ಸ್ಮಾರ್ಟ್‌ಸಿಟಿ ಟೆಂಡರ್‌ಗೆ ವರ್ಷಾಂತ್ಯದ ಗಡುವು
Team Udayavani, Sep 18, 2019, 9:35 AM IST
ಹುಬ್ಬಳ್ಳಿ: ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಸ್ಮಾರ್ಟ್ ಸಿಟಿ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ. ಕಾಮಗಾರಿಗಳು ಗೋಚರಿಸುತ್ತಿಲ್ಲ ಎಂಬ ಅಸಮಾಧಾನ-ಆರೋಪಗಳ ನಡುವೆ, 2019ರ ಡಿಸೆಂಬರ್‌ದೊಳಗೆ ಪ್ರೊಜೆಕ್ಟ್ಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಬೇಕು. 2020ರ ಮಾರ್ಚ್‌ದೊಳಗೆ ಕಾಮಗಾರಿಗಳಿಗೆ ಕೆಲಸದ ಕಾರ್ಯಾದೇಶ(ವರ್ಕ್ ಆರ್ಡರ್)ನೀಡಬೇಕೆಂದು ಕೇಂದ್ರ ಸರಕಾರ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.
ಸ್ಮಾರ್ಟ್ ಸಿಟಿ ಯೋಜನೆಯ ಎರಡನೇ ಪಟ್ಟಿಯಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ಹುಬ್ಬಳ್ಳಿ-ಧಾರವಾಡದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ ಎಂಬ ಬೇಸರ ಜನರದ್ದಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ತೀವ್ರಗೊಳಿಸುವ, ಕಾಲಮಿತಿಯೊಳಗೆ ಕಾಮಗಾರಿಗಳ ಪೂರ್ಣಗೊಳಿಸಲು ಒತ್ತು ನೀಡಿರುವ ಕೇಂದ್ರ ಸರಕಾರ, ಕಾಲಮಿತಿಯ ಪಟ್ಟಿಯಂತೆಯೇ ಎಲ್ಲ ಯೋಜನೆಗಳ ಅನುಷ್ಠಾನ ಆಗಲೇಬೇಕೆಂದು ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ಎಲ್ಲ ಮಹಾನಗರಗಳಿಗೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದೆ.
ಶೇ.25 ಕಾಮಗಾರಿ ಪೂರ್ಣ ಅವಶ್ಯ: ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ನಿಟ್ಟಿನಲ್ಲಿ ಆಯಾ ರಾಜ್ಯಗಳ ರಾಜ್ಯ ಸರಕಾರದ ಸಹಕಾರವೂ ಅವಶ್ಯವಾಗಿದೆ. ಯೋಜನೆಗೆ ಕೇಂದ್ರ-ರಾಜ್ಯ ಸರಕಾರಗಳು ಸಮಾನ ಹಣ ನೀಡುತ್ತಿವೆ. ಯೋಜನೆ ಪ್ರಗತಿ ಮಾತ್ರ ನಿರೀಕ್ಷಿತ ರೀತಿಯಲ್ಲಿ ಇಲ್ಲದಿರುವುದು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಲ್ಲಿ ಬೇಸರ ತರಿಸುವಂತೆ ಮಾಡಿದೆ.
ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ನಿಟ್ಟಿನಲ್ಲಿ ವಿವಿಧ ಕಡೆ ಟೀಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರಕಾರ ಹಲವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕೇಂದ್ರದ ನಿಯಮದ ಪ್ರಕಾರ 2019ರ ಡಿಸೆಂಬರ್ ಅಂತ್ಯದೊಳಗೆ ಸ್ಮಾರ್ಟ್ ಯೋಜನೆಯ ಎಲ್ಲ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲೇಬೇಕಿದೆ.
2020ರ ಮಾರ್ಚ್ ಅಂತ್ಯದೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದ ಎಲ್ಲ ಕಾಮಗಾರಿಗಳಿಗೆ ಕೆಲಸದ ಆದೇಶ ಪತ್ರ ನೀಡಬೇಕಿದೆ. ಅದೇ ರೀತಿ 2020ರ ಜೂನ್ ಅಂತ್ಯದೊಳಗೆ ವಿವಿಧ ಯೋಜನೆಗಳ ಕಾಮಗಾರಿ ಕನಿಷ್ಠ ಶೇ.25ರಷ್ಟಾದರೂ ಮುಗಿಯಬೇಕಿದೆ.
