ಮೂರು ದಿನಕ್ಕೊಮ್ಮೆ ನೀರು ತಿಂಗಳಲ್ಲಿ ಜಾರಿ: ಇಟ್ನಾಳ

Team Udayavani, Jan 27, 2020, 11:41 AM IST

huballi-tdy-1

ಹುಬ್ಬಳ್ಳಿ: ಮಲಪ್ರಭಾ ಜಲಾಶಯದಿಂದ ಹೆಚ್ಚುವರಿ 40 ಎಂಎಲ್‌ಡಿ ನೀರು ಪೂರೈಕೆ ಯೋಜನೆ ಶೀಘ್ರದಲ್ಲಿ ಪೂರ್ಣಗೊಳ್ಳಲಿದ್ದು, ಮುಂದಿನ ಒಂದು ತಿಂಗಳಲ್ಲಿ ನಗರದಲ್ಲಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಹೇಳಿದರು.

ಈದ್ಗಾ ಮೈದಾನದಲ್ಲಿ 71ನೇ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕಳೆದ ವರ್ಷ ಉತ್ತಮ ಮಳೆಯಾಗಿರುವುದರಿಂದ ಮಲಪ್ರಭಾ ಹಾಗೂ ನೀರಸಾಗರ ಜಲಾಶಯ ಭರ್ತಿಯಾಗಿ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ. 40 ಎಂಎಲ್‌ಡಿ ಹೆಚ್ಚುವರಿ ನೀರು ಪಡೆಯುವ ಯೋಜನೆ ಶೀಘ್ರದಲ್ಲಿ ಉದ್ಘಾಟನೆಯಾಗಲಿದೆ. ಇದರಿಂದ ಐದು ದಿನಗಳ ಬದಲು ಮೂರು ದಿನಕ್ಕೊಮ್ಮೆ ನೀರು ದೊರೆಯಲಿದೆ ಎಂದರು.

ಮಹಾನಗರದ ಎಲ್ಲ ವಾರ್ಡ್‌ಗಳಿಗೆ 24/7 ನೀರು ಸರಬರಾಜು ಯೋಜನೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ವಿಶ್ವಸಂಸ್ಥೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದೆ. ಮಹಾನಗರದಲ್ಲಿ ವಿವಿಧ ಅನುದಾನಗಳಲ್ಲಿ 176 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಗೆ 120 ಕೋಟಿ ರೂ. ಮಂಜೂರು ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಕಟ್ಟಡ ತ್ಯಾಜ್ಯ ನಿರ್ವಹಣಗಾಗಿ ಸುಸಜ್ಜಿತ ಘಟಕ ಏಪ್ರೀಲ್‌ ತಿಂಗಳಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು.

ಮಹಾಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ 365 ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. 325 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಟೆಂಡರ್‌ ಕರೆಯಲಾಗಿದೆ. ಇನ್ನೂ ಸುಮಾರು 300 ಕೋಟಿ ರೂ. ಟೆಂಡರ್‌ ಕರೆಯಬೇಕಾಗಿದೆ. 2 ವರ್ಷದಲ್ಲಿ ಬಹುತೇಕ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಕೇಂದ್ರ ರಸ್ತೆ ನಿಧಿ ಯೋಜನೆಯಲ್ಲಿ ನಗರದ ಪ್ರಮುಖ 6 ರಸ್ತೆಗಳಲ್ಲಿ ಮೂರು ರಸ್ತೆಗಳು ಕಾಂಕ್ರೀಟಿಕರಣವಾಗಿದ್ದು, ಉಳಿದ ರಸ್ತೆಗಳ ಕಾಮಗಾರಿ ನಡೆಯುತ್ತಿದೆ ಎಂದರು.

ಮಹಾನಗರದಲ್ಲಿ ಶೇ.30 ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಇದಕ್ಕಾಗಿ ಸುಮಾರು 430 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಿ ಸರಕಾರಕ್ಕೆ ಕಳುಹಿಸಲಾಗಿದೆ. ಹಿಂದೆ ಆಗಿರುವ ಸಂಪರ್ಕ ಜಾಲದಲ್ಲಿ ಹಲವು ನ್ಯೂನತೆಗಳು ಕಂಡು ಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ಆಗಲಿದೆ ಎಂದು ಹೇಳಿದರು.

ಮಾಜಿ ಮಹಾಪೌರರಾದ ಡಿ.ಕೆ. ಚವ್ಹಾಣ, ಸುಧೀರ ಸರಾಫ್‌, ಮಾಜಿ ಸದಸ್ಯ ರಾಜಣ್ಣ ಕೊರವಿ, ಅಧಿಕಾರಿಗಳಾದ ಪಿ.ಡಿ. ಗಾಳೆಮ್ಮನವರ, ಎಸ್‌.ಸಿ.ಬೇವೂರು, ಎಸ್‌.ಎಚ್‌. ನರೇಗಲ್ಲ ಇನ್ನಿತರರಿದ್ದರು.

ಟಾಪ್ ನ್ಯೂಸ್

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.