ದಿಂಡಿ ಪಲ್ಲಕ್ಕಿಗೆ ಭವ್ಯ ಸ್ವಾಗತ
Team Udayavani, May 17, 2018, 5:36 PM IST
ಉಪ್ಪಿನಬೆಟಗೇರಿ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಶ್ರೀ ಕ್ಷೇತ್ರ ಇಂಚಗೇರಿ ಮಠದಲ್ಲಿ ಮೇ 23ರಿಂದ ಮೂರು ದಿನ
ಕಾಲ ಜರುಗುವ ಶ್ರೀ ಮಾಧವಾನಂದ ಪ್ರಭುಜಿಯವರ ಪುಣ್ಯತಿಥಿ ಸಪ್ತಾಹದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಯಿಂದ ಇಂಚಗೇರಿ ಮಠಕ್ಕೆ ತೆರಳುತ್ತಿರುವ ದಿಂಡಿ ಪಲ್ಲಕ್ಕಿ ಹಾಗೂ ನಂದಿಕೋಲು ಹೊತ್ತ ಪಾದಯಾತ್ರಿಕರು ಮಂಗಳವಾರ ಮಾರ್ಗಮಧ್ಯೆ ಗ್ರಾಮಕ್ಕೆ ಆಗಮಿಸಿದಾಗ ಭಕ್ತರು ಭವ್ಯ ಸ್ವಾಗತ ಕೋರಿದರು.
ನಂತರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀಮಠದ ಶಿಷ್ಯ ಶಂಕ್ರಪ್ಪ ಕೌಜಲಗಿ ಮಹಾರಾಜರು ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಮಾಧವಾನಂದರ ಸಪ್ತಾಹದಲ್ಲಿ ಪಾಲ್ಗೊಳ್ಳಲು ಸುಮಾರು 80 ಜನರು ಪಾದಯಾತ್ರೆಯಲ್ಲಿ ಶ್ರೀ ಕ್ಷೇತ್ರ ಇಂಚಗೇರಿಗೆ ತೆರಳುತ್ತಿದ್ದು, ವರ್ಷದಲ್ಲಿ ಮೂರು ಬಾರಿ ಇಲ್ಲಿಗೆ ಆಗಮಿಸಿ ಭಕ್ತರಾದ ಶಂಕರ ಓರಣಕರ ಅವರ ಮನೆಯಲ್ಲಿ ಅಲ್ಪಉಪಹಾರ ಸ್ವೀಕರಿಸಿ ತೆರಳುವ ಪದ್ಧತಿ ಇದೆ ಎಂದರು. ಶಿವಪ್ರಭು ಈಸರಗೊಂಡ, ಫಕ್ಕೀರಪ್ಪ ಸವಣೂರ, ಡಿ.ಐ. ನದಾಫ, ಕಲ್ಮೇಶ ಯಲಿಗಾರ, ಶಿಕ್ಷಕ ಎಫ್.ವೈ. ಮಡಿವಾಳರ, ಮಹಾದೇವ ನರಗುಂದ, ವಿನೋಬಾ ಓರಣಕರ, ಮಹಮ್ಮದಅಸ್ಲಂ ಮುಲ್ಲಾ, ರಮೇಶ ಓರಣಕರ, ಶಿವನಪ್ಪ ಬೆಳ್ಳಿಗಟ್ಟಿ, ರವೀಂದ್ರ ಓರಣಕರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.