ಮೊದಲ ಹಂತದಲ್ಲಿ 500 ಮನೆ ವಿತರಣೆ
•ಗಂಗಿಮಡಿಯಲ್ಲಿನ ವಸತಿ ಸಮುಚ್ಛಯ ಕಾಮಗಾರಿ ಪರಿಶೀಲನೆ
Team Udayavani, Jun 12, 2019, 10:24 AM IST
ಗದಗ: ಗಂಗಿಮಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಸತಿ ಯೋಜನೆ ಕಾಮಗಾರಿಯನ್ನು ಶಾಸಕ ಎಚ್.ಕೆ. ಪಾಟೀಲ ಪರಿಶೀಲಿಸಿದರು.
ಗದಗ: ಇಲ್ಲಿನ ಗಂಗಿಮಡಿಯಲ್ಲಿ ನಿರ್ಮಿಸಲಾಗುತ್ತಿರುವ ವಸತಿ ಸಮುಚ್ಛಯದಡಿ ಮೂರು ತಿಂಗಳಲ್ಲಿ ಮೊದಲ ಹಂತವಾಗಿ 500 ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುತ್ತದೆ ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು.
ನಗರದ ಗಂಗಿಮಡಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಿಸಲಾಗುತ್ತಿರುವ ವಸತಿ ಸಮುಚ್ಛಯ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಗಂಗಿಮಡಿಯಲ್ಲಿ ನೆಲ ಹಾಗೂ ಮೊದಲ ಮಹಡಿ ಸೇರಿದಂತೆ ಒಟ್ಟು 3630 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಈ ಪೈಕಿ 412 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಸುಣ್ಣ-ಬಣ್ಣ ಬಾಕಿ ಇವೆ. 1500 ಮನೆಗಳು ಪ್ಲಿಂತ್ ಲೇವಲ್, 720 ಮನೆಗಳು ಫ್ಲೋರಿಂಗ್, 998 ಮನೆಗಳು ತರ ತೆಗೆಯುವ ಹಂತದಲ್ಲಿವೆ.
ಮೋಲ್ಡ್ಗಳನ್ನು ಬಳಸಿ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ದಿನಕ್ಕೆ 6 ಮನೆಗಳು ಪೂರ್ಣಗೊಳ್ಳುತ್ತಿವೆ. ಆದರೆ, ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಮನೆಗಳನ್ನು ಕಲ್ಪಿಸುವ ಉದ್ದೇಶದಿಂದ ದಿನವೊಂದಕ್ಕೆ ಕನಿಷ್ಠ 10 ಮನೆಗಳನ್ನು ನಿರ್ಮಿಸುವಂತೆ ಸೂಚನೆ ನೀಡಿದ್ದು, ಅದರಂತೆ ಮುಂದಿನ ಮೂರು ತಿಂಗಳಲ್ಲಿ ಮೊದಲ ಹಂತದಲ್ಲಿ ಸುಮಾರು 500 ಮನೆಗಳು ಪೂರ್ಣಗೊಳ್ಳಲಿವೆ ಎಂದು ವಿವರಿಸಿದರು.
ಸದ್ಯ, ವಾಸಕ್ಕೆ ಯೋಗ್ಯವಿಲ್ಲದಂತಹ ಮುರುಕಲು ಗುಡಿಸಲುಗಳಲ್ಲಿ ನೆಲೆಸಿದವರಿಗೆ ಮೊದಲ ಹಂತದ ಮನೆ ಹಂಚಿಕೆಯಲ್ಲಿ ಆದ್ಯತೆ ನೀಡಲಾಗುತ್ತದೆ. ಬಳಿಕ ಶೆಡ್‌ಗಳಲ್ಲಿ ವಾಸವಿರುವವರು, ಆ ನಂತರ ಸ್ವಂತ ಮನೆ ಇಲ್ಲದೇ ಬಾಡಿಗೆ ಮನೆಗಳಲ್ಲಿ ವಾಸವಿರುವವರನ್ನು ಪರಿಗಣಿಸಲಾಗುತ್ತದೆ. ಸರಕಾರಿ ನಿಯಾಮಾವಳಿಯಂತೆ ವಿಕಲಚೇತನರು, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿನ ಸಾಧಕರಿಗೂ ಅಲ್ಪಸ್ವಲ್ಪ ಅವಕಾಶ ಕಲ್ಪಿಸಲಾಗುತ್ತದೆ ಎಂದರು.
ಮನೆಗಳ ಹಂಚಿಕೆಗೂ ಮುನ್ನವೇ ಕುಡಿಯುವ ನೀರು, ಸಿಸಿ ರಸ್ತೆ, ಗ್ಯಾಸ್ ಸಂಪರ್ಕ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಅದಕ್ಕಾಗಿ ಹೆಚ್ಚುವರಿಯಾಗಿ 50 ಕೋಟಿ ರೂ. ಅನುದಾನ ನೀಡುವಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಜಿಲ್ಲಾಕಾರಿ ಎಂ.ಜಿ. ಹಿರೇಮಠ, ಎಸ್ಪಿ ಶ್ರೀನಾಥ ಜೋಶಿ, ನಗರಸಭೆ ಅಭಿಯಂತರರಾದ ಎಲ್.ಜಿ.ಪತ್ತಾರ, ಬಂಡಿವಡ್ಡರ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರಭು ಬುರುಬುರೆ ಸೇರಿದಂತೆ ನಗರಸಭೆ ವಸತಿ ವಿಭಾಗದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.