ಮಹಿಳೆಯರಿಗೆ ಸೂಕ್ತ ಪ್ರೋತ್ಸಾಹ ಅಗತ್ಯ
Team Udayavani, May 5, 2018, 5:38 PM IST
ಚಿಕ್ಕೋಡಿ: ಮಹಿಳೆಯರ ಪ್ರತಿಭೆ, ಸಾಮರ್ಥ್ಯಗಳನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡುವುದರೊಂದಿಗೆ ಮಹಿಳೆಯರಿಗೆ ಸಾಮಾಜಿಕ ಸ್ಥಾನಮಾನ ನೀಡುವುದು ಅತ್ಯವಶ್ಯಕವಾಗಿದೆ ಎಂದು ನಿಪ್ಪಾಣಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶಿಕಲಾ ಜೊಲ್ಲೆ ಹೇಳಿದರು.
ಶುಕ್ರವಾರ ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಸಿದ್ನಾಳ ಗ್ರಾಮದಲ್ಲಿ ನಡೆದ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ನೆರೆದಿದ್ದ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದೆಲ್ಲೆಡೆ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬಿ ಬದುಕಿಗಾಗಿ ಸ್ವಯಂ ಉದ್ಯೋಗ, ಆರೋಗ್ಯ ರಕ್ಷಣೆ, ಆಶ್ರಯ ಇತ್ಯಾದಿ ಯೋಜನೆಗಳೊಟ್ಟಿಗೆ ಕ್ಷೇತ್ರದುದ್ದಕ್ಕೂ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಮಹಿಳಾ ಪರ ಚಿಂತನೆಗಳನ್ನು ಹಾಗೂ ಅವರ ಸಬಲೀಕರಣಕ್ಕಾಗಿ ಸುಮಾರು ಐದು ವರ್ಷಗಳಿಂದ ಶ್ರಮಿಸುತ್ತಾ ಬಂದಿದ್ದೇನೆ ಎಂದರು.
ಕ್ಷೇತ್ರದ ಮಹಿಳೆಯರಿಗಿರುವ ಎಲ್ಲ ಮೂಲಭೂತ ಹಾಗೂ ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಲು ಸದಾ ಕಟಿಬದ್ಧವಿದ್ದು, ಕ್ಷೇತ್ರಕ್ಕೆ ಅ ಧಿಕ ವೆಚ್ಚದಲ್ಲಿ ಅನುದಾನ ತಂದು ನಿಪ್ಪಾಣಿ ಮತಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪ ಮಾಡಲಾಗಿದೆ. ನಗರ ಹಾಗೂ ಗ್ರಾಮೀಣ ಭಾಗದ ಎಲ್ಲ ಗ್ರಾಮಗಳಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದರೊಂದಿಗೆ ಸಮಾಜದಲ್ಲಿರುವ ಪ್ರತಿ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರಲು ಪ್ರಯತ್ನಿಸಲಾಗಿದೆ ಎಂದ ಅವರು, ಮುಂಬರುವ ದಿನಗಳಲ್ಲಿ ಈ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ನನ್ನನ್ನು ಬೆಂಬಲಿಸಿ ಬಹುಮತಗಳಿಂದ ಆಯ್ಕೆ ಮಾಡುವುದರೊಂದಿಗೆ ಇನ್ನು ಹೆಚ್ಚಿನ ಜನಸೇವೆ ಮಾಡಲು ಅವಕಾಶ ನೀಡಬೇಕು ಎಂದರು.
ಗ್ರಾಮೀಣ ಬಿಜೆಪಿ ಮಹಿಳಾ ಅಧ್ಯಕ್ಷೆ ಭಾರತಿ ಅಡದಾಂಡೆ, ಗ್ರಾಪಂ ಅಧ್ಯಕ್ಷ ಕಿಶೋರ ನಲವಡೆ, ಅನ್ನಾಸಾಬ ಅಡದಾಂಡೆ, ಮನೋಹರ ಮಗದುಮ್, ಶಿವಾಜಿ ನಲವಡೆ, ಬಾಮು ಪಾಟೀಲ, ಅಭಯ ಪಾಟೀಲ, ವಿಜಯ ಪಾಟೀಲ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.