ಮಾದಕ ವಸ್ತು ಸಾಗಾಟ: ಇಬ್ಬರು ಆರೋಪಿಗಳ ಬಂಧನ
Team Udayavani, Mar 24, 2019, 12:37 PM IST
ಬೆಂಗಳೂರು: ಟಿಫಿನ್ ಬಾಕ್ಸ್ನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಾದಕ ವಸ್ತು ನಿಯಂತ್ರಣ ದಳ(ಎನ್ಸಿಬಿ) ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆ ನಿವಾಸಿ ನೌಶಿರ್ ಮೊಹಮ್ಮದ್(29), ಕೇರಳದ ಮಣ್ಣಪುರಂನ ಎಂ.ನೌಶಾದ್(24) ಬಂಧಿತರು. ಆರೋಪಿಗಳಿಂದ 965 ಗ್ರಾಂ ಅಫೀಮು, 30 ಗ್ರಾಂ ಕೊಕೇನ್, 4.525 ಕೆ.ಜಿ. ಹಾಶಿಶ್ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಓಮನ್ ಏರ್ವೆಸ್ ಮೂಲಕ ಕತರ್ನ ದೋಹಾಕ್ಕೆ ಮಾದಕ ವಸ್ತು ಸಾಗಾಟ ಮಾಡಲು ಯತ್ನಿಸಿದ್ದರು.
ಈ ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ತಪಾಸಣೆಗೊಳಪಡಿಸಿದಾಗ ಅವರ ಬ್ಯಾಗ್ಗಳಲ್ಲಿದ್ದ ಟಿಫಿನ್ ಬಾಕ್ಸ್ಗಳಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಕೂಡಲೇ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎನ್ಸಿಬಿ ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.