ಕಪ್ಪತಗುಡ್ಡ ಸಂರಕ್ಷಿತ ಪ್ರದೇಶ ಘೋಷಣೆಗೆ ಕೆಸಿಸಿಐ ಸ್ವಾಗತ
Team Udayavani, Apr 14, 2017, 3:21 PM IST
ಹುಬ್ಬಳ್ಳಿ: ರಾಜ್ಯಸರಕಾರ ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಿರುವುದನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸ್ವಾಗತಿಸಿದೆ. ಗದಗ ತೋಂಟದಾರ್ಯಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹಾಗೂ ನಾಡೋಜ ಪಾಟೀಲ ಪುಟ್ಟಪ್ಪ ಹಾಗೂ ವಿವಿಧ ಸಂಘ-ಸಂಸ್ಥೆಗಳವರು ಈ ಹೋರಾಟದಲ್ಲಿ ನಿರಂತರವಾಗಿ ಪಾಲ್ಗೊಂಡಿದ್ದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಬಸವರಾಜ ಹೊರಟ್ಟಿ,ಪ್ರಹ್ಲಾದ ಜೋಶಿ ಇನ್ನೂ ಅನೇಕ ಪ್ರಮುಖ ರಾಜಕೀಯ ಧುರೀಣರು ಪಕ್ಷಾತೀತವಾಗಿ ಪಾಲ್ಗೊಂಡಿದ್ದರು. ಮಠಾಧಿಧೀಶರು ಹಾಗೂ ಅಪಾರ ಜನ ಬೆಂಬಲದೊಂದಿಗೆ ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ನಡೆದ ಹೋರಾಟಕ್ಕೆ ಫಲ ಸಿಕ್ಕಿದೆ.
ಸಸ್ಯಕಾಶಿ ಕಪ್ಪತಗುಡ್ಡವನ್ನು ಮೀಸಲು ಅರಣ್ಯ ಪ್ರದೇಶವೆಂದು ಘೋಷಣೆ ಮಾಡಿ ಆದೇಶ ಹೊರಡಿಸಿ, ತಾವು ಜನತೆಗೆ ನೀಡಿದ ಮಾತನ್ನು ಸಿಎಂ ಸಿದ್ದರಾಮಯ್ಯ ಉಳಿಸಿಕೊಂಡಿದ್ದಾರೆ. ಪರಿಸರ ಹಾಗೂ ನಿಸರ್ಗದತ್ತ ಕೊಡುಗೆಯುಳ್ಳ ಔಷಧಿಧಿ ಸಸ್ಯಗಳಿರುವ ಕಪ್ಪತಗುಡ್ಡದ ಬಗ್ಗೆ ಇನ್ನೂ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಪರಿಸರ ಕಾಯ್ದುಕೊಳ್ಳಬೇಕು.
ಈ ಅರಣ್ಯ ಪ್ರದೇಶವನ್ನು ಸಮರ್ಪಕವಾಗಿ ಅಭಿವೃದ್ಧಿ ಪಡಿಸಬೇಕೆಂದು ಸಂಸ್ಥೆಯು ಮುಖ್ಯಮಂತ್ರಿಗಳನ್ನು ಒತ್ತಾಯಿಸಿತ್ತು ಎಂದು ಸಂಸ್ಥೆ ಅಧ್ಯಕ್ಷ ರಮೇಶ ಎ.ಪಾಟೀಲ, ಎಸ್.ಜಿ. ಕೆಮತೂರ, ಶಿವಶಂಕರಪ್ಪ ಮೂಗಬಸ್ತ, ಶರಣಬಸಯ್ಯ ಕದ್ರಳ್ಳಿಮಠ, ಸಿದ್ದೇಶ್ವರ ಜಿ.ಕಮ್ಮಾರ, ವಿನಯ ಜೆ.ಜವಳಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.