ಎಲ್ಲ ಕ್ಷೇತ್ರಗಳಲ್ಲಿ ಸಾಧಿಸಿದ್ದಾರೆ ಹಳ್ಳಿ ವಿದ್ಯಾರ್ಥಿಗಳು
Team Udayavani, Jun 19, 2018, 5:45 PM IST
ಹಾವೇರಿ: ಶೈಕ್ಷಣಿಕ, ರಾಜಕೀಯ, ಸಾಮಾಜಿಕ, ಆರ್ಥಿಕ, ವೈಜ್ಞಾನಿಕ ಕ್ಷೇತ್ರಗಳಲ್ಲಿ ಗ್ರಾಮೀಣ ಭಾಗದ
ವಿದ್ಯಾರ್ಥಿಗಳೇ ಹೆಚ್ಚಿರುವುದು ಹೆಮ್ಮೆಯ ಸಂಗತಿ ಎಂದು ಲಿಂಗನಾಯಕನಹಳ್ಳಿಯ ಚನ್ನವೀರ ಸ್ವಾಮೀಜಿ ಹೇಳಿದರು.
ಗುತ್ತಲ ಪಟ್ಟಣದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.
ಓದುವ ವಯಸ್ಸಿನಲ್ಲಿ ಉನ್ನತವಾದ ಗುರಿಯನ್ನಿಟ್ಟುಕೊಂಡು ಉತ್ತಮವಾದ ಶಿಕ್ಷಣ ಪಡೆದರೆ ಅದರಲ್ಲಿ ಹೆಚ್ಚು ಖುಷಿಯನ್ನು ಪಾಲಕರು ಹಾಗೂ ಶಿಕ್ಷಕರು ಹೊಂದುವರು ಎಂದರು.
ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಕಾಲೇಜಿನ ಪ್ರಾಚಾರ್ಯ ಡಾ| ವಿಜಯಕುಮಾರ ಕಟಗಿಹಳ್ಳಿಮಠ ಮಾತನಾಡಿ, ಸಾಧಕರ ಮುಂದೆ ಸಾಧನೆ ಮಾಡಿದವರನ್ನು ಗುರುತಿಸಿ ಸನ್ಮಾನ ಮಾಡುವುದು ಮಹತ್ತರವಾದ ಕೆಲಸ. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಅವಶ್ಯವಾದದು ಎಂದರು.
ವಿಪ್ರೋ, ಇನ್ಫೋಸಿಸ್ ಎಂಬ ಉನ್ನತ ಸಂಸ್ಥೆಗಳಲ್ಲಿ ಗ್ರಾಮೀಣ ಭಾಗದವರೇ ಸಿಂಹಪಾಲು ಹೊಂದಿದ್ದಾರೆ. ನಗರ
ವಿದ್ಯಾರ್ಥಿಗಳಲ್ಲಿ ರ್‍ಯಾಂಕ್‌ನ ಪ್ರಮಾಣ ಹೆಚ್ಚಿದ್ದರು ನೈತಿಕ ಶಿಕ್ಷಣ ಕಂಡು ಬರುವುದು ಗ್ರಾಮೀಣ ಭಾಗದ ಮಕ್ಕಳಲ್ಲಿ
ಹೆಚ್ಚಿರುವುದು ವಿಶೇಷ ಎಂದರು.
ಇದೇ ವೇಳೆ 2017-18ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನ್ನಡ, ಇಂಗ್ಲಿಷ್ ಮತ್ತು ಉರ್ದು
ಮಾಧ್ಯಮಗಳಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ನೂರಕ್ಕೆ ನೂರು ಅಂಕ
ಪಡೆದ ವಿಷಯವಾರು ವಿದ್ಯಾರ್ಥಿಗಳ ಶಿಕ್ಷಕರಿಗೆ ಸಹ ಸನ್ಮಾನ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಕಾರ್ಯಕ್ರಮದಲ್ಲಿ ಧಾರವಾಡದ ಕೆಸಿಡಿಯ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಜಿ.ಬಿ. ಮಳ್ಳಿಮಠ, ಬೆಂಗಳೂರಿನ
ಭಾರತೀಯ ವಿಜ್ಞಾನ ಸಂಸ್ಥೆಯ ಡಾ| ಶಮಾ ತುಮ್ಮಿನಕಟ್ಟಿ, ಸಿಆರ್‌ಪಿ ಎಚ್.ಬಿ. ಹಳ್ಳೆಪ್ಪನವರ, ಡಾ| ನಟರಾಜಗೌಡ,
ತೇಜರಾಜ ಜಾನ್ಮನೆ, ಚೇತನಾ ಜಾನ್ಮನೆ, ವಿದ್ಯಾಲೋಕ ಶಿಕ್ಷಣ ಹಾಗೂ ಸೇವಾಸಂಸ್ಥೆಯ ಅಧ್ಯಕ್ಷ ಬಸವರಾಜ ಕಾಗಿನೆಲ್ಲಿ, ಕಾರ್ಯದರ್ಶಿ ವೀರಯ್ಯ ಪ್ರಸಾದಿಮಠ, ನಿರ್ದೇಶಕ ಸೋಮಶೇಖರ ತಿಪ್ಪಿಗುಂಡಿ, ಬಿಂದಪ್ಪ ಅರ್ಕಸಾಲಿ, ಕುಮಾರ ಚಿಗರಿ ಸೇರಿದಂತೆ ಗುತ್ತಲ ಹಾಗೂ ಸುತ್ತಲಿನ ಗ್ರಾಮಗಳ ನೂರಾರು ಪಾಲಕರು ಸೇರಿದ್ದರು. ವಿರೇಶ ಗಡ್ಡದೇವರಮಠ ಪ್ರಾಸ್ತಾವಿಕ ಮಾತನಾಡಿದರು. ಮಾರುತಿ ಕೋಡಬಾಳ ಸ್ವಾಗತಿಸಿದರು, ಆರ್.ಐ. ಮಿಶ್ರಿಕೋಟಿ ಹಾಗೂ ಸುನೀತಾ ಕಳಸಣ್ಣನವರ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.