ಜನರ ಧ್ವನಿಯಾಗಿ ಕೆಲಸ ಮಾಡುವೆ: ಬಾಳನಗೌಡ್ರ
Team Udayavani, Apr 22, 2019, 11:39 AM IST
ಧಾರವಾಡ: ಜಿಲ್ಲೆಯ ಮತದಾರರು ಈ ಚುನಾವಣೆಯಲ್ಲಿ ಆರಿಸಿ ಕಳುಹಿಸಿದರೆ ಲೋಕಸಭಾ ವ್ಯಾಪ್ತಿಯ 8 ತಾಲೂಕುಗಳ ಮನೆಯ ಜೀತದಾಳಾಗಿ ಅಭಿವೃದ್ಧಿಯ ಕೆಲಸ ಮಾಡುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಬಾಳನಗೌಡ್ರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಹದಾಯಿ, ರೈತರ ಸಮಸ್ಯೆಗಳು, ಬೆಳೆ ಸಾಲ ಮನ್ನಾ, ದರ ನಿಗದಿ ಸೇರಿದಂತೆ ಜಿಲ್ಲೆಯ ಸಮಸ್ಯೆಗಳಿಗೆ ಜನರ ಧ್ವನಿಯಾಗಿ ಕೆಲಸ ಮಾಡುತ್ತೇನೆ. ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳಲ್ಲಿನ ಎಲ್ಲ ರೈತರ 3 ಲಕ್ಷದ ವರೆಗಿನ ಸಾಲಾ ಮನ್ನಾ ಮಾಡಲು ಪ್ರಯತ್ನಿಸುತ್ತೇನೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ, ಬೆಳೆ ವಿಮಾ ಯೋಜನೆ ತಕ್ಷಣ ರೈತರ ಖಾತೆಗೆ ಜಮಾ ಮಾಡಿಸುತ್ತೇನೆ. ಜೊತೆಗೆ ಕಳಸಾ ಬಂಡೂರಿ, ಮಹದಾಯಿ ನೀರನ್ನು ಮಲಪ್ರಭಾ ನದಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಸಮಾಜದ ಎಲ್ಲ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್, ಸರಕಾರಿ ನೌಕರರಿಗೆ ದವಸ ಧಾನ್ಯಗಳನ್ನು ಅರ್ಧ ಬೆಲೆಯಲ್ಲಿ ನೀಡುತ್ತೇನೆ. ಅಂಗವಿಕಲರಿಗೆ ಹಾಗೂ ಹಿರಿಯ ನಾಗರಿಕರಿಗೆ ಮಾಸಿಕ 5 ಸಾವಿರ ಗೌರವಧನ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಚಂದ್ರಗೌಡ ಪಾಟೀಲ, ಚಂದ್ರಗೌಡ ರಾಚನಗೌಡ, ಮಲ್ಲಪ್ಪ ಮೇಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.