ಯೋಗ ಸರ್ವರೋಗ ನಿವಾರಕ
Team Udayavani, Jun 7, 2017, 4:47 PM IST
ಧಾರವಾಡ: ಯೋಗವು ನಮ್ಮ ಪ್ರಾಚೀನ ಪರಂಪರೆ ಮತ್ತು ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ವಿಶ್ವಸಂಸ್ಥೆಯು ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗದಿನ ಆಚರಿಸಲು ನಿರ್ಣಯ ಕೈಗೊಂಡಿರುವುದು ಯೋಗದ ಮಹತ್ವಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ|ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು.
ಭಾರತ ಸರಕಾರದ ಆಯುಷ್ ಮಂತ್ರಾಲಯದ ಯೋಗ ಮತ್ತು ನಿಸರ್ಗ ಚಿಕಿತ್ಸಾ ಸಂಶೋಧನಾ ಸಂಸ್ಥೆ ಸ್ಥಳೀಯ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಇಲ್ಲಿನ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಉಚಿತ ಯೋಗ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ನಿತ್ಯ ಚಟುವಟಿಕೆಗಳಿಗೆ ಮತ್ತು ವಿದ್ಯಾರ್ಥಿಗಳ ಅಧ್ಯಯನದಲ್ಲಿ ಏಕಾಗ್ರತೆ ಕಂಡುಕೊಳ್ಳಲು ಯೋಗಾಭ್ಯಾಸ ಪೂರಕವಾಗಿದೆ. ನಾನು ಈ ಹಿಂದೆ ಧಾರವಾಡದ ಅಪರ ಜಿಲ್ಲಾ ಧಿಕಾರಿಯಾಗಿದ್ದ ವೇಳೆ ಕವಿವಿಯಿಂದ ಯೋಗ ಸರ್ಟಿμಕೇಟ್ ಕೋರ್ಸ್ ಮಾಡಿದ್ದೇನೆ. ಶಾರೀರಿಕ, ಮಾನಸಿಕ ಆರೋಗ್ಯ ನಿರ್ವಹಣೆಗೆ ಯೋಗ ಸಹಕಾರಿಯಾಗಿದೆ.
ಪರಿಣಿತ ಯೋಗ ಗುರುಗಳ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡುವುದು ಅಗತ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಸಾವಿತ್ರಿ ಮಹಿಷಿ ಮಾತನಾಡಿ, ಸಮಾಜಮುಖೀ ಕಾರ್ಯಗಳಿಗೆ ಮಹಿಷಿ ಟ್ರಸ್ಟ್ ಕೈಜೋಡಿಸುತ್ತದೆ. ಅಂತಾರಾಷ್ಟ್ರೀಯ ಯೋಗ ದಿನ ಅಂಗವಾಗಿ ಜಿಲ್ಲೆಯ ವಿವಿಧ 75 ಕೇಂದ್ರಗಳಲ್ಲಿ 15 ದಿನಗಳ ಕಾಲ ಯೋಗ ಶಿಬಿರ ನಡೆಯುತ್ತಿವೆ. ಸಾರ್ವಜನಿಕರು ಅ ಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಜಿಲ್ಲಾ ಆಯುಷ್ ಅ ಧಿಕಾರಿ ಡಾ|ಜಿ.ಡಿ.ಪವಾರ್, ಡಾ|ಶ್ರೀಶೈಲ ಚೌಗಲಾ ಮಾತನಾಡಿದರು. ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಅಧ್ಯಕ್ಷ ಶಂಕರ ಕುಂಬಿ, ರಮೇಶ ಸುಲಾಖೆ, ಎಸ್.ಎಚ್.ಪಾಟೀಲ, ರಾಮಚಂದ್ರ ಧೋಂಗಡೆ, ಡಾ|ಎಸ್.ಆರ್. ರಾಮನಗೌಡ್ರ, ಹೆಚ್.ಡಿ.ಟಕ್ಕಳಕಿ ಇದ್ದರು. ಇಂದಿರಾ ಹಾಗೂ ಸಪ್ನಾ ಪ್ರಾರ್ಥಿಸಿದರು. ಜಗದೀಶ ಮಳಗಿ ನಿರೂಪಿಸಿದರು. ಎಂ.ಡಿ.ಪಾಟೀಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.