ಗದಗ ಜಿಲ್ಲೆಯ 7 ಜನರಿಗೆ ಕೋವಿಡ್ ಸೋಂಕು ದೃಢ
Team Udayavani, Jul 6, 2020, 4:19 PM IST
ಗದಗ: ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 7 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 210ಕ್ಕೆ ಏರಿಕೆಯಾಗಿದೆ. ಈ ಪೈಕಿ 84 ಜನ ಗುಣಮುಖರಾಗಿದ್ದು, ಸದ್ಯ ಜಿಲ್ಲೆಯಲ್ಲಿ 122 ಸಕ್ರಿಯ ಪ್ರಕರಣಗಳಿವೆ.
ಇತ್ತೀಚೆಗೆ ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಮದೇನಗುಡಿ ಗ್ರಾಮದ ನಿವಾಸಿ 35 ವರ್ಷದ ವ್ಯಕ್ತಿ (ಪಿ.23121) ಹಾಗೂ ಜೂ. 30ರಂದು ಮಹಾರಾಷ್ಟ್ರದಿಂದ ಜಿಲ್ಲೆಗೆ ಮರಳಿರುವ ಬೆಟಗೇರಿ ನಗರದ ಕುರಟ್ಟಿಪೇಟೆ ನಿವಾಸಿ 33 ವರ್ಷದ ವ್ಯಕ್ತಿ (ಪಿ.23122)ಗೆ ಸೋಂಕು ದೃಢಪಟ್ಟಿದೆ. ಹುಬ್ಬಳ್ಳಿ ನವನಗರ ಸಾರಿಗೆ ವಿಭಾಗದ ಬಸ್ ಕಂಡಕ್ಟರ್ ಆಗಿರುವ ನರಗುಂದ ಪಟ್ಟಣದ ಗಾಡಿ ಓಣಿ ನಿವಾಸಿ 39 ವರ್ಷದ ವ್ಯಕ್ತಿ(ಪಿ.15320) ಯಿಂದ ಅದೇ ಪ್ರದೇಶದ ನಿವಾಸಿ 45 ವರ್ಷದ ಮಹಿಳೆ(ಪಿ.23123)ಗೆ, 57 ವರ್ಷದ ಮಹಿಳೆ (ಪಿ. 23125), 32 ವರ್ಷದ ವ್ಯಕ್ತಿ (ಪಿ.23126)ಗೆ ಸೋಂಕು ತಗುಲಿದೆ. ಬಳ್ಳಾರಿಯಿಂದ ಜಿಲ್ಲೆಯ ಮುಂಡರಗಿ ತಾಲೂಕಿನ ಸೀರನಹಳ್ಳಿ ಗ್ರಾಮಕ್ಕೆ ವಾಪಸ್ಸಾಗಿರುವ 20 ವರ್ಷದ ಮಹಿಳೆ (ಪಿ.23124)ಗೆ ಸೋಂಕು ದೃಢಪಟ್ಟಿದೆ.
ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ರೋಣ ತಾಲೂಕಿನ ಸಂದಿಗವಾಡ ಗ್ರಾಮದ 39 ವರ್ಷದ ಪುರುಷ (ಪಿ.23127)ಗೆ ಸೋಂಕು ದೃಢಪಟ್ಟಿರುತ್ತದೆ. ಗ್ರಾಮದ ವ್ಯಕ್ತಿಯೊಬ್ಬರಿಗೆ ಕೋವಿಡ್ ಸೋಂಕು ದೃಢಪಡುತ್ತಿದ್ದಂತೆ ಗ್ರಾಪಂ ಅಧಿಕಾರಿಗಳು ಗ್ರಾಮದ ಪ್ರಮುಖ ರಸ್ತೆಗಳಿಗೆ ಮುಳ್ಳಿನ ಕಂಠಿ ಹಾಕಿ, ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದಾರೆ. ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.