ಎರಡನೇ ಅಲೆಯಲ್ಲಿ  105 ಜನ ಬಲಿ

ಈ ಬಾರಿ ಸತ್ತವರಲ್ಲಿ ಮಹಿಳೆಯರೇ ಹೆಚ್ಚು­, 2ನೇ ಅಲೆಯಲ್ಲಿ 12419 ಜನರಿಗೆ ಸೋಂಕು

Team Udayavani, May 31, 2021, 8:06 PM IST

45

ಗದಗ: ಜಿಲ್ಲೆಯಲ್ಲಿ ದಿನಕಳೆದಂತೆ ಕೊರೊನಾ ಸೊಂಕಿತರ ಸಂಖ್ಯೆ ಇಳಿಮುಖವಾಗಿದ್ದರೂ, ಎರಡನೇ ಅಲೆ ತೀವ್ರವಾಗಿ ಭಾದಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 2ನೇ ಅಲೆಯಲ್ಲಿ ಸೋಂಕಿನ ತೀವ್ರತೆ ಮತ್ತು ಮೃತರ ಸಂಖ್ಯೆಯೂ ಹೆಚ್ಚಿರುವುದು ಆತಂಕಕಾರಿ ಬೆಳವಣಿಗೆ.

ಕಳೆದ ವರ್ಷ ಅಕ್ಟೋಬರ್‌ ನಿಂದ 2021ರ ಏಪ್ರಿಲ್‌ವರೆಗೆ ತಿಂಗಳಿಗೆ ಬೆರಳೆಣಿಕೆಯಷ್ಟು ಸೋಂಕು ಕಂಡು ಬರುತ್ತಿತ್ತು. ಆದರೆ ಕೋವಿಡ್‌ ಸೋಂಕಿನಿಂದ ಯಾರೊಬ್ಬರೂ ಮೃತಪಟ್ಟಿರಲಿಲ್ಲ. ಆದರೆ ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆ ಏಪ್ರಿಲ್‌ ನಿಂದ ಗಗನಮುಖೀಯಾಗಿದೆ. 2020ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ 6778 ಪುರುಷ ಮತ್ತು 4129 ಮಹಿಳೆಯರು ಸೇರಿದಂತೆ ಒಟ್ಟು 10907 ಜನರು ಸೋಂಕಿಗೆ ಒಳಗಾಗಿದ್ದರು. ಆದರೆ 2ನೇ ಅಲೆಯಲ್ಲಿ 12419 ಜನರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಈ ಬಾರಿ ಗ್ರಾಮೀಣ ಭಾಗಕ್ಕೂ ವಿಸ್ತರಿಸಿದೆ.

ಜಿಲ್ಲೆಯ ಒಟ್ಟು ಸೋಂಕಿತರಲ್ಲಿ ಶೇ. 55ರಷ್ಟು ಜನರು ಗ್ರಾಮೀಣ ಭಾಗಕ್ಕೆ ಸೇರಿದವರು ಎನ್ನಲಾಗಿದೆ. ಮೃತರಲ್ಲಿ ಮಹಿಳೆಯರೇ ಹೆಚ್ಚು: ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಈ ಬಾರಿ ಮೃತರಲ್ಲಿ ಮಹಿಳೆಯರ ಸಂಖ್ಯೆಯೇ ಹೆಚ್ಚಿದೆ. 2020ರಲ್ಲಿ ಆರಂಭಗೊಂಡ ಮೊದಲ ಅಲೆಯಲ್ಲಿ ಒಟ್ಟು 141 ಜನರು ಕೊನೆಯುಸಿರೆಳೆದಿದ್ದಾರೆ. ಅದರಲ್ಲಿ ಶೇ.77 ಪುರುಷ, ಶೇ.23 ಮಹಿಳೆಯರು ಮೃತಪಟ್ಟಿದ್ದರು. ಕೊರೊನಾ 2ನೇ ಅಲೆಯಲ್ಲಿ ಏಪ್ರಿಲ್‌-ಮೇ ಈ ಎರಡು ತಿಂಗಳಲ್ಲಿ ಒಟ್ಟು 105 ಜನರು ಮೃತಪಟ್ಟಿದ್ದಾರೆ. ಈ ಪೈಕಿ ಶೇ.54 ಮಹಿಳೆಯರೇ ಮಹಾಮಾರಿಗೆ ಬಲಿಯಾಗಿದ್ದಾರೆ.

ಸೋಂಕಿನ ನಿರ್ಲಕ್ಷ್ಯದಿಂದ ಸಾವು: ಮೊದಲ ಅಲೆಯಲ್ಲಿ ಜನರಲ್ಲಿ ಸಾಮಾನ್ಯವಾಗಿ ಕೆಮ್ಮು, ನೆಗಡಿಯಂತಹ ಕೋವಿಡ್‌ ಲಕ್ಷಣಗಳು ಕಂಡು ಬರುತ್ತಿದ್ದವು. ಆದರೆ 2ನೇ ಅಲೆಯಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡು ಬರದಿದ್ದರೂ ಸೋಂಕು ಖಚಿತವಾಗುತ್ತಿದೆ.

ಇನ್ನೂ ಕೆಲವರಿಗೆ ರೋಗ ಲಕ್ಷಣಗಳಿದ್ದರೂ, ಆರ್‌ಟಿಪಿಸಿಆರ್‌ನಲ್ಲಿ ವರದಿ ನೆಗೆಟಿವ್‌ ಆಗಿರುತ್ತದೆ. ಈ ಹಂತದಲ್ಲಿ ಅನೇಕರು ನಿರ್ಲಕ್ಷ್ಯ ತೋರುವುದರಿಂದ ಆಪತ್ತಿಗೊಳಗಾಗುತ್ತಿದ್ದಾರೆ. ಆನಂತರ ಸೋಂಕಿನ ಲಕ್ಷಣಗಳು ತೀವ್ರಗೊಂಡಾಗ ನಡೆಸುವ ಸಿಟಿ ಸ್ಕ್ಯಾನ್‌ನಲ್ಲಿ ಕೋವಿಡ್‌ ಕಂಡು ಬರುತ್ತಿದೆ. ಈ ಹಂತದಲ್ಲಿ ತಕ್ಷಣಕ್ಕೆ ಅಗತ್ಯ ಚಿಕಿತ್ಸೆ ದೊರೆಯದಿರುವುದು, ಚಿಕಿತ್ಸೆಗೆ ರೋಗಿ ಸ್ಪಂದಿಸದೇ ಸಾಯುತ್ತಿದ್ದಾರೆ.

ಇನ್ನು ಸಕ್ಕರೆ ಕಾಯಿಲೆಯಂತಹ ಗಂಭೀರ ಕಾಯಿಲೆ, ನಿಮೋನಿಯಾ ಹಾಗೂ ಹೃದಯ ಸಂಬಂ ಧಿತ ಕಾರಣಗಳಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚಿದೆ ಎನ್ನುತ್ತಾರೆ ಜಿಮ್ಸ್‌ ಆಸ್ಪತ್ರೆ ವೈದ್ಯರು. ಕಳೆದ 10 ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದರೂ ಸಾವಿನ ಸರಣಿ ನಿಲ್ಲುತ್ತಿಲ್ಲ. ಪ್ರತಿನಿತ್ಯ ನಾಲ್ಕ್ಐದು ಜನರು ಕೊನೆಯುಸಿರೆಳೆಯುತ್ತಿರುವುದು ಸಾರ್ವಜನಿಕರಲ್ಲಿ ಆಂತಕ ಹೆಚ್ಚಿಸಿದೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.