25 ಸಾವಿರ ಲೀಡ್‌ನಿಂದ ಗೌಡ್ರ ಗೆಲ್ಲಿಸಿ
Team Udayavani, May 12, 2019, 11:20 AM IST
ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ವಿವಿಧೆಡೆ ರೋಡ್ ಶೋ ಮಾಡುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ ಯಾಚಿಸಿದರು.
ಕುಂದಗೋಳ ವಿಧಾನಸಭಾ ಕ್ಷೇತ್ರದ ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕಿನ ಅದರಗುಂಚಿ, ನೂಲ್ವಿ, ಶೆರೆವಾಡ, ಬೆಟದೂರು, ಕೂಬಿಹಾಳ, ಇಂಗಳಗಿ ಗ್ರಾಮಗಳಲ್ಲಿ ಮತಯಾಚಿಸಿದರು. ಅದರಗುಂಚಿ, ನೂಲ್ವಿ, ಶೆರೇವಾಡದಲ್ಲಿ ಮಾತನಾಡಿದ ಯಡಿಯೂರಪ್ಪ, ಪ್ರತಿ ಬಾರಿ ಬಿಜೆಪಿಗೆ ಅಭೂತಪೂರ್ವ ಬೆಂಬಲ ನೀಡುವ ನಿಮ್ಮೆಲ್ಲರಿಗೂ ಅಭಿನಂದನೆ. ಅನಿರೀಕ್ಷಿತವಾಗಿ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಂದಿದ್ದು, ಕಳೆದ ಬಾರಿ ಅತ್ಯಲ್ಪ ಮತಗಳಿಂದ ಸೋಲು ಕಂಡಿರುವ ಎಸ್.ಐ. ಚಿಕ್ಕನಗೌಡರ ಅವರು ಈ ಬಾರಿ ಸುಮಾರು 25 ಸಾವಿರ ಮತಗಳ ಅಂತರದಿಂದ ಜಯ ಗಳಿಸುವಂತೆ ನೀವೆಲ್ಲರೂ ಆಶೀರ್ವದಿಸಬೇಕು ಎಂದರು.
ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಅದರ ನಿರ್ವಹಣೆಗೆ ಕೆಲಸ ಮಾಡದೇ ರೆಸಾರ್ಟ್‌ಗಳಲ್ಲಿ ಮುಖ್ಯಮಂತ್ರಿಗಳು ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಈ ಹಿಂದೆ ಬಿಜೆಪಿ ನೀಡಿದ ಹಲವಾರು ಜನಪರ ಯೋಜನೆಗಳನ್ನು ಈಗಿನ ಸರ್ಕಾರ ಕೈಬಿಟ್ಟಿದೆ. ಈ ಸರಕಾರಕ್ಕೆ ಜನರ ಶ್ರೇಯೋಭಿವೃದ್ಧಿ ಬೇಕಾಗಿಲ್ಲ ಎಂದು ಹರಿಹಾಯ್ದರು.
ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ, ಮುಖಂಡರಾದ ಪ್ರಹ್ಲಾದ ಜೋಶಿ, ಕೋಟಾ ಶ್ರೀನಿವಾಸ ಪೂಜಾರಿ, ಶಂಕರಪಾಟೀಲ ಮುನೇನಕೊಪ್ಪ, ಕಟ್ಟಾ ಸುಬ್ರಮಣ್ಯ ನಾಯ್ಡು, ಮೋಹನ ಲಿಂಬಿಕಾಯಿ, ಎಂ.ಆರ್. ಪಾಟೀಲ, ಸೀಮಾ ಮಸೂತಿ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.