ಡಿಕೆಶಿಗೆ ಅದ್ಧೂರಿ ಸ್ವಾಗತ


Team Udayavani, Nov 22, 2019, 10:42 AM IST

huballi-tdy-1

ಹುಬ್ಬಳ್ಳಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೃಹತ್‌ ಸೇಬು ಹಣ್ಣಿನ ಹಾಗೂ ಹೂವಿನ ಹಾರ ಹಾಕಿ ಅದ್ಧೂರಿ ಸ್ವಾಗತ ಕೋರಿದರು.

ಗುರುವಾರ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಿವಕುಮಾರ ಅವರನ್ನು ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಸ್ವಾಗತಿಸಿದರು. ನಂತರ ತೆರೆದ ವಾಹನದಲ್ಲಿ ಗೋಕುಲ ಗಾರ್ಡನ್‌ ವರೆಗೂ ಕರೆತರಲಾಯಿತು. ವಿಮಾನ ನಿಲ್ದಾಣ ಪ್ರವೇಶ ದ್ವಾರದಲ್ಲಿ ಸುಮಾರು 20 ಅಡಿ ಎತ್ತರದ ಸೇವಂತಿಗೆ ಹಾರವನ್ನು ಕ್ರೇನ್‌ ಮೂಲಕ ಹಾಕಿ ಸ್ವಾಗತ ಕೋರಲಾಯಿತು. ಇನ್ನೂ ನೆಹರು ನಗರ ನೀರಿನ ಟ್ಯಾಂಕ್‌ ಬಳಿ ಬೃಹತ್‌ ಗುಲಾಬಿ ಹೂವಿನ ಹಾರ ಹಾಕಿದರು.

ಮಂಜುನಾಥ ನಗರ ವೃತ್ತದಲ್ಲಿ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತ ಕೋರಿದ್ದು ವಿಶೇಷವಾಗಿತ್ತು.  ಸೇಬು ಹಣ್ಣಿಗಾಗಿ ಹರಸಾಹಸ: ಸೇಬು ಹಣ್ಣಿನ ಹಾರ ಹಾಕುತ್ತಿದ್ದಂತೆ ಡಿ.ಕೆ. ಶಿವಕುಮಾರ ಹಾರದಿಂದ ಒಂದು ಹಣ್ಣು ಕಿತ್ತು ಸವಿದರು. ಮುಖಂಡರಿದ್ದ ವಾಹನ ಮುಂದೆ ಹೋಗುತ್ತಿದ್ದಂತೆ ಕಾರ್ಯರ್ತರು ಹಾರದಿಂದ ಸೇಬು ಹಣ್ಣು ಕೀಳಲು ಮುಂದಾದರು. ಒಂದಿಷ್ಟು ಹಣ್ಣು ಕಾರ್ಯಕರ್ತರ ಪಾಲಾಗುತ್ತಿದ್ದಂತೆ ಎಚ್ಚೆತ್ತ ಕ್ರೇನ್‌ ಚಾಲಕ ಹಣ್ಣಿನ ಹಾರವನ್ನು ಮೇಲೆತ್ತಿದರು. ಇಷ್ಟಕ್ಕೂ ಬಿಡದ ಜನರು ಕೋಲು, ಕಟ್ಟಿಗೆ ಮೂಲಕ ಕೀಳುವ ವ್ಯರ್ಥ ಪ್ರಯತ್ನ ನಡೆಸಿದರು.

ಮಂಜುನಾಥ ನಗರ ವೃತ್ತದಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ, ನಾನು ಬಂಧನದಲ್ಲಿದ್ದಾಗ ಈ ಭಾಗದ ಜನರು ತೋರಿಸಿದ ಪ್ರೀತಿ, ಕಾಳಜಿ ದೊಡ್ಡದು. ನಿಮ್ಮ ಪ್ರೀತಿಯ ಮುಂದೆ ನನ್ನ ಅಧಿಕಾರ, ಆಸ್ತಿ ಎಲ್ಲವೂ ಗೌಣ. ನಿಮ್ಮೆಲ್ಲರ ಪ್ರಾರ್ಥನೆ, ಹೋರಾಟದಿಂದ ಮತ್ತೆ ನಿಮ್ಮ ಸೇವೆಗೆ ಬಂದಿದ್ದೇನೆ. ನಿಮ್ಮ ಸೇವೆ ಮಾಡುವ ಮೂಲಕ ಋಣ ತೀರಿಸುವುದಾಗಿ ಹೇಳಿದರು.

ಶಾಸಕ ಪ್ರಸಾದ ಅಬ್ಬಯ್ಯ, ವಿಧಾನಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ, ಮುಖಂಡರಾದ ಅನಿಲಕುಮಾರ ಪಾಟೀಲ, ಅಲ್ತಾಫ್‌ ಹಳ್ಳೂರು, ಸತೀಶ ಮೆಹರವಾಡೆ ಇನ್ನಿತರರಿದ್ದರು. ಮೆರವಣಿಗೆ ಹಿನ್ನೆಲೆಯಲ್ಲಿ ಗೋಕುಲ ರಸ್ತೆಯ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅದನ್ನು ಸರಿಪಡಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಟಾಪ್ ನ್ಯೂಸ್

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Ajit-Car-Accident

Car Crash: ಕಾರು ರೇಸ್‌ ತರಬೇತಿ ವೇಳೆ ನಟ ಅಜಿತ್‌ ಕುಮಾರ್‌ ಕಾರು ಅಪಘಾತ!

Ramamandir-Glaas

Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

Jaiswal in the Champions Trophy; debut in the England series?

Jaiswal: ಚಾಂಪಿಯನ್ಸ್‌ ಟ್ರೋಫಿಗೆ ಯಶಸ್ವಿ ಜೈಸ್ವಾಲ್;‌ ಇಂಗ್ಲೆಂಡ್‌ ಸರಣಿಯಲ್ಲೇ ಪದಾರ್ಪಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru: ಮೀನುಗಾರಿಕಾ ಸಾಮಗ್ರಿಗಳ ನಾಶ: ಪೊಲೀಸರಿಗೆ ದೂರು

Mangaluru: ಮೀನುಗಾರಿಕಾ ಸಾಮಗ್ರಿಗಳ ನಾಶ: ಪೊಲೀಸರಿಗೆ ದೂರು

GDP growth expected to be 6.4% this year: 4-year low

GDP: ಈ ವರ್ಷ ಶೇ.6.4ರಷ್ಟು ಜಿಡಿಪಿ ಪ್ರಗತಿ ನಿರೀಕ್ಷೆ: 4 ವರ್ಷಗಳ ಕನಿಷ್ಠ

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.