ಫೇಸ್‌ಬುಕ್‌ನಲ್ಲಿ ವಿವಿಪ್ಯಾಟ್ ಪ್ರಾತ್ಯಕ್ಷಿಕೆ ನೇರ ಪ್ರಸಾರ
Team Udayavani, Apr 26, 2018, 4:21 PM IST
ಧಾರವಾಡ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾರರ ಜಾಗೃತಿಗಾಗಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ (ಸ್ವೀಪ್) ಸಮಿತಿಯು ಫೇಸ್‌ಬುಕ್ ನೇರ ಪ್ರಸಾರದ ಮೂಲಕ ಇವಿಎಂ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಬಳಕೆ ಕುರಿತು ಪ್ರಾತ್ಯಕ್ಷಿಕೆ ನೀಡುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಪಂ ಸಭಾಂಗಣದಲ್ಲಿ ಬೆಳಿಗ್ಗೆ 11:00ಗಂಟೆಯಿಂದ ಆರಂಭವಾದ ನೇರ ಪ್ರಾತ್ಯಕ್ಷಿಕೆಯಲ್ಲಿ ಜಿಲ್ಲಾ ಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಹಾಗೂ ಜಿಪಂ ಸಿಇಒ ಸ್ನೇಹಲ್ ಆರ್. ಅವರು, ಮತದಾರರ ಖಾತ್ರಿಯಂತ್ರದ ಬಳಕೆ ಮತ್ತು ಅದರ ಮಹತ್ವವನ್ನು ನೇರ ಪ್ರಸಾರದಲ್ಲಿ ವಿವರಿಸಿದರು.
ಮಾಧ್ಯಮ ಪ್ರತಿನಿಧಿಗಳು, ಮಹಿಳೆಯರು ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿ ಖುದ್ದಾಗಿ ಅಣಕು ಮತದಾನ ಮಾಡುವ ಮೂಲಕ ಮಾಹಿತಿ ಪಡೆದರು. ಇದೇ ಮೊದಲ ಬಾರಿಗೆ ವಿವಿಪ್ಯಾಟ್ ಮೂಲಕ ನಾವು ಹಾಕಿದ ಮತ ನಿರ್ದಿಷ್ಟ ಅಭ್ಯರ್ಥಿ/ಪಕ್ಷಕ್ಕೆ ದಾಖಲಾಗಿದೆಯೇ ಎಂಬುದನ್ನು ತಿಳಿಯಲು ಅನುಕೂಲ ಕಲ್ಪಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಮತ ಚಲಾಯಿಸಿದ ಜನರು ಅಭಿಪ್ರಾಯ ವ್ಯಕ್ತಪಡಿಸಿದರು. ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.