ಲಕ್ಷ್ಮೇಶ್ವರದಲ್ಲಿ ಮತ್ತೆರೆಡು ಪ್ರಕರಣ
Team Udayavani, Jul 4, 2020, 4:27 PM IST
ಲಕ್ಷ್ಮೇಶ್ವರ: ಪಟ್ಟಣದ ಖಾಸಗಿ ಆಸ್ಪತ್ರೆ ಸಿಬ್ಬಂದಿ ಮತ್ತು ತಾಲೂಕಿನ ಗೊಜನೂರ ಗ್ರಾಮದ ಗರ್ಭಿಣಿ ಸೇರಿ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಜೂ. 27ರಂದು 2 ಪ್ರಕರಣ ದೃಢಪಟ್ಟ ನಂತರ ಶುಕ್ರವಾರ ಮತ್ತೆರೆಡು ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ತಾಲೂಕಿನ ಜನರಲ್ಲಿ ಆತಂಕ ಮನೆ ಮಾಡಿದೆ.
ಖಾಸಗಿ ಆಸ್ಪತ್ರೆ ಸಿಬ್ಬಂದಿಯಾಗಿರುವ ಮಹಿಳೆ ಪಟ್ಟಣದ ಹೊಸ ಬಸ್‌ನಿಲ್ದಾಣದ ಹತ್ತಿರದ ಬಸವೇಶ್ವರ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಶುಕ್ರವಾರ ತಾಲೂಕಾಡಳಿತದ ಸೂಚನೆಯಂತೆ ಪುರಸಭೆ ಸಿಬ್ಬಂದಿ ಹೈಡ್ರೋಕ್ಲೋರೈಡ್ ದ್ರಾವಣ ಸಿಂಪಡಿಸಿ 100 ಮೀಟರ್ ಸುತ್ತಲಿನ ಪ್ರದೇಶ ಸೀಲ್‌ಡೌನ್ ಮಾಡಿದ್ದಾರೆ. ಗೊಜನೂರ ಗ್ರಾಮದ ಗರ್ಭಿಣಿಗೂ ಕೋವಿಡ್ ಸೋಂಕು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದು, ಗರ್ಭಿಣಿ ವಾಸಿಸುತ್ತಿದ್ದ ಪ್ರದೇಶವನ್ನು ಗ್ರಾಪಂನವರು ಸೀಲ್‌ಡೌನ್ ಮಾಡಿದ್ದಾರೆ.
ತಹಶೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟಿ ಅವರು ಸ್ಥಳಕ್ಕೆ ಆಗಮಿಸಿ, ಮನೆಯಿಂದ ಹೊರಬರದೇ ಜಾಗರೂಕತೆಯಿಂದ ವರ್ತಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್ ಮಾಡಿ ಅವರ ಆರೋಗ್ಯ ಪರೀಕ್ಷೆ ಮಾಡಲಾಗುವುದು. ಆರೋಗ್ಯದಲ್ಲಿ ವ್ಯತ್ಯಾಸವಾದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.