ಮತದಾರರ ಭೇಟಿಯಾದ ಕೆಪಿಸಿಸಿ ಉಸ್ತುವಾರಿ
Team Udayavani, Oct 17, 2017, 12:55 PM IST
ಧಾರವಾಡ: ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ-74ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.12ರ ವ್ಯಾಪ್ತಿಯ ಬೂತ್ ನಂ.20ರ ಕೊಂಡವಾಡ ಓಣಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹತ್ತಾರು ಮನೆಗಳಿಗೆ ತೆರಳಿ ಜನಸಾಮಾನ್ಯರೊಂದಿಗೆ ಕುಳಿತು ಮಾತನಾಡಿದರು.
ಸರ್ಕಾರದ ಸಾಧನೆಗಳು ತಲುಪಿವಿಯೇ ಎಂದು ಪ್ರಶ್ನಿಸಿದರು. ಅಲ್ಲದೆ, ಕಾಂಗ್ರೆಸ್ ಪಕ್ಷದ ನಾಯಕರು, ಬೂತ್ ಮಟ್ಟದ ಕಾರ್ಯಕರ್ತರು ಆಗಮಿಸಿ ನಿಮಗೆ ರಾಜ್ಯ ಸರ್ಕಾರದ ಸಾಧನೆ ಪುಸ್ತಕ ವಿತರಿಸಿದ್ದಾರೆಯೇ ಎಂದು ಕೇಳಿ ಮಾಹಿತಿ ಸಂಗ್ರಹಿಸಿದರು.
ಬಳಿಕ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ದೀಪಕ ಚಿಂಚೋರೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬುರಾನ್ ಗವಳಿ, ಮರಿಗೌಡ ಪಾಟೀಲ ಹಾಗೂ ಬೂತ್ ಕಮಿಟಿ ಅಧ್ಯಕ್ಷ ಸುನೀಲ ಹೊಂಗಲ್ ಅವರ ತಂಡದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಇದೇ ರೀತಿ ಸಕ್ರಿಯವಾಗಿ ಪಕ್ಷದ ಕೆಲಸ ಕಾರ್ಯಗಳಲ್ಲಿ ತೊಡಗುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವೀಕ್ಷಕ ಮಾಣಿಕ್ಯಂ ಠ್ಯಾಗೂರ್, ಸಚಿವ ವಿನಯ ಕುಲಕರ್ಣಿ, ಕೆಪಿಸಿಸಿ ಕಾರ್ಯದರ್ಶಿಗಳಾದ ವೀರ ಕುಮಾರ ಪಾಟೀಲ, ಚಾಂದಪಾಷ, ಸುನೀಲಕುಮಾರ, ಚಂದ್ರಶೇಖರ, ಬಾನು, ಉಪಾಧ್ಯಕ್ಷ ಎ.ಎಂ. ಹಿಂಡಸಗೇರಿ, ವಿಧಾನ ಪರಿಷತ್ ಮಾಜಿ ಸದಸ್ಯ ವೀರಣ್ಣ ಮತ್ತಿಕಟ್ಟಿ, ಹಾಲಿ ಸದಸ್ಯ ಶ್ರೀನಿವಾಸ ಮಾನೆ,
-ಕಾಂಗ್ರೆಸ್ ಮುಖಂಡರಾದ ದೀಪಕ ಚಿಂಚೋರೆ, ಕೆಪಿಸಿಸಿ ಸದಸ್ಯರಾದ ರಾಬರ್ಟ ದದ್ದಾಪುರಿ, ಪ್ರಕಾಶ ಘಾಟಗೆ, ಹಜರತ್ ಅಲಿ ಗೊರವನಕೊಳ್ಳ, ರಾಣಿ ಚನ್ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬುರಾನ್ ಗವಳಿ, ನವನಗರ ಬ್ಲಾಕ್ ಅಧ್ಯಕ್ಷ ಮರಿಗೌಡ ಪಾಟೀಲ, ಮಾಜಿ ಸಚಿವ ಎಸ್.ಆರ್ ಮೊರೆ, ಇಸ್ಮಾಯಿಲ್ ತಮಟಗಾರ, ಸ್ವಾತಿ ಮಳಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.