![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 13, 2023, 12:05 PM IST
ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಪ್ರಸ್ತಾವನೆಯನ್ನು ನಮ್ಮ ಸರಕಾರ ಒಪ್ಪಿರಲಿಲ್ಲ ಇದೀಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ಸಂತೆ ಏರಿಕೆ ಮಾಡಿದ್ದು, ದರ ಹೆಚ್ಚಳ ಮಾಡಿದ್ದು ನಮ್ಮ ಸರಕಾರವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರದ ಅವಧಿಯಲ್ಲಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ನಾವು ಇದನ್ನು ಒಪ್ಪಿರಲಿಲ್ಲ. ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್ ದರ ಏರಿಕೆಗೆ ಒಪ್ಪಿಗೆ ನೀಡಿದೆ. ಆದರೆ ಏರಿಕೆಯನ್ನು ನಮ್ಮ ಸರಕಾರದ ಮೇಲೆ ಹಾಕುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಸರಕಾರದ ಗ್ಯಾರಂಟಿಗಳ ಬಗ್ಗೆ ಕಾದು ನೋಡುತ್ತಿದ್ದೇವೆ. ಉಚಿತ ಪ್ರಯಾಣ ಆರಂಭದ ಶೂರತ್ವ ಆಗಿದೆ. ಮಹಿಳೆಯರು ಓಡಾಡಲು ಬಸ್ಸುಗಳೇ ಇಲ್ಲ. ಸಾರಿಗೆ ಸಂಸ್ಥೆಗಳು ಹೆಚ್ಚಿನ ಪ್ರಮಾಣದಲ್ಲಿ ಡಿಸೇಲ್ ಬಳಕೆ ಮಾಡುತ್ತಿವೆ. ಡಿಸೇಲ್ ದರ ಏರಿಕೆಯಿಂದ ಸಾಕಷ್ಟು ಸಂಕಷ್ಟ ಅನುಭವಿಸುವಂತೆ ಆಗಿತ್ತು. ಇವುಗಳ ನೆರವಿಗೆ ನಮ್ಮ ಸರಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಇದನ್ನು ಈ ಸರಕಾರ ಮುಂದುವರಿಸಿಕೊಂಡು ಹೋಗಬೇಕು. ಇನ್ನೂ ಗ್ಯಾರಂಟಿಗಳಿಗೆ ಹಣಕಾಸಿನ ಬಗ್ಗೆ ಸ್ಪಷ್ಟತೆ ನೀಡುತ್ತಿಲ್ಲ. ಜನರನ್ನು ಕತ್ತಲೆಯಲ್ಲಿ ಇಡುವ ಕೆಲಸ ಈ ಸರಕಾರ ಮಾಡುತ್ತಿದೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸ ಸರಕಾರ ಮಾಡುತ್ತಿದೆ ಎಂದು ತಿಳಿಸಿದರು.
ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದ ಕಾರಣ ರೈತರಿಗೆ ಸಾಕಷ್ಟು ಸಂಕಷ್ಟ ಎದುರಾಗುತ್ತಿದೆ. ಮತ್ತೊಂದು ಕಡೆ ಭೀಕರ ಚಂಡ ಮಾರುತದ ಮಾತುಗಳು ಕೇಳಿ ಬರುತ್ತಿವೆ. ಹೀಗಿದ್ದರೂ ಮುಖ್ಯಂಮತ್ರಿಗಳು ಯಾವ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದೆ. ರಾಜ್ಯದ ಡ್ಯಾಂ ಗಳ ನೀರು ಅತ್ಯಂತ ಕೆಳಮಟ್ಟದಲ್ಲಿದೆ. ಇಷ್ಟು ಬೇಗ ಬರಗಾಲ ಎಂದು ಹೇಳಲ್ಲ. ಮುನ್ನೆಚ್ವರಿಕಾ ಕ್ರಮವಾಗಿ ಸರ್ಕಾರದ ಸಮರ್ಪಕವಾಗಿ ಯೋಜನೆ ರೂಪಿಸಬೇಕು. ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಮಾಡಬೇಕು. ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಆ ಟಾಸ್ಕ್ ಫೋರ್ಸ್ ನಲ್ಲಿರಬೇಕು ಅವರಿಂದ ಸಹಕಾರ ಪಡೆಯಬೇಕು. ಈ ಕೂಡಲೇ ಸಮರ್ಪಕ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.