ದುಪ್ಪಟ್ಟು ಕಾಂಚಾಣ ; ಹಳ್ಳಿ ಜನ ಹೈರಾಣ
Team Udayavani, Apr 8, 2021, 4:02 PM IST
ಹುಬ್ಬಳ್ಳಿ: ಸಾರಿಗೆ ಸಂಸ್ಥೆ ಬಸ್‌ಗಳು ಇಲ್ಲದ ಪರಿಣಾಮ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗಿದೆ. ಸಂಸ್ಥೆ ನೌಕರರು ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ವಾಯವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ ಮನವಿ ಮಾಡಿದ್ದಾರೆ.
ಇಲ್ಲಿನ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ನಡೆಸಿದ ಅವರು, ನೌಕರರ ಬೇಡಿಕೆಗೆ ನನ್ನ ವಿರೋಧವಿಲ್ಲ. ಆದರೆ ಇದೀಗ ಕೋವಿಡ್-19, ಲಾಕ್‌ಡೌನ್‌ನಿಂದ ಸಾರಿಗೆ ಸಂಸ್ಥೆಗಳು ಸಾಕಷ್ಟು ಸಂಕಷ್ಟದಲ್ಲಿವೆ. ಇಂತಹ ಸಂದರ್ಭದಲ್ಲಿ 6 ನೇ ವೇತನಕ್ಕೆ ಪಟ್ಟು ಹಿಡಿದಿರುವುದು ಸರಿಯಲ್ಲ. ಸರಕಾರ ನಿಮ್ಮ ಬೇಡಿಕೆ ಈಡೇರಿಸಲಿದೆ. ಸಾಮಾನ್ಯ ಜನರಿಗೆ ತೊಂದರೆ ನೀಡುವ ಬದಲು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದರು.
ವಿವಿಧ ಸಂಘಟನೆಗಳ ಪ್ರಮುಖರು ತಮ್ಮ ಸದಸ್ಯರನ್ನು ಮನವೊಲಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಮಾಡಬೇಕು. ಬಸ್‌ಗಳು ಓಡದ ಸಂದರ್ಭದಲ್ಲಿ ಸರಕಾರ ವಿಶೇಷ ಅನುದಾನ ನೀಡಿ ಕೈ ಹಿಡಿಯುವ ಕೆಲಸ ಆಗಿದೆ. ಇದನ್ನು ಕಾರ್ಮಿಕರು ಮರೆಯಬಾರದು ಎಂದರು.
ಸರಕಾರ ಶೇ.8 ವೇತನ ಹೆಚ್ಚಳ ಮಾಡುತ್ತೇವೆ ಎನ್ನುವ ಮೂಲಕ ಸಾರಿಗೆ ನೌಕರರನ್ನು ಅವಮಾನ ಮಾಡುವ ಕೆಲಸ ಆಗಿದೆ. ಹಿಂದೆ ಶೇ.12.5 ಹೆಚ್ಚಿಸಿದ್ದಾರೆ. ಇದೀಗ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹೀಗಿರುವಾಗ ಶೇ.8 ವೇತನ ಹೆಚ್ಚಳ ಮಾಡಿರುವುದು ನಾವು ಕೇಳುತ್ತಿರುವುದು ಭಿಕ್ಷೆಯಲ್ಲ ಎನ್ನುವ ಅಭಿಪ್ರಾಯ ವಿವಿಧ ಸಂಘಟನೆಗಳ ಪ್ರಮುಖ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ. ಮುಖ್ಯ ಕಾರ್ಮಿಕ ಕಲ್ಯಾಣಾ ಧಿಕಾರಿ ಪಿ.ವೈ.ನಾಯಕ, ಡಿಸಿ ಎಚ್.ರಾಮನಗೌಡ್ರ, ಮುಖಂಡರಾದ ಆರ್. ಎಫ್.ಕವಳಿಕಾಯಿ, ಕಲಬಾವಿ, ಕಮಲದಿನ್ನಿ ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.