ಶಿಗ್ಗಾವಿ ಕ್ಷೇತ್ರದಲ್ಲಿ ತೀವ್ರಗೊಂಡ ಯಾದವಿ ಕಲಹ
Team Udayavani, Nov 29, 2017, 12:37 PM IST
ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಸಮೀಪವಾಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳುತ್ತಿವೆ. ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ವಿಚಾರದಲ್ಲಿ ಅಣ್ಣ-ತಮ್ಮರಂತಿರುವ ಶಾಸಕ ಬಸವರಾಜ ಬೊಮ್ಮಾಯಿ ಹಾಗೂ ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ ನಡುವೆ ಪೈಪೋಟಿ ತೀವ್ರಗೊಂಡಿದ್ದು, ಪಕ್ಷದ ವರಿಷ್ಠರ ಚಿಂತೆ ಹೆಚ್ಚುವಂತೆ ಮಾಡಿದೆ.
ಶಿಗ್ಗಾವಿ ಕ್ಷೇತ್ರದಲ್ಲಿ ಸತತವಾಗಿ ಎರಡು ಬಾರಿ ಗೆಲುವು ಸಾಧಿಸಿರುವ ಬಸವರಾಜ ಬೊಮ್ಮಾಯಿ ಮುಂದಿನ ಬಾರಿಯೂ ತಾವೇ ಬಿಜೆಪಿ ಅಭ್ಯರ್ಥಿ ಎಂದುಕೊಂಡಿದ್ದಾರೆ. ಆದರೆ ಈ ಹಿಂದೆ ಬೊಮ್ಮಾಯಿಗೆ ಕ್ಷೇತ್ರ ಬಿಟ್ಟು ಕೊಟ್ಟ ತಮಗೆ ಈ ಬಾರಿ ಟಿಕೆಟ್ ಬೇಕೆ ಬೇಕು ಎಂದು ಸೋಮಣ್ಣ ಬೇವಿನಮರದ ಪಟ್ಟು ಹಿಡಿದಿರುವುದು ಬಿಕ್ಕಟ್ಟು ಸೃಷ್ಟಿಸುತ್ತಿದೆ.
ಟಿಕೆಟ್ ಸಮರ್ಥನೆಗೆ ವಾದವೇನು?: ಶಿಗ್ಗಾವಿಯಿಂದ ಸತತ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ, ಉತ್ತಮ ವರ್ಚಸ್ಸು ಇದ್ದು, ಪಕ್ಷಕ್ಕೆ ಹಾನಿಯುಂಟಾಗುವ, ಜನರ ವಿರೋಧ ಕಟ್ಟಿಕೊಳ್ಳುವ ಕಾರ್ಯ ಮಾಡಿಲ್ಲ.
ಕ್ಷೇತ್ರದಲ್ಲಿ ಪೂರಕ ವಾತಾವರಣ ಇದ್ದು, ತಮಗೇ ಟಿಕೆಟ್ ಮುಂದುವರಿಸಬೇಕು ಎಂಬುದು ಶಾಸಕ ಬಸವರಾಜ ಬೊಮ್ಮಾಯಿ ಅವರ ವಾದ ಎನ್ನಲಾಗುತ್ತಿದೆ. ಇದೇ ಕ್ಷೇತ್ರದಿಂದ ಶಾಸಕರಾಗಿ, ಜಲಸಂಪನ್ಮೂಲ ಸಚಿವರಾಗಿ ಇದೀಗ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿರುವ, ಅಧಿಕಾರ ಅನುಭವಿಸಿದ್ದ ಬೊಮ್ಮಾಯಿಗೆ ಮುಂದಿನ ಚುನಾವಣೆಯಲ್ಲಿ ಗೆಲುವಿಗಿಂತ ಹೆಚ್ಚಿನ ರೀತಿ ಟಿಕೆಟ್ ಪೈಪೋಟಿಯಲ್ಲಿ ಗೆಲುವಿನ ಸವಾಲು ಎದುರಾಗಿದೆ.
ಇನ್ನೊಂದು ಕಡೆ ಹಾವೇರಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಶ್ರಮ ವಹಿಸಿರುವ ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ, ಈ ಬಾರಿ ಟಿಕೆಟ್ ನೀಡಲೇಬೇಕೆಂದು ಪಕ್ಷದ ವರಿಷ್ಠರ ಮೇಲೆ ಒತ್ತಡ ತರತೊಡಗಿದ್ದಾರೆ. ಅಷ್ಟೇ ಅಲ್ಲ ಒಂದು ವೇಳೆ ಟಿಕೆಟ್ ದೊರೆಯದಿದ್ದರೆ ಮುಂದಿನ ರಾಜಕೀಯ ತೀರ್ಮಾನಕ್ಕೂ ಹೆಜ್ಜೆ ಇರಿಸುವ ಸಾಧ್ಯತೆ ಇಲ್ಲದಿಲ್ಲ ಎನ್ನಲಾಗುತ್ತಿದೆ.
ನಾನು ಸಿಎಂ ಆಗೋದು ಇಷ್ಟವಿಲ್ಲವೇ?: ಬಸವರಾಜ ಬೊಮ್ಮಾಯಿ ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾದ ಸಂದರ್ಭದಲ್ಲಿ ಸೋಮಣ್ಣ ಬೇವಿನಮರದ ಆ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬೊಮ್ಮಾಯಿಗೆ ಟಿಕೆಟ್ ನೀಡುವ ಉದ್ದೇಶದಿಂದ ಬೇವಿನಮರದ ಮೇಲೆ ಟಿಕೆಟ್ ತ್ಯಾಗದ ಒತ್ತಡ ತರಲಾಗಿತ್ತು.
