ಬೋಗೂರ ಮತ್ತು ಮಾದನಭಾವಿ ಗ್ರಾಮಗಳಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಭೇಟಿ
Team Udayavani, Aug 13, 2020, 2:45 PM IST
ಧಾರವಾಡ: ತಾಲೂಕಿನ ಬೋಗೂರ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿಯ ಮನೆಗೆ ಹಾಗೂ ಮಾದನಭಾವಿ ಪ್ರಕರಣದ ಸಂತ್ರಸ್ತರ ಮನೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳಾ ನಾಯ್ಡು ಇಂದು ಭೇಟಿ ನೀಡಿ ಬಾಲಕಿಯ ಕುಟುಂಬದ ಅಳಲು ಆಲಿಸಿ, ಆತ್ಮಸ್ಥೈರ್ಯ ತುಂಬಿದರು.
ಬೋಗೂರಿನಲ್ಲಿ ಮೃತ ಬಾಲಕಿಯ ತಾಯಿ ಲಲಿತಾ, ತಂದೆ ಪೂರ್ಣಾನಂದ ಕಂಬಿಮಠ ಅವರು ಮಗಳ ದುಸ್ಥಿತಿ ಮತ್ತು ಆತ್ಮಹತ್ಯೆಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮನವಿ ಮಾಡಿದರು.
ಆಯೋಗದ ಅಧ್ಯಕ್ಷೆ ಆರ್.ಪ್ರಮೀಳಾ ನಾಯ್ಡು ಮಾತನಾಡಿ, ಧಾರವಾಡ ತಾಲೂಕಿನ ಬೋಗೂರ ಮತ್ತು ಮಾದನಭಾವಿ ಗ್ರಾಮಗಳಲ್ಲಿ ಪ್ರತ್ಯೇಕವಾಗಿ ನಡೆದಿರುವ ಎರಡು ವಿಕೃತ ಕೃತ್ಯಗಳಲ್ಲಿ ನೊಂದ ಕುಟುಂಬಗಳೊಂದಿಗೆ ಆಯೋಗ, ಸರ್ಕಾರ ಇದೆ. ಸೂಕ್ತ ಕಾನೂನು ನೆರವು, ಆಪ್ತ ಸಮಾಲೋಚನೆಯ ಮೂಲಕ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸಲಾಗುವುದು. ಕುಟುಂಬದ ಸದಸ್ಯರು ಧೃತಿಗೆಡಬಾರದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಮಾತನಾಡಿ, ನೊಂದ ಕುಟುಂಬದ ಭದ್ರತೆಯ ಜವಾಬ್ದಾರಿ ಪೊಲೀಸ್ ಇಲಾಖೆಗೆ ಸೇರಿದೆ, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡುವುದಿಲ್ಲ. ಮಾದನಭಾವಿ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಸಹ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.ಇನ್ನುಳಿದ ಆರೋಪಿಗಳನ್ನು ಕೂಡಲೇ ವಶಕ್ಕೆ ಪಡೆಯಲಾಗುವುದು ಎಂದರು.
ಬೋಗೂರಿನ ಬಾಲಕಿಯ ಕುಟುಂಬಕ್ಕೆ ತುರ್ತು ವೆಚ್ಚವಾಗಿ 10 ಸಾವಿರ ರೂಪಾಯಿಗಳ ನೆರವಿನ ಚೆಕ್ ಹಸ್ತಾಂತರಿಸಲಾಯಿತು. ಮೃತ ಬಾಲಕಿಯ ಪಾಲಕರು ಮತ್ತು ಕುಟುಂಬದ ಸದಸ್ಯರು ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬಾರದು.
ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಶೆಟ್ಟರ್, ಡಿವೈಎಸ್ ಪಿ ರವಿ ನಾಯಕ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲಲಿತಾ, ರಾಜೇಶ್ವರಿ ಅಳಗವಾಡಿ, ಸಿಪಿಐ ಎಸ್.ಸಿ.ಪಾಟೀಲ, ಪಿಎಸ್ ಐ ಪ್ರಸಾದ ಫಣಿಕರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.