ಜಿಲ್ಲೆಯ 98 ಜನರಿಗೆ ಸೋಂಕು ಪತ್ತೆ
Team Udayavani, Aug 14, 2020, 12:24 PM IST
ಗದಗ: ಜಿಲ್ಲೆಯಲ್ಲಿ ಗುರುವಾರ 98 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2645ಕ್ಕೆ ಏರಿದೆ. ಅದರಲ್ಲಿ ಗುರುವಾರ 50 ಜನ ಸೇರಿದಂತೆ 1446 ಜನರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯ ಗದಗ-38, ಮುಂಡರಗಿ-14, ನರಗುಂದ-22, ರೋಣ-06, ಶಿರಹಟ್ಟಿ-15, ಹೊರಜಿಲ್ಲೆಯ ಮೂವರಿಗೆ ಹೊಸದಾಗಿ ಕೋವಿಡ್ ಸೋಂಕು ಖಚಿತವಾಗಿದೆ.
ಮತ್ತಿಬ್ಬರು ಬಲಿ: ಕೋವಿಡ್ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತಿಬ್ಬರು ಬಲಿಯಾಗಿದ್ದು, ಒಟ್ಟು ಜಿಲ್ಲೆಯಲ್ಲಿ ಒಟ್ಟು 52 ಜನರು ಸೊಂಕಿನಿಂದ ಮೃತಪಟ್ಟಂತಾಗಿದೆ. ಮುಂಡರಗಿ ಪಟ್ಟಣದ ಜೆ.ಎಚ್. ಪಟೇಲ್ ನಗರದ ನಿವಾಸಿ 60 ವರ್ಷದ ವೃದ್ಧ(ಪಿ-198969) ಆ. 11ರಂದು ಸೋಂಕು ದೃಢಪಟ್ಟಿದ್ದು, ಸಕ್ಕರೆ ಕಾಯಿಲೆ ಹಾಗೂ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಗದಗ ನಗರದ ವಿಶ್ವೇಶ್ವರಯ್ಯ ನಗರದ ನಿವಾಸಿ 55 ವರ್ಷದ ಮಹಿಳೆ(ಪಿ-145148)ಗೆ ಆ. 2ರಂದು ಸೋಂಕು ದೃಢಪಟ್ಟಿದ್ದು, ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಆ. 11ರಂದು ಕೊನೆಯುಸಿರೆಳೆದಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.
ರೋಣ ಆಸ್ಪತ್ರೆ ಸೀಲ್‌ಡೌನ್ : ಶ್ರೀನಗರ ಬಡಾವಣೆ ಕೊರೊನಾ ಸೋಂಕಿತ ಗುರುವಾರ ಪಟ್ಟಣದ ಭಾರತರತ್ನ ಡಾ| ಭೀಮಸೇನ ಜೋಶಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ಶನಿವಾರ ಬೆಳಗಿನವರೆಗೆ ಆಸ್ಪತ್ರೆ ಸೀಲ್‌ಡೌನ್ ಮಾಡಲಾಗಿದೆ. ಸೊಂಕಿತನ ಮೃತ ದೇಹವನ್ನು ಕೋವಿಡ್-19 ನಿಯಮಾವಳಿಯಂತೆ ಆಸ್ಪತ್ರೆ, ಪುರಸಭೆ ಸಿಬ್ಬಂದಿ ಅಂತ್ಯಕ್ರಿಯೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.