ಕೆಲ ಮೂಲಗಳ ಪ್ರಕಾರ 2008ರ ಚುನಾವಣೆ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಅವರೇ “ಏನಪ್ಪಾ ಬೇವಿನಮರದ ನಾನು ಮುಖ್ಯಮಂತ್ರಿ ಆಗುವುದು ನಿನಗೆ ಇಷ್ಟ ಇಲ್ಲವೇ, ಪಕ್ಷದ ಹಿತ ಹಾಗೂ ನಾನು ಸಿಎಂ ಆಗುವ ದೃಷ್ಟಿಯಿಂದಲಾದರೂ ಟಿಕೆಟ್ ತ್ಯಾಗ ಮಾಡು’ ಎಂದು ಹೇಳಿದ್ದರು ಎನ್ನಲಾಗಿದೆ.
ಸ್ವತಃ ಬಸವರಾಜ ಬೊಮ್ಮಾಯಿ ಅವರು ಬೇವಿನಮರದಗೆ ಮನವಿ ಮಾಡಿ ನಾನು-ನೀವು ಅಣ್ಣ-ತಮ್ಮರಂತಿದ್ದೇವೆ. ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು. ಎರಡು ಅವಧಿಗೆ ಮಾತ್ರ ಸ್ಪರ್ಧಿಸುತ್ತೇನೆ ನಂತರ ಕ್ಷೇತ್ರ ಬಿಟ್ಟು ಕೊಡುವುದಾಗಿಯೂ ಭರವಸೆ ನೀಡಿದ್ದರಲ್ಲದೆ, ಕೊನೆವರೆಗೂ ಅಣ್ಣ-ತಮ್ಮರಾಗಿರೋಣ ಎಂದು ಹೇಳಿದ್ದರೆನ್ನಲಾಗಿದೆ.
ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಸೂಚನೆ, ಬೊಮ್ಮಾಯಿ ಅವರೊಂದಿಗಾದ ಅಲಿಖೀತ ಒಪ್ಪಂದದಂತೆ ಎರಡು ಅವಧಿವರೆಗೆ ಟಿಕೆಟ್ ವಿಚಾರದಲ್ಲಿ ನಾನು ಯಾವುದೇ ಕ್ಯಾತೆ ತೆಗೆದಿಲ್ಲ. ಬೊಮ್ಮಾಯಿವರು ಶಾಸಕರಾದ ನಂತರ ಅವರ ಯಾವುದೇ ಕಾರ್ಯಕ್ಕೆ ಅಡ್ಡಿಯೂ ಪಡಿಸಿಲ್ಲ. ಅಲಿಖೀತ ಒಪ್ಪಂದದಂತೆ ಎರಡು ಅವಧಿ ಮುಗಿದಿದ್ದರಿಂದ ಟಿಕೆಟ್ ಕೇಳುತ್ತಿದ್ದೇನೆ ಎಂಬುದು ಬೇವಿನಮರದ ಬೇಡಿಕೆ ಎನ್ನಲಾಗಿದೆ.
ರಾಣೆಬೆನ್ನೂರು ವಲಸೆ ಸುದ್ದಿ: ಕೆಲ ದಿನಗಳ ಹಿಂದೆ ಬಸವರಾಜ ಬೊಮ್ಮಾಯಿ ಶಿಗ್ಗಾವಿ ತೊರೆದು ರಾಣೆಬೆನ್ನೂರು ಕ್ಷೇತ್ರಕ್ಕೆ ವಲಸೆ ಹೋಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಸ್ವತಃ ಬೊಮ್ಮಾಯಿ ಇದನ್ನು ತಳ್ಳಿ ಹಾಕಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ ನಾನೇಕೆ ಕ್ಷೇತ್ರ ತೊರೆಯಲಿ ಎಂದು ಪಶ್ನಿಸಿದ್ದರೆನ್ನಲಾಗಿದೆ.
ನಂತರದಲ್ಲಿ ರಾಣೆಬೆನ್ನೂರಿನಿಂದ ಬಿ.ಎಸ್.ಯಡಿಯೂರಪ್ಪ ಅಥವಾ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಸ್ಪರ್ಧಿಸುತ್ತಾರೆಂಬ ಸುದ್ದಿ ಕೂಡ ಹಬ್ಬಿತ್ತು. ಇಬ್ಬರೂ ಅದನ್ನು ನಿರಾಕರಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಬಿಜೆಪಿ ವರಿಷ್ಠರು ಬೊಮ್ಮಾಯಿಯನ್ನೇ ಮುಂದುವರಿಸುತ್ತಾರೋ ಅಥವಾ ಬೇವಿನಮರದಗೆ ಮಣೆ ಹಾಕುತ್ತಾರೋ?
ಟಿಕೆಟ್ ತಪ್ಪಿದರೆ ಬೊಮ್ಮಾಯಿ ರಾಣೆಬೆನ್ನೂರು ಕಡೆ ಮುಖ ಮಾಡುತ್ತಾರೋ ಅಥವಾ ತವರು ಜಿಲ್ಲೆ ಧಾರವಾಡ ಜಿಲ್ಲೆ ಕಡೆ ಮುಖ ಮಾಡುತ್ತಾರೋ, ಟಿಕೆಟ್ ದೊರೆಯದಿದ್ದರೆ ಬೇವಿನಮರದ ಮುಂದಿನ ನಿಲುವೇನು ಎಂಬ ಕುತೂಹಲ ಸೃಷ್ಟಿಸಿದೆ.
* ಅಮರೇಗೌಡ ಗೋನವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.