ನನ್ನನ್ನು ಸೋಲಿಸಲು ವಾಮಮಾರ್ಗ: ಶೆಟ್ಟರ್
Team Udayavani, May 14, 2018, 6:55 AM IST
ಹುಬ್ಬಳ್ಳಿ: ನನ್ನನ್ನು ಸೋಲಿಸಲು ಅಧಿಕಾರಿಗಳು ಹಾಗೂ ಕೆಲವರು ವಾಮಮಾರ್ಗ ಅನುಸರಿಸಿದ್ದಾರೆ ಎಂದು
ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ ಗಂಭೀರ ಆರೋಪ ಮಾಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಪ್ರತಿನಿಧಿಸುವ ಹುಬ್ಬಳ್ಳಿ-ಧಾರವಾಡ ಕೇಂದ್ರ
ವಿಧಾನಸಭಾ ಕ್ಷೇತ್ರದಲ್ಲಿ ಉದ್ದೇಶಪೂರ್ವಕವಾಗಿ ಸಾವಿರಾರು ಜನರ ಹೆಸರನ್ನು ಮತದಾರರ ಪಟ್ಟಿಯಿಂದ
ತೆಗೆದು ಹಾಕಲಾಗಿದೆ. ಹೀಗಾಗಿ ಕ್ಷೇತ್ರದಲ್ಲಿನ ಅನೇಕರು ಮತದಾನದಿಂದ ವಂಚಿತರಾಗಿದ್ದು, ಇದರಿಂದಲೇ
ಹು-ಧಾ ಕೇಂದ್ರ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.60ರಷ್ಟು ಮತದಾನವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕ್ಷೇತ್ರದಲ್ಲಿ ಹಲವಾರು ಗೋಲ್ಮಾಲ್ ನಡೆದಿದೆ. ಹು-ಧಾ ಕೇಂದ್ರದಲ್ಲಿ 26 ಅಭ್ಯರ್ಥಿಗಳು ಇದ್ದುದರಿಂದ ಎರಡು ವಿದ್ಯುನ್ಮಾನ ಮತಯಂತ್ರಗಳನ್ನು ಇರಿಸಲಾಗಿತ್ತು. ಅನೇಕ ಮತಗಟ್ಟೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಕ್ರಮಬದ್ಧವಾಗಿ ಇರಿಸದೆ ಅದಲು-ಬದಲು ಮಾಡಿದ್ದಾರೆ. ಏನೆಲ್ಲಾ ಹುನ್ನಾರ ನಡೆಸಿದ್ದರೂ ಮತ್ತೆ ಗೆಲುವು ಸಾಧಿಸುವ ಮೂಲಕ ನಾನೇ ಸಿಕ್ಸರ್ ಹೊಡೆಯುವುದು ಶತಸಿದ್ಧ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದರಲ್ಲಿ ಯಾವ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.