ನಮಗೆ ಮನ್ ಕೀ ಬಾತ್ ಬೇಕಿಲ್ಲ,ಕಾಮ್ ಕೀ ಬಾತ್ ಬೇಕಿದೆ: ಜಮೀರ್
Team Udayavani, Sep 6, 2018, 6:10 AM IST
ಹುಬ್ಬಳ್ಳಿ: “ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಗಗನಕ್ಕೇರುತ್ತಿದೆ. ಆದರೂ ಕೇಂದ್ರ ಸರಕಾರ ಅದನ್ನು ನಿಯಂತ್ರಿಸುವ ಗೋಜಿಗೆ ಹೋಗಿಲ್ಲ. ಪ್ರಧಾನಿ ಮೋದಿ ಅಚ್ಛೇ ದಿನ್ ಆಯೇಗಾ ಅಂದಿದ್ದರು. ಇದೇನಾ ಅವರ ಅಚ್ಛೇ ದಿನ್’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಮನ್ ಕೀ ಬಾತ್ ಅಂತಿದ್ದಾರೆ. ನಮಗೆ ಮನ್ ಕೀ ಬಾತ್ ಬೇಕಿಲ್ಲ. ಕಾಮ್ ಕೀ ಬಾತ್ ಬೇಕಿದೆ. ತೈಲ ಬೆಲೆ ಏರಿಸುತ್ತಿರುವ ಬಗ್ಗೆ ನಾವು ಹಿಂದಿನಿಂದಲೂ ಪ್ರತಿಭಟಿಸುತ್ತಿದ್ದೇವೆ.
ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸುತ್ತಿರುವ ಬಗ್ಗೆ ಜನರಿಗೆ ಅರ್ಥವಾಗಬೇಕು. ಇವರ ದುರಾಡಳಿತ ಜನರಿಗೆ ಗೊತ್ತಾಗಲಿ ಎಂದು ಸುಮ್ಮನಿದ್ದೇವೆ ಎಂದರು. ಬಿಜೆಪಿಯವರು ಮಾತೆತ್ತಿದರೆ ಸಮ್ಮಿಶ್ರ ಸರಕಾರ ಬೀಳುತ್ತೆ ಅಂತಿದ್ದಾರೆ. ಈ ಮೈತ್ರಿ ಸರಕಾರ ಬೀಳುವುದು ಕನಸಿನ ಮಾತು. ಸರಕಾರ ಯಶಸ್ವಿಯಾಗಿ ಐದು ವರ್ಷ ಪೂರ್ಣ ಆಡಳಿತ ನಡೆಸಲಿದೆ ಅದರಲ್ಲಿ ಯಾವುದೇ ಸಂಶಯವಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಮಂಡಿಸಿದ ಎಲ್ಲಾ ಯೋಜನೆಗಳನ್ನು ಸಮ್ಮಿಶ್ರ ಸರಕಾರ ಮುಂದುವರಿಸುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
Contractor Case: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ
Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
EPF ನಿಧಿ ವಂಚನೆ: ರಾಬಿನ್ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು
America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.