ಜಿಲ್ಲಾದ್ಯಂತ ವಿಶ್ವಕರ್ಮ ಜಯಂತ್ಯುತ್ಸವ
Team Udayavani, Sep 18, 2019, 9:45 AM IST
ಧಾರವಾಡ: ಕವಿಸಂನಲ್ಲಿ ವಿಶ್ವಕರ್ಮ ಜಯಂತ್ಯುತ್ಸವವನ್ನು ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಉದ್ಘಾಟಿಸಿದರು.
ಧಾರವಾಡ: ಕರಕುಶಲ ಕಲೆ-ಲೋಹ ಕಸುಬುಗಳಲ್ಲಿ ನಿಪುಣತೆ ಸಾಧಿಸಿರುವ ವಿಶ್ವಕರ್ಮ ಸಮುದಾಯಗಳು ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಹೇಳಿದರು.
ಕವಿಸಂನಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ-ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಇಂದಿಗೂ ವಿಶ್ವಕರ್ಮ ಸಮುದಾಯದ ಜನರು ಕೃಷಿ ಮತ್ತು ಇತರ ಚಟುವಟಿಕೆಗಳ ಅವಿಭಾಜ್ಯ ಅಂಗವಾಗಿ ಸಹಬಾಳ್ವೆ ನಡೆಸುತ್ತಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಮಾತನಾಡಿ, ಭಾರತೀಯ ಪರಂಪರೆಯ ಪ್ರಾಚೀನ ಸಂಸ್ಕೃತಿ ಮತ್ತು ಇತಿಹಾಸಕ್ಕೆ ವಿಶ್ವಕರ್ಮ ಜನಾಂಗವು ಅಭೂತಪೂರ್ವ ಕೊಡುಗೆ ನೀಡಿದೆ. ಬಾದಾಮಿ, ಐಹೊಳೆ, ಪಟ್ಟದಕಲ್ಲು, ಹಂಪಿ ಮುಂತಾದ ಇತಿಹಾಸ ಪ್ರಸಿದ್ಧ ದೇವಾಲಯಗಳ ವಾಸ್ತುಶಿಲ್ಪಕ್ಕೆ ವಿಶ್ವಕರ್ಮ ಜನಾಂಗದವರು ಅಪಾರ ಕೊಡುಗೆ ನೀಡಿದ್ದಾರೆ. ಭಾರತೀಯ ಸಂಸ್ಕೃತಿಯನ್ನು ವಿಶ್ವಸಂಸ್ಥೆಯ ಸಾಂಸ್ಕೃತಿಕ ಘಟಕವಾಗಿರುವ ಯುನೆಸ್ಕೋ ಮೆಚ್ಚಲು ವಿಶ್ವಕರ್ಮ ಜನಾಂಗದ ಶಿಲ್ಪಿಗಳ ಕೊಡುಗೆ ಮಹತ್ವದ್ದಾಗಿದೆ ಎಂದು ಹೇಳಿದರು.
ವಿಶ್ವಕರ್ಮ ಸಂಸ್ಕೃತಿ ಹಾಗೂ ಪರಂಪರೆ ಕುರಿತು ನಿವೃತ್ತ ಬಾನುಲಿ ಕೃಷಿ ಅಧಿಕಾರಿ ಡಾ|ವಿರೂಪಾಕ್ಷ ಬಡಿಗೇರ ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಪ್ರತಿಭಾವಂತರನ್ನು ಸನ್ಮಾನಿಸಲಾಯಿತು. ಜಿಪಂ ಸದಸ್ಯೆ ಭಾವನಾ ಬೇಲೂರ, ಕನ್ನಡ-ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಪಿಎಸ್‌ಐ ಶರಣಪ್ಪ ದೇಸಾಯಿ, ಮುಖಂಡರಾದ ವಸಂತ ಅರ್ಕಾಚಾರ, ಕಾಳಪ್ಪ ಬಡಿಗೇರ, ಸಂತೋಷ ಬಡಿಗೇರ, ಸುರೇಶ ಬಡಿಗೇರ, ಮಂಜುನಾಥ ಬಡಿಗೇರ, ರಾಮಣ್ಣಾ ಬಡಿಗೇರ, ದೇವೇಂದ್ರ ಬಡಿಗೇರ ಇದ್ದರು.
ವೀಣಾ ಬಡಿಗೇರ ಸಂಗಡಿಗರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಆರತಿ ದೇವಶಿಖಾಮಣಿ ನಿರೂಪಿಸಿ, ವಂದಿಸಿದರು. ಇದಕ್ಕೂ ಮುನ್ನ ಕಾಮನಕಟ್ಟಿಯ ಮೌನೇಶ್ವರ ದೇವಸ್ಥಾನದಿಂದ ವಿಶ್ವಕರ್ಮ ಭಾವಚಿತ್ರ ಮೆರವಣಿಗೆ ಆರಂಭವಾಗಿ ವಿವಿಧ ಕಲಾ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.