ಜಿಲ್ಲಾದ್ಯಂತ ಶ್ರದ್ಧಾಭಕ್ತಿಯಿಂದ ಪವನಸುತನ ಆರಾಧನೆ
ವಿವಿಧೆಡೆ ರಥೋತ್ಸವ ಸಂಭ್ರಮ
Team Udayavani, Apr 17, 2022, 10:14 AM IST
ಧಾರವಾಡ: ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಹನುಮ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಹನುಮ ಜಯಂತಿ ಶನಿವಾರವೇ ಬಂದ ಕಾರಣ ಈ ಸಲ ಮತ್ತಷ್ಟು ಸಂಭ್ರಮದಿಂದ ಆಚರಿಸಿದ್ದು, ಭಕ್ತರ ಉತ್ಸಾಹ ಇಮ್ಮಡಿಗೊಂಡಿತ್ತು.
ನುಗ್ಗಿಕೇರಿ ದೇವಸ್ಥಾನದಲ್ಲಿ ಬೆಳಗಿನ ಜಾವ 4ರಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭಗೊಂಡವು. ಅಭಿಷೇಕ, ಅಲಂಕಾರದ ಬಳಿಕ 6:11 ಗಂಟೆಗೆ ಹನುಮಂತ ದೇವರಿಗೆ ತೊಟ್ಟಿಲೋತ್ಸವ ಸೇವೆ ನಡೆಯಿತು. ಬೆಳಗ್ಗೆ 11 ಗಂಟೆಗೆ ರಥೋತ್ಸವ ಜರುಗಿತು.
ಆ ನಂತರ ತೀರ್ಥ ಪ್ರಸಾದ ಕಾರ್ಯಕ್ರಮಗಳು ಸಾಂಗವಾಗಿ ಜರುಗಿದವು. ದೇವಸ್ಥಾನ ಆವರಣದಲ್ಲಿ ಯಾವುದೇ ಸಮುದಾಯಕ್ಕೆ ವ್ಯಾಪಾರ ಮಾಡಲು ಅವಕಾಶ ನಿರಾಕರಿಸಿತ್ತು. ದೇವಸ್ಥಾನದ ಆವರಣದಲ್ಲಿನ ಎಲ್ಲ ಅಂಗಡಿಗಳನ್ನು ತೆರವುಗೊಳಿಸಲಾಗಿತ್ತು. ದೇವಸ್ಥಾನಕ್ಕೆ ಸಂಬಂ ಧಿಸಿದ ಜಾಗೆ ಹೊರತುಪಡಿಸಿ ದೂರದಲ್ಲಿ ವ್ಯಾಪಾರಿಗಳು ಅಂಗಡಿಗಳನ್ನು ತಾತ್ಕಾಲಿಕವಾಗಿ ಸ್ಥಾಪಿಸಿಕೊಂಡಿದ್ದು, ಅಲ್ಲಿಂದಲೇ ಭಕ್ತರು ತೆಂಗಿನಕಾಯಿ, ಬಾಳೆಹಣ್ಣು ಹಾಗೂ ಪೂಜಾ ವಸ್ತುಗಳನ್ನು ತಂದು ದೇವರಿಗೆ ಅರ್ಪಿಸಿದರು.
ದೇವಸ್ಥಾನದಲ್ಲಿ ಗದ್ದಲ-ಗೊಂದಲ ಸೃಷ್ಟಿಯಾಗಬಾರದು ಎಂದು ಪೊಲೀಸ್ ಪಹರೆ ವ್ಯವಸ್ಥೆ ಮಾಡಲಾಗಿತ್ತು. ಧಾರವಾಡದ ಮುದಿ ಮಾರುತಿ ದೇವಸ್ಥಾನ, ಲೈನ್ ಬಜಾರ ಹನುಮಂತ ದೇವಸ್ಥಾನಗಳಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ಆಚರಿಸಲಾಯಿತು.
ಇಲ್ಲಿಯ ಶಾಂತಿನಿಕೇತನ ನಗರದಲ್ಲಿನ ಕರೆಮ್ಮ ದೇವಸ್ಥಾನದಲ್ಲಿ ಶನಿವಾರ ಹನುಮ ಜಯಂತಿ ಅಂಗವಾಗಿ ಸುಮಂಗಲೆಯರಿಂದ ತೊಟ್ಟಿಲೋತ್ಸವ ಜರುಗಿತು. ಕೆ.ಸಿ. ಪಾರ್ಕ್ ಬಳಿಯ ಡಯಟ್ ರಸ್ತೆಯಲ್ಲಿರುವ ದಾಮೋದರ ಆವರಣದಲ್ಲಿನ ಆಂಜನೇಯ ದೇವಸ್ಥಾನದಲ್ಲಿ ಹನುಮನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸುಮಂಗಲೆಯರಿಂದ ತೊಟ್ಟಿಲೋತ್ಸವ ನಡೆಯಿತು. ಮದಿಹಾಳದ ಮಾರುತಿ ದೇವಸ್ಥಾನದಲ್ಲೂ ಹನುಮ ಜಯಂತಿ ನಿಮಿತ್ತ ತೊಟ್ಟಿಲೋತ್ಸವ ಜರುಗಿತು.
ನಂತರ ನಡೆದ ರಥೋತ್ಸವದಲ್ಲಿ ಇಷ್ಟಾರ್ಥ ಸಿದ್ಧಿಗೆ ಭಕ್ತರು ಲಿಂಬೆಹಣ್ಣು, ಉತ್ತತ್ತಿ, ಬಾಳೆಹಣ್ಣು ಎಸೆದು ಪ್ರಾರ್ಥಿಸಿದರು. ಸಮೀಪದ ಮಾಳಮಡ್ಡಿ ಗೌಳಿಗಲ್ಲಿಯ ಮಾರುತಿ ದೇವಸ್ಥಾನದಲ್ಲಿ ವಿಶೇಷ ಹೋಮ ಮಾಡಲಾಯಿತು. ಕಾಮನಕಟ್ಟಿ ಆಂಜನೇಯ ದೇವಸ್ಥಾನದಲ್ಲಿ ಹನುಮ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಹನುಮಂತ ದೇವರ ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದ ಮೂರ್ತಿ ಅಲಂಕಾರ, ಅಭಿಷೇಕಗಳು ನಡೆದವು. ಕೆಲವು ಗ್ರಾಮಗಳಲ್ಲಿ ಜಾತ್ರೆಯೂ ಇದ್ದು, ಅದ್ಧೂರಿಯಿಂದ ನಡೆಯಿತು. ಯಾದವಾಡ ಗ್ರಾಮದಲ್ಲಿ ಹನುಮಂತ ದೇವರ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆ ಪೂಜೆಗಳೊಂದಿಗೆ ತೊಟ್ಟಿಲೋತ್ಸವ ಜರುಗಿತು. ಸಂಜೆ 5 ಗಂಟೆಗೆ ರಥೋತ್ಸವ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.