ಜಿಪಂ ಆಡಳಿತಗಾರರ ಅಹೋರಾತ್ರಿ ಧರಣಿ

Team Udayavani, Dec 18, 2019, 10:25 AM IST

huballi-tdy-2

ಧಾರವಾಡ: ಮುಖ್ಯ ಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಬುಧವಾರ ಆಗಮಿಸಲಿದ್ದು, ಈ ನಡುವೆಯೇ ಜಿಲ್ಲಾಡಳಿತ ಹಾಗೂ ಅಧಿಕಾರಿಗಳ ವಿರುದ್ಧ ಆಡಳಿತಾರೂಢ ಕಾಂಗ್ರೆಸ್‌ನ ಜಿಪಂ ಅಧ್ಯಕ್ಷ-ಉಪಾಧ್ಯಕ್ಷರು ಮಂಗಳವಾರ ಸಂಜೆಯಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಸೇರಿದಂತೆ ಬಹುತೇಕ ಕಾಂಗ್ರೆಸ್‌ ಪಕ್ಷದ ಜಿಪಂ ಸದಸ್ಯರು ಜಿಪಂ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೂ ಅಧಿಕಾರಿಗಳೊಂದಿಗೆ ಹಾಗೂ ಸಿಇಒ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಯಾರಿಂದಲೂ ಸರಿಯಾದ ಉತ್ತರ ಹಾಗೂ ಸ್ಪಂದನೆ ಸಿಗದ ಕಾರಣ ಸಂಜೆ 4 ಗಂಟೆಯಿಂದ ಜಿಪಂ ಕಚೇರಿ ಪ್ರವೇಶ ದ್ವಾರದಲ್ಲಿ ಕುಳಿತು ಧರಣಿ ಕೈಗೊಂಡಿದ್ದಾರೆ. ಇದಕ್ಕೆ ಸ್ಥಾಯಿ ಸಮಿತಿ ಅಧ್ಯಕ್ಷ ನಿಂಗಪ್ಪ ಘಾಟಿನ್‌, ಜಿ.ಪಂ ಸದಸ್ಯರಾದ ಅನ್ನಪ್ಪ ದೇಸಾಯಿ, ಚನ್ನಬಸಪ್ಪ ಮಟ್ಟಿ, ರೇಣುಕಾ ಇಬ್ರಾಹಿಂಪುರ ಸೇರಿದಂತೆ ಹಲವರು ಸದಸ್ಯರು ಸಾಥ್‌ ನೀಡಿದ್ದಾರೆ. ಜಿಪಂ ಸಿಇಒ ಡಾ| ಸತೀಶ ಅವರು 2-3 ಸಲ ಮನವೊಲಿಸಲು ಪ್ರಯತ್ನಿಸಿದರೂ ಪಟ್ಟು ಸಡಿಸಲದೇ ಧರಣಿ ಮುಂದುವರಿಸಿದ್ದಾರೆ.

ಕೊನೆಗೆ ಡಿಸಿ ದೀಪಾ ಅವರೊಂದಿಗೂ ಮಾತನಾಡಿದ ಸಿಇಒ, ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಡಿಸಿ ಅವರ ಸೂಚನೆ ಅನ್ವಯ ಮತ್ತೆ ಮನವಿ ಮಾಡಿದ ಸಿಇಒ, ಬುಧವಾರ ಈ ಬಗ್ಗೆ ಚರ್ಚಿಸಿ ಬಗೆಹರಿಸುವ ಬಗ್ಗೆ ಡಿಸಿ ಭರವಸೆ ನೀಡಿದ್ದಾರೆ. ಹೀಗಾಗಿ ಧರಣಿ ಕೈಬಿಡುವಂತೆ ಮನವಿ ಮಾಡಿದ್ದಾರೆ. ಇದಕ್ಕೂ ಮಣಿಯದ ಪ್ರತಿಭಟನಾನಿರತರು, ಕಳೆದ ಎರಡು ತಿಂಗಳಿಂದ ಮನವಿ ಮಾಡಿ ಗಮನ ಸೆಳೆದರೂ ಸ್ಪಂದಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಂದಲೂ ಹೇಳಿದರೂ ಬೆಲೆ ನೀಡಿಲ್ಲ. ಹೀಗಾಗಿ ನಾವು ಧರಣಿ ಕೈಬಿಡಲ್ಲ ಎಂದು ಸ್ಪಷ್ಟಪಡಿಸಿದರು.

ನೆರೆ ಪರಿಹಾರ ಕಾಮಗಾರಿ ವಿತರಣೆಯಲ್ಲಿ ನಮ್ಮನ್ನು ಪರಿಗಣಿಸಿಲ್ಲ. ಶಾಸಕರಿಗೆ ಅಷ್ಟೇ ಆದ್ಯತೆ ನೀಡಿದ್ದು, ಶಾಸಕರ ಸೂಚನೆಯ ಅನುಸಾರ ಕಾಮಗಾರಿಗಳನ್ನು ನೀಡಲಾಗಿದೆ. ಈ ಬಗ್ಗೆ ಜಿಪಂ ಸಿಇಒ, ಡಿಸಿ ಅವರಿಂದ ಹಿಡಿದು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಮನವಿ ಸಲ್ಲಿಸಿದ್ದು, ನೇರವಾಗಿ ನಿಯೋಗ ತೆರಳಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಈಗಾಗಲೇ ಜಿಪಂ ವ್ಯಾಪ್ತಿಯಲ್ಲಿನ ನೆರೆ ಪರಿಹಾರ ಕಾಮಗಾರಿಗಳ ಪೈಕಿ ಅರ್ಧದಷ್ಟು ಕಾಮಗಾರಿ ಆರಂಭಿಸಿದ್ದು, ಇನ್ನೊಂದಿಷ್ಟು ಉಳಿದುಕೊಂಡಿದೆ. ನೆರೆ ಪರಿಹಾರದ ಅನುದಾನ, ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಗೆ ಕೇಳಿದರೆ ಯಾರೂ ಸ್ಪಂದಿಸುತ್ತಿಲ್ಲ. ಹೀಗಾಗಿ ನಮಗೆ ಆಗಿರುವ ಅನ್ಯಾಯ ಸರಿಪಡಿಸುವವರೆಗೂ ಧರಣಿ ಕೈಗೊಳ್ಳುವುದಾಗಿ ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಹಾಗೂ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.