5 ಕಿಮೀ ವ್ಯಾಪ್ತಿ ಪ್ರದೇಶ ಬಫರ್ ಝೋನ್: ಡಿಸಿ ಹಿರೇಮಠ
Team Udayavani, Apr 20, 2020, 5:57 PM IST
ಗದಗ: ಜಿಲ್ಲೆಯ ಗದಗ- ಬೆಟಗೇರಿ ನಗರಸಭೆಯ ವಾರ್ಡ್ 31 ರ ರಂಗನವಾಡ ಓಣಿ, ದತ್ತಾತ್ರೇಯ ಗುಡಿ, ಉರ್ದು ಶಾಲೆ ಹಾಗೂ ಎಸ್. ಎಂ.ಕೆ ನಗರದ ಸುತ್ತಲಿನ 100 ಮೀ ಪ್ರದೇಶವನ್ನು ಕೊವಿಡ್-19 ತಡೆಗಟ್ಟುವ ಕ್ರಮವಾಗಿ ತಕ್ಷಣದಿಂದ ಮುಂದಿನ ಆದೇಶದವರೆಗೆ ನಿಯಂತ್ರಿತ (ಕಂಟೇನ್ಮೆಂಟ್) ಪ್ರದೇಶವೆಂದು ಮತ್ತು ಕಂಟೈನ್‌ಮೆಂಟ್ ಪ್ರದೇಶದ ವ್ಯಾಪ್ತಿಯ ಸುತ್ತಲಿನ 5 ಕಿ.ಮೀ ವ್ಯಾಪ್ತಿಯ ಸುತ್ತಳತೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಿ, ಗದಗ ಉಪ ವಿಭಾಗೀಯ ದಂಡಾಧಿಕಾರಿಗಳನ್ನು ಇನ್ಸಿಂಡೆಂಟ್ ಕಮಾಂಡರ್ ಎಂದು ನೇಮಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೌತಿಕ ನಿಬಂಧನೆಗಳನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.
ನಿಯಂತ್ರಿತ ಪ್ರದೇಶದಿಂದ ಇತರೆ ಪ್ರದೇಶಗಳಿಗೆ ಕರ್ತವ್ಯ ನಿರತ ಅಧಿಕಾರಿ ಸಿಬ್ಬಂದಿ ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿ ಸಿದೆ. ಕಂಟೈನ್‌ಮೆಂಟ್ ಝೋನ್ ಸುತ್ತ ಘೋಷಣೆ ಮಾಡಲಾದ 5 ಕಿ.ಮಿ ಬಫರ್ ಝೋನ್ ಮೊದಲ 1 ಕಿ.ಮೀ ಸುತ್ತಳತೆಯ ವ್ಯಾಪ್ತಿಯಲ್ಲಿ ಮನೆ-ಮನೆಗೆ ತೀವ್ರ ತೆರನಾದ ಆರೋಗ್ಯ ಪರೀಕ್ಷೆಗಳು ಕಡ್ಡಾಯವಾಗಿ ನಡೆಯತಕ್ಕದ್ದು. ನಿಯಂತ್ರಿತ ವಲಯಗಳಲ್ಲಿ ಎಲ್ಲ ದಿನಸಿ ಅಂಗಡಿಗಳು, ಹಾಲಿನ ಅಂಗಡಿಗಳು, ಮಾಂಸ, ಔಷಧ ಸೇರಿದಂತೆ ಎಲ್ಲ ಅಂಗಡಿಗಳನ್ನು ಕಡ್ಡಾಯವಾಗಿ ಬಂದ್ ಮಾಡುವುದು. ನಿಯಂತ್ರಿತ ವ್ಯಾಪ್ತಿ ಪ್ರದೇಶಗಳಲ್ಲಿ ಧಾರ್ಮಿಕ ಉರುಸು, ಜಾತ್ರೆ, ಮೆರವಣಿಗೆ, ಜನ ಗುಂಪು ಸೇರುವಿಕೆ, ಸಭೆ ಅಥವಾ ಮದುವೆ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಆದೇಶವನ್ನು ಉಲ್ಲಂಘಿಸಿದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ- 2005 ರನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.