ಹು.ಧಾ.ದಲ್ಲಿ 54 ಪ್ರೊಜೆಕ್ಟ್: ಅವಳಿನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಒಟ್ಟು 54 ಪ್ರೊಜೆಕ್ಟ್ಗಳನ್ನು ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಅಂದಾಜು 304.51ಕೋಟಿ ರೂ.ವೆಚ್ಚದ 17 ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿವೆ. ಅದೇ ರೀತಿ 368.57ಕೋಟಿ ರೂ.ವೆಚ್ಚದ ಸುಮಾರು 25 ಪ್ರೊಜೆಕ್ಟ್ಗಳು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಕಾಮಗಾರಿ ಕೆಲಸದಾದೇಶ ಪತ್ರ ನೀಡಲಾಗಿದೆ. ಕೆಲ ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ. ಅಂದಾಜು 283.05 ಕೋಟಿ ರೂ.ವೆಚ್ಚದಲ್ಲಿನ ನಾಲಾ ಅಭಿವೃದ್ಧಿ, ನೆಹರು ಮೈದಾನ, ಉಣಕಲ್ಲ ಕೆರೆ ಇನ್ನಿತರ ಕಾಮಗಾರಿಗಳು ಡಿಪಿಆರ್ ಹಂತದಲ್ಲಿವೆ. ಒಟ್ಟು ಎಂಟು ಕಾಮಗಾರಿಗಳು ಇನ್ನೂ ಬಾಕಿ ಇದ್ದು, ಇದರಲ್ಲಿ ಆರು ಕಾಮಗಾರಿ ಡಿಪಿಆರ್ ಹಂತದಲ್ಲಿದ್ದರೆ, ಎರಡು ಕಾಮಗಾರಿ ಕಾನ್ಸೆಪ್ಟ್ ಹಂತದಲ್ಲಿವೆ. ಅಕ್ಟೋಬರ್ ಅಂತ್ಯದೊಳಗೆ ಟೆಂಡರ್ ಪ್ರಕ್ರಿಯೆ ಕೈಗೊಳ್ಳಲು ನಿರ್ಧರಿಸಲಾಗಿದೆ.
ಹೊಸೂರು ವೃತ್ತದ ಬಳಿ ಇರುವ ವೇರ್‌ಹೌಸ್ ಜಾಗ ಬಳಕೆ ಇಲ್ಲದೆ ಇದ್ದು, ಆ ಜಾಗ ಪಡೆದು ಅಲ್ಲಿ ಸಾರ್ವಜನಿಕರ ಬಳಕೆಗೆ ಕೆಲ ಸೌಲಭ್ಯಗಳನ್ನು ನೀಡಲು ಯೋಜಿಸಲಾಗಿದೆಯಾದರೂ, ಜಾಗ ನೀಡಿಕೆಗೆ ವಾರ್ಷಿಕ 1.29 ಕೋಟಿ ರೂ.ಗಳ ಬಾಡಿಗೆ ಬೇಡಿಕೆ ಇರಿಸಿದ್ದರಿಂದ ಸ್ಮಾರ್ಟ್ ಸಿಟಿ ಯೋಜನೆ ಹಾಗೂ ವೇರ್‌ಹೌಸ್‌ಗೆ ಸಂಬಂಧಿಸಿದ ಇಲಾಖೆ ನಡುವೆ ಚರ್ಚೆ ನಡೆಯುತ್ತಿದೆ.
ಈಗಾಗಲೇ ಎಸ್‌ಪಿವಿ ರಚನೆಯಾಗಿದ್ದು, ಕಂಟ್ರೋಲ್ ಆ್ಯಂಡ್ ಕಮಾಂಡ್ ರೂಂ ರೂಪುಗೊಂಡಿದೆ. ಜನತಾ ಬಜಾರ್, ಎಂ.ಜಿ.ಮಾರುಕಟ್ಟೆ ಅಭಿವೃದ್ಧಿ ಕಾಮಗಾರಿ ಇನ್ನು ತೀವ್ರತೆ ಪಡೆಯಬೇಕಿದೆ. ಬಹುಪಯೋಗಿ ಕಾರುಗಳ ನಿಲುಗಡೆ ಕಟ್ಟಡ ಕಾಮಗಾರಿ ಶುರುವಾಗಿದೆ. ಕೆಲ ಕಾಮಗಾರಿಗಳಿಗೆ ಟೆಂಡರ್ ಹಾಕಲು ಗುತ್ತಿಗೆದಾರರು ಮುಂದೆ ಬಾರದ್ದರಿಂದ ಮತ್ತೆ ಟೆಂಡರ್ ಕರೆಯಬೇಕಿದೆ.
