ಕಾರ್ಯಕರ್ತರ ಶ್ರಮದಿಂದ ದೊಡ್ಡ ಗೆಲುವು
•ಸಚಿವರಾಗಿ ಹುಬ್ಬಳ್ಳಿಗೆ ಅಂಗಡಿ ಮೊದಲ ಭೇಟಿ•ಬಿಜೆಪಿ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ
Team Udayavani, Jun 4, 2019, 12:12 PM IST
ಹುಬ್ಬಳ್ಳಿ: ಮೂರುಸಾವಿರ ಮಠಕ್ಕೆ ಭೇಟಿ ನೀಡಿದ್ದ ಸಚಿವ ಸುರೇಶ ಅಂಗಡಿ ದಂಪತಿಯನ್ನು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸನ್ಮಾನಿಸಿದರು.
ಹುಬ್ಬಳ್ಳಿ: ಟಿಕೆಟ್ ನೀಡುವುದು ಬೇಡ ಎಂದು ಹೇಳುತ್ತಿದ್ದ ಸಂದರ್ಭದಲ್ಲಿ ಅತೀ ಹೆಚ್ಚು ಮತಗಳ ಅಂತರದ ನನ್ನ ಗೆಲುವಿನ ಹಿಂದೆ ಪಕ್ಷದ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಪರಿಶ್ರಮ ಬಹುದೊಡ್ಡದಾಗಿದೆ ಎಂದು ಕೇಂದ್ರ ರೈಲ್ವೆ ಸಹಾಯಕ ಸಚಿವ ಸುರೇಶ ಅಂಗಡಿ ಹೇಳಿದರು.
ಗೋಕುಲ ರಸ್ತೆ ಮಾರುತಿ ನಗರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೇಶವ ಕುಂಜಕ್ಕೆ ಸೋಮವಾರ ಭೇಟಿ ನೀಡಿ ಆರೆಸ್ಸೆಸ್ ಸಂಸ್ಥಾಪಕ ಡಾ| ಕೇಶವ ಹೆಡಗೇವಾರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ರಾಷ್ಟ್ರೀಯವಾದ ವಿಚಾರದ ಮೇಲೆಯೇ ಈ ಲೋಕಸಭೆ ಚುನಾವಣೆ ನಡೆದಿದೆ. ದೇಶದ ಉಜ್ವಲ ಭವಿಷ್ಯಕ್ಕಾಗಿ ನರೇಂದ್ರ ಮೋದಿಯವರನ್ನು ಮತ್ತೂಮ್ಮೆ ಪ್ರಧಾನಿ ಮಾಡಬೇಕು ಎನ್ನುವ ಕಾರಣಕ್ಕೆ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಈ ಬಾರಿ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿ ಬೆಂಬಲಿಸಿರುವುದು ವಿಶೇಷವಾಗಿದೆ ಎಂದರು.
ಬೆಳಗಾವಿಯ ರಾಜಕಾರಣ ಅಷ್ಟೊಂದು ಸುಲಭವಲ್ಲ. ಭಾಷೆಯೂ ಕೂಡ ಚುನಾವಣೆಯ ಒಂದು ಅಂಶವಾಗಿದೆ. ಟಿಕೆಟ್ ನೀಡಬಾರದು ಎನ್ನುತ್ತಿದ್ದ ಸಂದರ್ಭದಲ್ಲಿ ಪಕ್ಷದ ನಾಯಕರು ನನ್ನ ಬಗ್ಗೆ ಒಲವು ವ್ಯಕ್ತಪಡಿಸಿ ಅವಕಾಶ ನೀಡಿದರು. ಕ್ಷೇತ್ರದ ಜನರು ನನ್ನ ಕೈಬಿಡಲಿಲ್ಲ. ಯಾರೂ ನಿರೀಕ್ಷೆ ಮಾಡದಷ್ಟು ಮತಗಳ ಅಂತರದಿಂದ ನನಗೆ ಗೆಲುವು ನೀಡಿದ್ದಾರೆ. ಕ್ಷೇತ್ರದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ಈ ಭಾಗದ ಪ್ರಮುಖ ಸಮಸ್ಯೆಗಳು, ರೈಲ್ವೆ ಯೋಜನೆಗಳ ಸಾಕಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಆರೆಸ್ಸೆಸ್ ಪ್ರಾಂತ ಸಹ ಕಾರ್ಯವಾಹ ಶ್ರೀಧರ ನಾಡಿಗೇರ ಮಾತನಾಡಿ, ಹಿಂದೆ ಸಮಾಜ ಒಡೆಯುವಂತಹ, ಪ್ರಾದೇಶಿಕ ಭಾವನೆ ಕೆರಳಿಸುವಂತಹ ರಾಜಕಾರಣವಿತ್ತು. ಕಾಂಗ್ರೆಸ್‌ನ ಈ ರಾಜಕಾರಣದಿಂದ ದೇಶದ ಜನರು ಬೇಸತ್ತು ದೇಶದ ಐಕ್ಯತೆ ಕಾಪಾಡುವ ಬಿಜೆಪಿಗೆ ಆಶೀರ್ವಾದ ನೀಡಿದ್ದಾರೆ. ಧರ್ಮ, ಜಾತಿ, ಉಪ ಜಾತಿಗಳ ಮೂಲಕ ರಾಜಕಾರಣ ಮಾಡಬಾರದು ಎನ್ನುವ ಸಂದೇಶವನ್ನು ಜನತೆ ನೀಡಿದೆ. ಮೋದಿಯವರ ಗುಣಾತ್ಮಕ ಅಂಶಗಳು, ರಾಷ್ಟ್ರೀಯವಾದ ಹಾಗೂ ಉಜ್ವಲ ದೇಶಕ್ಕಾಗಿ ಈ ಚುನಾವಣೆ ನಡೆದಿದೆ. ಸುರೇಶ ಅಂಗಡಿಯವರು ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಮುಖಂಡರಾದ ಈರಣ್ಣ ಜಡಿ, ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ ಸಾವಕಾರ, ಆರೆಸ್ಸೆಸ್ ಪ್ರಮುಖರಾದ ಶಿವಾನಂದ ಅವಟೆ, ಡಾ| ಗೋವಿಂದ ನರೇಗಲ್ಲ, ಸುಧಾಕರ ಶೆಟ್ಟಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.