್ಟರ್

Team Udayavani, Jun 23, 2021, 1:03 PM IST

02

ಧಾರವಾಡ: ಕೋವಿಡ್ ಎರಡನೇ ಅಲೆಯಲ್ಲಿ ಪಾಲಕರನ್ನು ಕಳೆದುಕೊಂಡು  ಅನಾಥರಾದ ಮಕ್ಕಳ ಬಗ್ಗೆ  ಸರ್ಕಾರ ಹೆಚ್ಚಿನ ಕಾಳಜಿ ತೆಗೆದುಕೊಂಡಿದೆ.ಮೂರನೇ ಅಲೆಯು ಬರಬಾರದು ಎನ್ನುವುದು ಎಲ್ಲರ ಆಶಯವಾಗಿದೆ. ಅದರ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ ಎಂದು ಬೃಹತ್,ಮಧ್ಯಮ ಕೈಗಾರಿಕೆ,ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಕೊರೊನಾ ಸಂಭಾವ್ಯ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆ ಮತ್ತು ಆರೈಕೆಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು  ತೊಂದರೆ ಆಗುತ್ತದೆ ಎನ್ನಲಾಗುತ್ತದೆ.  ವಯಸ್ಕರು ಮಾಸ್ಕ್ ಹಾಕಿಕೊಂಡು ಮುಂಜಾಗೃತೆ ವಹಿಸುತ್ತಾರೆ ಆದರೆ ಮಕ್ಕಳಿಗೆ ಅದರ ಮಹತ್ವ ಗೊತ್ತಿರುವುದಿಲ್ಲ ನಿರ್ಲಕ್ಷ್ಯ ವಹಿಸುತ್ತಾರೆ. ಮಕ್ಕಳಲ್ಲಿ  ಜಾಗೃತಿ  ಮೂಡಿಸುವುದು ಬಹಳ ಮುಖ್ಯ.

ಪ್ರತಿ ಹಂತದಲ್ಲಿ ಕೊರೊನಾ ಮುಂಜಾಗ್ರತಾ ಸಭೆ ನಡೆಸಿದ್ದೇವೆ,ಇದೇ ಮಾದರಿಯಲ್ಲಿ ಸಮರೋಪಾದಿ ಕಾರ್ಯ ಮುಂದುವರೆಸಬೇಕಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಅಂತಹ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ ಎಂದರು.

ಜಿಲ್ಲೆಯಲ್ಲಿ 6 ವರ್ಷದೊಳಗಿನ 1,43,902 ಮಕ್ಕಳು,6 ರಿಂದ 16 ವರ್ಷದೊಳಗಿನ 3,36,510 ಮಕ್ಕಳಿದ್ದಾರೆ. ಹುಬ್ಬಳ್ಳಿಯ ಸುಚಿರಾಯಿ ಆಸ್ಪತ್ರೆಯಿಂದ ಮಕ್ಕಳಿಗೆ ಪಿಡಿಯಾಸ್ಯೂರ್ ಪೌಡರ್, ಆಕ್ಸಿಜನ್ ಸಿಲಿಂಡರ್  ಹಸ್ತಾಂತರಿಸಲಾಯಿತು.

ಕೋವಿಡ್ 3 ನೇ ಅಲೆಯ ತಡೆ ಮತ್ತು ನಿರ್ವಹಣೆ ಬಗ್ಗೆ ಮಕ್ಕಳ ತಜ್ಞ ಡಾ.ಆರ್ ವಿ ದೇಶಪಾಂಡೆ ಅವರು ಮಾತನಾಡಿ, ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ  ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಅಮೃತ ದೇಸಾಯಿ,ಪ್ರಸಾದ ಅಬಯ್ಯ,ಶಾಸಕಿ ಕುಸುಮಾವತಿ ಶಿವಳ್ಳಿ,ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ,ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ,ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ,ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ,ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಶೋಕ ಯರಗಟ್ಟಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.