ಸ್ಮಾರ್ಟ್ ಸಿಟಿ ಯೋಜನೆಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರು ಇರಲಿಲ್ಲ, ಸಿಬ್ಬಂದಿ ಕೊರತೆ ಇತ್ತು. ಆದರೆ ಇದೀಗ ಪೂರ್ಣಾವಧಿ ಎಂಡಿ ಬಂದಿದ್ದು, ಸ್ಮಾರ್ಟ್ ಸಿಟಿ ಯೋಜನೆ ನಿರ್ವಹಣೆಗೆ ಹೊರಗುತ್ತಿಗೆ ಆಧಾರದಲ್ಲಿ ಮುಖ್ಯ ಅಭಿಯಂತರ, ಸಹಾಯಕ ಹಾಗೂ ಕಿರಿಯ ಅಭಿಯಂತರು ಸೇರಿದಂತೆ ಒಟ್ಟು 33 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿ ಕೊರತೆ ಇಲ್ಲವಾಗಿದೆ. ಇನ್ನಾದರೂ ಸ್ಮಾರ್ಟ್ ಸಿಟಿ ಯೋಜನೆ ನಿರೀಕ್ಷಿತ ರೀತಿಯಲ್ಲಿ ಅನುಷ್ಠಾನಗೊಳ್ಳುವುದೇ ಕಾದು ನೋಡಬೇಕು.
ಕ್ವಾಲಿಟಿ ಕಂಟ್ರೋಲ್ ಕಚೇರಿ: ವಿವಿಧ ಕಾಮಗಾರಿಗೆ ಬಳಸುವ ಸಾಮಗ್ರಿಗಳ ಗುಣಮಟ್ಟ ಪರೀಕ್ಷೆಗೆ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಕ್ವಾಲಿಟಿ ಕಂಟ್ರೋಲ್ ಕಚೇರಿಯನ್ನು ಇಲ್ಲಿನ ಹೊಸೂರು ಬಳಿ ಆರಂಭಿಸಲಾಗುತ್ತದೆ. ವಿವಿಧ ಕಾಮಗಾರಿಗಳಿಗೆ ಬಳಸುವ ಜಲ್ಲಿ, ಮರಳು ಇನ್ನಿತರ ಸಾಮಗ್ರಿಗಳ ಗುಣಮಟ್ಟ ಪರೀಕ್ಷೆಯನ್ನು ಈ ಕಚೇರಿಯಲ್ಲಿ ಕೈಗೊಳ್ಳಲಾಗುತ್ತದೆ. ಸರಕಾರದ ಲೋಕೋಪಯೋಗಿ, ಜಲಸಂಪನ್ಮೂಲ ಇಲಾಖೆ ಸೇರಿದಂತೆ ಸರಕಾರದ ವಿವಿಧ ಇಲಾಖೆಗಳು ತಾವು ಬಳಸುವ ಸಾಮಗ್ರಿಗಳ ಗುಣಮಟ್ಟ ಪರೀಕ್ಷೆಯನ್ನು ಇಲ್ಲಿ ಕೈಗೊಳ್ಳಬಹುದಾಗಿದೆ. ಅಂದಾಜು 85 ಲಕ್ಷ ರೂ.ವೆಚ್ಚದಲ್ಲಿ ಕ್ವಾಲಟಿ ಕಂಟ್ರೋಲ್ ಕಚೇರಿ ರೂಪುಗೊಳ್ಳಲಿದ್ದು, ಗುಣಮಟ್ಟ ಪರೀಕ್ಷೆಗೆ ಅಗತ್ಯವಿರುವ ಅತ್ಯಾಧುನಿಕ ಸಮಾಗ್ರಿಗಳನ್ನು ಇದು ಹೊಂದಲಿದೆ. ಅದೇ ರೀತಿ ಕಚೇರಿಯಲ್ಲಿ ಒಬ್ಬರು ಸಹಾಯಕ ಅಭಿಯಂತರ ಹಾಗೂ ಇಬ್ಬರು ಸಿಬ್ಬಂದಿ ಇರಲಿದ್ದಾರೆ. ಸುಮಾರು 3ಸಾವಿರ ಚದರ ಅಡಿ ಜಾಗದಲ್ಲಿ ಕಚೇರಿ ರೂಪುಗೊಳ್ಳಲಿದೆ.
•ಅಮರೇಗೌಡ ಗೋನವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.