ಪಾಶ್ಚಾತ್ಯ ಸಂಸ್ಕೃತಿಯಿಂದ ಸಮಾಜಕ್ಕೆ ಧಕ್ಕೆ
Team Udayavani, Jan 4, 2017, 12:48 PM IST
ಧಾರವಾಡ: ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವ ವಿದ್ಯಾರ್ಥಿನಿಯರಿಂದ ಸಮಾಜದ ಸ್ವಾಸ್ಥ ಹದೆಗೆಡುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಆತಂಕ ವ್ಯಕ್ತಪಡಿಸಿದರು.
ನಗರದ ಆಲೂರು ವೆಂಕಟರಾವ್ ಸಭಾಂಗಣದಲ್ಲಿ ಕರ್ನಾಟಕ ದಲಿತ ಮಹಿಳಾ ಒಕ್ಕೂಟ ಹಾಗೂ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಸಹಯೋಗದಲ್ಲಿ ಸಾವಿತ್ರಿಬಾಯಿ ಪುಲೆ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಬೃಹತ್ ದಲಿತ ಮಹಿಳಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಸಾವಿತ್ರಿಬಾಯಿ ಪುಲೆ ಅವರಂತೆ ಕೆಲ ಹೋರಾಟಗಾರ್ತಿಯರು ಸಮಾಜದಲ್ಲಿ ಬದಲಾವಣೆಗೆ ಮಾಡಿದ ಹೋರಾಟದ ಪ್ರತಿಫಲವಾಗಿ ಇಂದು ಹೆಣ್ಣುಮಕ್ಕಳು ಶಿಕ್ಷಣ ಪಡೆಯುವಂತಾಗಿದೆ. ಆದರೆ ಶಿಕ್ಷಣ ಪಡೆದ ಕೆಲ ವಿದ್ಯಾರ್ಥಿನಿಯರು ಅದರ ನೈಜ ಲಾಭ ಪಡೆದುಕೊಳ್ಳದೇ ನಮ್ಮ ಸಂಪ್ರದಾಯ ಬಿಟ್ಟು ಪಾಶ್ಚಾತ್ಯ ಸಂಪ್ರದಾಯಕ್ಕೆ ಮಾರು ಹೋಗುತ್ತಿದ್ದಾರೆ.
ಹೀಗಾಗಿ ಈ ಕುರಿತು ಪಾಲಕರು ಮಕ್ಕಳಿಗೆ ಬುದ್ಧಿ ಹೇಳುವುದು ಅಗತ್ಯವಿದೆ ಎಂದರು. ಪ್ರಾಧ್ಯಾಪಕಿ ಡಾ| ಜಯದೇವಿ ಗಾಯಕವಾಡ ಮಾತನಾಡಿ, ಮಹಿಳೆಯರಿಗೆ ಶಿಕ್ಷಣ ನೀಡಲು ತಮ್ಮ ಜೀವನ ಸವೆಸುವ ಮೂಲಕ ದೇಶದಲ್ಲಿ ಮೊದಲ ಮಹಿಳಾ ಶಾಲೆ ಆರಂಭಿಸಿದ ಸಾವಿತ್ರಿಭಾಯಿ ಪುಲೆ ಅವರ ಜನ್ಮದಿನವನ್ನು ಶಿಕ್ಷಕಿಯರ ದಿನವನ್ನಾಗಿ ಆಚರಿಸಬೇಕು ಎಂದರು.
ಮನ್ಸೂರು ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರು ಸಾನ್ನಿಧ್ಯ ವಹಿಸಿದ್ದರು. ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಪುಷ್ಪಾವತಿ ಹಲಗಿ ಅಧ್ಯಕ್ಷತೆ ವಹಿಸಿದ್ದರು. ಪರಶುರಾಮ ನೀಲನಾಯಕ, ಲಕ್ಷ್ಮೀಗುಂಟ್ರಾಳ, ಆರ್.ಮೋಹನರಾಜ, ಚಿನ್ನಮ್ಮ ಶಿರಹಟ್ಟಿ, ಮಧುಲತಾ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.