ಮಲಪ್ರಭಾದಿಂದ ನೀರು ಬಿಡುಗಡೆ
Team Udayavani, Jun 11, 2020, 10:12 AM IST
ಧಾರವಾಡ: ನವಿಲುತೀರ್ಥ ಜಲಾಶಯದಿಂದ ಕುಡಿಯುವ ನೀರಿನ ಸಲುವಾಗಿ ಮಲಪ್ರಭಾ ಬಲದಂಡೆ ಕಾಲುವೆ ಅಡಿ ಬರುವ ಧಾರವಾಡ ಜಿಲ್ಲೆಯ ನವಲಗುಂದ, ಹುಬ್ಬಳ್ಳಿ ಮತ್ತು ಕುಂದಗೋಳ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಜೂ.10 ಸಂಜೆ 6:00 ಗಂಟೆಯಿಂದ ಕಾಲುವೆಗೆ ನೀರು ಬಿಡುಗಡೆ ಮಾಡಿದ್ದಾರೆ.
ಕೇವಲ ಕುಡಿಯುವ ನೀರಿನ ಕೆರೆ ತುಂಬಿಸಿಕೊಳ್ಳುವ ಉದ್ದೇಶಕ್ಕೆ ಮಾತ್ರ ನೀರು ಬಿಡುಗಡೆ ಮಾಡಲಾಗಿದೆ. ಈ ಸಮಯದಲ್ಲಿ ಕಾಲುವೆಯ ಅಚ್ಚುಕಟ್ಟು ಪ್ರದೇಶದ ಸಾರ್ವಜನಿಕರು ಈನೀರನ್ನು ಕೃಷಿ ಹಾಗೂ ಇನ್ನಿತರೆ ಬೇರೆ ಯಾವುದೇ ಉದ್ದೇಶಕ್ಕೆ ಪಂಪಸೆಟ್‌ನಿಂದ ಹಾಗೂ ಇನ್ನಿತರ ಉಪಕರಣಗಳಿಂದ ಬಳಸಿಕೊಳ್ಳುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ಈಗಾಗಲೇ ಸಿಆರ್‌ಪಿಸಿ ಕಲಂ 144 ರಡಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ನಿರ್ಬಂಧ ಉಲ್ಲಂಘಿ ಸಿದ್ದು ಕಂಡು ಬಂದಲ್ಲಿ ಅಂತಹ ಪಂಪಸೆಟ್ ಹಾಗೂ ಇತರ ಉಪಕರಣಗಳನ್ನು ಜಪ್ತಿ ಮಾಡಿಕೊಳ್ಳಲಾಗುವುದು. ಅಂಥವರ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕೆಂದು ಡಿಸಿ ದೀಪಾ ಚೋಳನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.